ಮೆಕ್ಸಿಕೋ | ಧಾರ್ಮಿಕ ಆಚರಣೆ ವೇಳೆ ಸಾಮೂಹಿಕ ಗುಂಡಿನ ದಾಳಿ, 12 ಜನರ ಸಾವು

Date:

ಮೆಕ್ಸಿಕೋ ನಗರದ ಗ್ವಾನಾಜುವಾಟೊ ನಗರದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, 12 ಜನರು ಸಾವನ್ನಪ್ಪಿದ್ದಾರೆ.

ಬುಧವಾರ ನಡೆಯುತ್ತಿದ್ದ ಧಾರ್ಮಿಕ ಆಚರಣೆ ಸಂದರ್ಭದ ವೇಳೆ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇರಾಪುವಾಟೊ ನಗರದಲ್ಲಿ ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಆಚರಣೆಯ ವೇಳೆ ಜನರು ಬೀದಿಯಲ್ಲಿ ನೃತ್ಯ ಹಾಗೂ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಬಂದೂಕುಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮೋಜು ಮಾಡುತ್ತಿದ್ದ ಜನರು ಇದ್ದಕ್ಕಿದ್ದಂತೆ ಆತಂಕದಲ್ಲಿ ದಾಳಿಯಿಂದ ತಪ್ಪಿಸಿಕೊಳ್ಳಲು, ಓಡಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೆಕ್ಸಿಕೋ ನಗರದ ವಾಯುವ್ಯದಲ್ಲಿರುವ ಗುವಾಂಜುವಾಟೊದಲ್ಲಿ ನಿಯಂತ್ರಣ ಸಾಧಿಸಲು ವಿವಿಧ ಸಂಘಟಿತ ಅಪರಾಧ ಗುಂಪುಗಳು ಹೋರಾಟ ನಡೆಸುತ್ತಿವೆ. ಹೀಗಾಗಿ ಮಿಕ್ಸಿಕೋದ ಅತ್ಯಂತ ಹಿಂಸಾತ್ಮಕ ರಾಜ್ಯಗಳಲ್ಲಿ ಈ ನಗರ ಒಂದಾಗಿದೆ.

ವರ್ಷದ ಮೊದಲ ಐದು ತಿಂಗಳಲ್ಲಿ ಈ ನಗರದಲ್ಲಿ ಒಟ್ಟು 1,435 ಹತ್ಯೆಗಳು ನಡೆದಿವೆ. ಕಳೆದ ತಿಂಗಳು ಕೂಡ ಇದೇ ರೀತಿಯ ಘಟನೆ ನಡೆದಿತ್ತು. ಗ್ವಾನಾಜುವಾಟೊದ ಸ್ಯಾನ್ ಬಾರ್ಟೊಲೊ ಡಿ ಬೆರಿಯೊಸ್‌ನಲ್ಲಿ ಕ್ಯಾಥೋಲಿಕ್ ಚರ್ಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...