ಜುಲೈನಲ್ಲಿ ಮೋದಿ ರಷ್ಯಾ ಭೇಟಿ: ತಿಂಗಳ ಅಂತರದಲ್ಲಿ ಎರಡನೇ ವಿದೇಶ ಭೇಟಿ

Date:

ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನಿಡುವ ಸಾಧ್ಯತೆಯಿದ್ದು, ಭಾರತ – ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಮೊದಲ ಬಾರಿಯಾಗಿದೆ.

ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮೋದಿ ಇಟಲಿಗೆ ಭೇಟಿ ನೀಡಿದ್ದರು. ಈಗ ಅಧಿಕಾರ ಸ್ವೀಕರಿಸಿ ಒಂದಿ ತಿಂತಗಳು ಕಳೆದಿಲ್ಲ, ಈಗ ರಷ್ಯಾಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

ಮೋದಿ ಭೇಟಿ ನೀಡುತ್ತಿರುವ ಬಗ್ಗೆ ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಮಾಧ್ಯಮ ಸಂಸ್ಥೆ ಆರ್‌ಐಎ ತಿಳಿಸಿದೆ. ಆದರೆ ಭೇಟಿಯ ಅಂತಿಮ ರೂಪುರೇಷುಗಳು ಇನ್ನು ನಿರ್ಧಾರವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಮೋದಿ ಅವರಿಗೆ ರಷ್ಯಾಕ್ಕೆ ಭೇಟಿ ನೀಡಲು ಮಾರ್ಚ್‌ನಲ್ಲಿ ಆಹ್ವಾನ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

ಮೋದಿ ರಷ್ಯಾಕ್ಕೆ ಕೊನೆಯ ಬಾರಿ ಭೇಟಿ ನೀಡಿದ್ದು 2019ರಲ್ಲಿ. ವ್ಲಾಡಿವೊಸ್ಟೋಕ್‌ನಲ್ಲಿನ ಈಸ್ಟರ್ನ್‌ ಎಕನಾಮಿಕ್‌ ಫೋರಂನಲ್ಲಿ ಭಾಗಿಯಾಗಿದ್ದರು. 2000ರ ಅಕ್ಟೋಬರ್‌ನಲ್ಲಿ ಪುಟಿನ್‌ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಹಾಗೂ ರಷ್ಯಾ ನಡುವೆ ವಾರ್ಷಿಕ ಸಾಂಪ್ರದಾಯಿಕ ಶೃಂಗಸಭೆ ಆರಂಭಗೊಂಡಿತ್ತು.

ಭಾರತ – ರಷ್ಯಾ ನಡುವೆ ಸಾಂಪ್ರದಾಯಿಕ ಶೃಂಗಸಭೆ ಕೊನೆಯದಾಗಿ 2021ರ ಡಿಸೆಂಬರ್‌ನಲ್ಲಿ ನಡೆದಿತ್ತು. ಅಧ್ಯಕ್ಷ ಪುಟಿನ್‌ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೋವಿಡ್‌ ಸಾಂಕ್ರಾಮಕ ಹಾಗೂ ಅನಿರ್ದಿಷ್ಟ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಉಭಯ ದೇಶಗಳ ನಡುವೆ ಶೃಂಗಸಭೆ ನಡೆದಿಲ್ಲ.

ಕಳೆದ ಹಲವು ದಶಕಗಳಲ್ಲಿ ರಷ್ಯಾವು ಭಾರತಕ್ಕೆ ರಕ್ಷಣಾ ಸಾಮಾಗ್ರಿಗಳನ್ನು ರಫ್ತು ಮಾಡುತ್ತಿತ್ತು. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಯೂರೋಪ್‌ ಹಾಗೂ ಅಮೆರಿಕ ನಡುವೆ ಭಾರತ ರಕ್ಷಣಾ ಸಾಮಗ್ರಿಗಳಿಗಾಗಿ ಒಪ್ಪಂದ ಮಾಡಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...