ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ರಾಯಭಾರಿ ಕಚೇರಿಗಳಿಂದ ಸಲಹೆ

Date:

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸಲಹೆಯನ್ನು ನೀಡಿದೆ.

“ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅರಬ್ ಎಮಿರೇಟ್ಸ್ನಲ್ಲಿರುವ ಎಲ್ಲಾ ಭಾರತೀಯರು ಎಚ್ಚರಿಕೆಯಿಂದಿರಬೇಕು. ಯುಎಇ ಅಧಿಕಾರಿಗಳು ಮತ್ತು ರಾಯಭಾರ ಕಚೇರಿ ಹೊರಡಿಸುವ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಸಮಯಕ್ಕೆ ತಕ್ಕಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಲಹೆ ನೀಡಿದೆ.

ಅಬುಧಾಬಿಯ ಭಾರತದ ರಾಯಭಾರಿ ಕಚೇರಿ ಮತ್ತು ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಸಾಮಾನ್ಯವಾಗಿ ಕಾರ್ಯಚರಿಸುತ್ತಿದ್ದು, ಅಗತ್ಯವಿದ್ದಲ್ಲಿ ಮುಂದಿನ ಸೂಚನೆಗಳನ್ನು ನೀಡಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರ್ತು ಸಹಾಯಕ್ಕಾಗಿ ಯುಎಇಯಲ್ಲಿ ಇರುವ ಭಾರತೀಯರು ರಾಯಭಾರಿ ಕಚೇರಿಯ ತುರ್ತು ಸಹಾಯವಾಣಿಗೆ ಸಂಪರ್ಕಿಸುವಂತೆ ಸೂಚಿಸಿದೆ.

ಸೌದಿ ಅರೇಬಿಯಾದ ರಾಯಭಾರಿ ಕಚೇರಿಯಿಂದ ಸಲಹೆ:

ಇದೇ ರೀತಿಯ ಮಾರ್ಗಸೂಚಿಯನ್ನು ಸೌದಿ ಅರೇಬಿಯಾ ಕೂಡ ಹೊರಡಿಸಿದೆ. ಸೌದಿ ಅರೇಬಿಯಾದಲ್ಲಿರುವ ಎಲ್ಲಾ ಭಾರತೀಯರು ಸೌದಿ ಅರೇಬಿಯಾದ ಸ್ಥಳೀಯ ಅಧಿಕಾರಿಗಳು ಮತ್ತು ರಾಯಭಾರಿ ಕಚೇರಿ ನೀಡಿರುವ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದೆ.

ಇದನ್ನು ಒದಿದ್ದೀರಾ? ತನಿಖಾ ಸಂಸ್ಥೆಗಳಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ರಿಯಾದ್ನಲ್ಲಿರುವ ಭಾರತದ ರಾಯಭಾರ ಕಚೇರಿ ಮತ್ತು ಜಿದ್ದಾದಲ್ಲಿರುವ ಕಾನ್ಸುಲೇಟ್ ಜನರಲ್ ಸಾಮಾನ್ಯವಾಗಿ ಕಾರ್ಯಚರಿಸುತ್ತಿದ್ದು, ಅಗತ್ಯವಿದ್ದಲ್ಲಿ ಮುಂದಿನ ಸೂಚನೆಗಳನ್ನು ನೀಡಲಿದೆ ಎಂದು ತಿಳಿಸಿದೆ.

ತುರ್ತು ಸಹಾಯಕ್ಕಾಗಿ ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಿದೆ.

ಸಹಾಯವಾಣಿ ಸಂಖ್ಯೆ

00-966-11-4884697

00-966-542126748 (Whatsapp only)

800 247 1234 (Toll-Free)

Email: cw.riyadh@mea.gov.in

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...