ಫಿಲಿಪೈನ್ಸ್ ಕೃಷಿ ವಿವಿಗಳಿಗೆ ಸಚಿವ ಎನ್ ಚಲುವರಾಯಸ್ವಾಮಿ ಭೇಟಿ: ತಜ್ಞರೊಂದಿಗೆ ವಿಚಾರ ವಿನಿಮಯ

Date:

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಕ್ಟೋಬರ್‌ 15ರಂದು ಅಂತಾರಾಷ್ಟ್ರೀಯ ಭತ್ತ ಸಂಶೋಧನೆ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವರು ಅ.16ರಂದು ರಾಜಧಾನಿ ಮನಿಲಾದ ಡಿಎಲ್‌ಎಸ್‌ಎ ಖಾಸಗಿ ಸಮಗ್ರ ಕೃಷಿ ವಿವಿಗೆ ಭೇಟಿ ನೀಡಿ ಮಾಹಿತಿ ಪಡೆದರು.

ಅಲ್ಲಿನ ಕೃಷಿ ಯಾಂತ್ರೀಕರಣ, ರೈತರು ಹಾಗೂ ಕೃಷಿ ಆರ್ಥಿಕತೆ ಅಭಿವೃದ್ಧಿಯ ಮುನ್ನೋಟಗಳು, ಪಶುಸಂಗೋಪನೆಯನ್ನೂ ಒಳಗೊಂಡಂತೆ ಕೃಷಿ, ಆಹಾರ ವಿಜ್ಞಾನ ಅಧ್ಯಯನ ಭೋದನಾ ಕ್ರಮಗಳು, ಸಂಶೋಧನೆ, ಕ್ಷೇತ್ರ ಪ್ರಯೋಗಗಳ ಸ್ವರೂಪಗಳ ಬಗ್ಗೆ ಸಚಿವ ಎನ್ ಚಲುವರಾಯಸ್ವಾಮಿ ಇಲ್ಲಿಯ ತಜ್ಜರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದು ವಿಚಾರ ವಿನಿಮಯ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಫಿಲಿಪೈನ್ಸ್‌ ಕೃಷಿ ವಿವಿಗಳಿಗೆ ಚಲುವರಾಯಸ್ವಾಮಿ ಭೇಟಿ 1

ಇದೇ ವೇಳೆ ರಾಜ್ಯದಲ್ಲಿ ಕೃಷಿ, ತೋಟಗಾರಿಕೆ ಹಾಗೂ ಪಶುಪಾಲನೆ ಕ್ಷೇತ್ರಗಳ ಸಂಶೋಧನೆಗೆ ಹೆಚ್ಚು ಆದ್ಯತೆ ನೀಡುವ ಸಲುವಾಗಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಅದರಿಂದಾಗಿರುವ ಪರಿಣಾಮಗಳು, ಯೋಜಿತ ಸುಧಾರಣಾ ಚಿಂತನೆಗಳ ಬಗ್ಗೆ ಸಚಿವರು ಫಿಲಿಪೈನ್ಸ್‌ನ ವಿಶ್ವವಿದ್ಯಾಲಯದ ತಜ್ಞರೊಂದಿಗೆ ಅಭಿಪ್ರಾಯ ಹಂಚಿಕೊಂಡರು.

ಇದೇ ವೇಳೆ ಕೃಷಿ ಕ್ಷೇತ್ರದ ಸುಧಾರಣೆ, ಸಂಶೋಧನೆ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ವಿನಿಮಯಕ್ಕೆ ಉಭಯ ರಾಷ್ಟ್ರಗಳ ಪ್ರತಿನಿಧಿಗಳು ಒಮ್ಮತ ವ್ಯಕ್ತಪಡಿಸಿದರು.

ಫಿಲಿಪೈನ್ಸ್‌ ಕೃಷಿ ವಿವಿಗಳಿಗೆ ಚಲುವರಾಯಸ್ವಾಮಿ ಭೇಟಿ 2

ಡಿಎಲ್‌ಎಸ್‌ಎ ವಿಶ್ವವಿದ್ಯಾಲಯದ ಕುಲಪತಿ ಡಾ. ಮ್ಯಾರಿ ಅಲಿಷನ್, ಉಪ ಕುಲಪತಿ ಡಾ ಜನ್ನಿಫರ್ ರೇಯಸ್, ಉಪಾಧ್ಯಕ್ಷ ಕ್ರಿಸ್ಟೋಪರ್ ಪೊಲೊಂಕೋ, ಕಾರ್ಯಕ್ರಮದ ಮುಖ್ಯಸ್ಥ ಎಲ್ಮರ್ ಮೊಂಟೆಬಾನ್, ಸಮನ್ವಯ ಮುಖ್ಯಸ್ಥೆ ಮರಿಯಾ ರೊವೆನಾ ಟೆಸ್ಸರಿಯಾ ಅವರು ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ ಅಲ್ಲಿನ ಕೃಷಿ ವಿವಿಯ ಯೋಜನೆ, ಸಾಧನೆ, ಸ್ವರೂಪಗಳ ಪರಿಚಯ ಮಾಡಿಕೊಟ್ಟರು.

ನೇರ ವಿಮಾನ ಯಾನ ಪ್ರಯತ್ನ

ಮನಿಲಾದಿಂದ ಬೆಂಗಳೂರಿಗೆ ನೇರ ವಿಮಾನ ಸಂಪರ್ಕ ವ್ಯವಸ್ಥೆಯಿಂದ ಕೃಷಿ ಉತ್ಪನ್ನಗಳ ಆಮದು ರಫ್ತು ಸುಗಮವಾಗಲಿದ್ದು, ಈ‌ ನಿಟ್ಟಿನಲ್ಲಿ ಅಗತ್ಯ ಕ್ರಮಗಳಿಗೆ ಕೋರಿ ಕೇಂದ್ರ ಸರ್ಕಾರ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿ ತಮಗೂ ಪ್ರತಿ ಕಳಿಸಿಕೊಟ್ಟಲಿ ತಾವೂ ಕೇಂದ್ರಕ್ಕೆ ಮನವಿ ಸಲ್ಲಿಸುವುದಾಗಿ ಸಚಿವ ಎನ್ ಚಲುವರಾಯಸ್ವಾಮಿ ಫಿಲಿಪೈನ್ಸ್‌ನ ಭಾರತೀಯ ರಾಯಭಾರಿ ಕಚೇರಿ ಪ್ರತಿನಿಧಿ ಜೀವನ್ ಅವರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಅನಧಿಕೃತವಾಗಿ ಮಳಿಗೆ ನಿರ್ಮಾಣ: ತೆರವುಗೊಳಿಸದಂತೆ ಮಾಲೀಕರ ಪ್ರತಿಭಟನೆ

ಮಂಡ್ಯ ಕೃಷಿ ವಿವಿ ವಿಶೇಷಾಧಿಕಾರಿ ಡಾ ಕೆ ಎಂ ಹರಿಣಿ ಕುಮಾರ್, ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎ ಬಿ ಪಾಟೀಲ್ ರಾಜ್ಯದ ಕೃಷಿ ವಿವಿಗಳ ಸ್ವರೂಪ ಕರ್ನಾಟಕ ರಾಜ್ಯದ ಕೃಷಿ ನೀತಿಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮಾಡಿಕೊಟ್ಟರು. ರಾಜ್ಯದ ಅಧ್ಯಯನ ತಂಡದೊಂದಿಗೆ ತೆರಳಿರುವ ಡಾ. ವೇಣು ಪ್ರಸಾದ್, ಡಾ ಮಲ್ಲಿಕಾರ್ಜುನ ಸ್ವಾಮಿ, ವಿ ಸಿ ಫಾರಂನ ಭತ್ತದ ತಳಿ ವಿಜ್ಞಾನಿ ಡಾ. ದೀಪಕ್, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...