ಭಾರತ-ಪಾಕಿಸ್ತಾನದ ನಡುವಿನ ಸಂಭಾವ್ಯ ‘ಪರಮಾಣು ಯುದ್ಧ’ ನಿಲ್ಲಿಸಿದ್ದಕ್ಕೆ ಅತ್ಯಂತ ಹೆಮ್ಮೆಪಡುತ್ತೇನೆ: ಡೊನಾಲ್ಡ್ ಟ್ರಂಪ್

Date:

ಭಾರತ, ಪಾಕಿಸ್ತಾನದ ಕದನ ವಿರಾಮದ ಶ್ರೇಯಸ್ಸನ್ನು ತಾನಾಗಿಯೇ ಹೊತ್ತುಕೊಂಡು ಆಗಾಗ ಪ್ರಸ್ತಾಪ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ, “ಭಾರತ ಮತ್ತು ಪಾಕಿಸ್ತಾನ ನಡುವಿನ ‘ಸಂಭಾವ್ಯ ಪರಮಾಣು ಯುದ್ಧ’ವನ್ನು ನಿಲ್ಲಿಸಿದ್ದಕ್ಕೆ ಅತ್ಯಂತ ಹೆಮ್ಮೆಪಡುತ್ತೇನೆ” ಎಂದಿದ್ದಾರೆ. ವ್ಯಾಪಾರ ವಿಚಾರವನ್ನು ಪ್ರಸ್ತಾಪಿಸಿ ಯುದ್ಧ ನಿಲ್ಲಿಸಲು ಸಾಧ್ಯವಾಯಿತು ಎಂಬುದೇ ತಮಗೆ ಅತ್ಯಂತ ಹೆಮ್ಮೆಯ ವಿಚಾರ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಸಂಘರ್ಷವನ್ನು ನಿಲ್ಲಿಸದಿದ್ದರೆ ಅಮೆರಿಕವು ಎರಡು ದೇಶಗಳೊಂದಿಗಿನ ವ್ಯಾಪಾರವನ್ನು ನಿಲ್ಲಿಸುತ್ತದೆ ಎಂದು ಭಾರತ ಮತ್ತು ಪಾಕಿಸ್ತಾನಕ್ಕೆ ಬೆದರಿಕೆ ಹಾಕಿದ ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಟ್ರಂಪ್ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಆದರೆ ಈಗಾಗಲೇ ಭಾರತ ಮತ್ತು ಅಮೆರಿಕ ನಾಯಕರ ನಡುವಿನ ಮಾತುಕತೆಗಳಲ್ಲಿ ವ್ಯಾಪಾರದ ವಿಷಯವು ಪ್ರಸ್ತಾಪವಾಗಿಲ್ಲ ಎಂದು ಭಾರತವೂ ಸ್ಪಷ್ಟಪಡಿಸಿದೆ. ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದೆ. ಆದರೆ ಟ್ರಂಪ್ ಮಾತ್ರ ತನ್ನ ‘ವ್ಯಾಪಾರ ಅಸ್ತ್ರ’ ಎಂಬ ಹೇಳಿಕೆಯನ್ನು ಮುಂದುವರೆಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕ್ ಸಂಘರ್ಷ | ನೀವು ನಿಲ್ಲಿಸದಿದ್ದರೆ ಯಾವುದೇ ವ್ಯಾಪಾರ ಮಾಡಲ್ಲ ಎಂದಿದ್ದೆವು: ಡೊನಾಲ್ಡ್ ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಭಾರತದೊಂದಿಗೆ, ಪಾಕಿಸ್ತಾನದೊಂದಿಗೆ ವ್ಯವಹಾರ ಹೊಂದಿದ್ದೇವೆ. ವ್ಯಾಪಾರವನ್ನು ಬುಲೆಟ್‌ನಂತೆ ಬಳಸಿ ಸಂಭಾವ್ಯ ಪರಮಾಣು ಯುದ್ಧವನ್ನು ನಿಲ್ಲಿಸಲು ನಮಗೆ ಸಾಧ್ಯವಾಯಿತು ಎಂಬುದೇ ನಾನು ಹೆಚ್ಚು ಹೆಮ್ಮೆಪಡುವ ಒಪ್ಪಂದ” ಎಂದು ಶುಕ್ರವಾರ ಟ್ರಂಪ್ ಹೇಳಿಕೊಂಡಿದ್ದಾರೆ.

“ಸಾಮಾನ್ಯವಾಗಿ ಗುಂಡುಗಳ(ಬುಲೆಟ್‌) ಮೂಲಕ ಇಂತಹ ಕಾರ್ಯ ಮಾಡಲಾಗುತ್ತದೆ. ಆದರೆ ನಾವು ವ್ಯಾಪಾರದ ಮೂಲಕ ಮಾಡುತ್ತೇವೆ. ಅದರ ಬಗ್ಗೆ ತುಂಬಾ ಹೆಮ್ಮೆ ಇದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಬಹಳ ಕೆಟ್ಟದಾದ ಯುದ್ಧ ನಡೆಯುವ ಸಾಧ್ಯತೆಯಿತ್ತು. ಆದ ಬಗ್ಗೆ ಯಾರೂ ಮಾತನಾಡಲ್ಲ. ಈಗ ನೋಡಿ, ಅವರು ಚೆನ್ನಾಗಿಯೇ ಇದ್ದಾರೆ” ಎಂದು ಅಮೆರಿಕ ಅಧ್ಯಕ್ಷ ವರದಿಗಾರರಿಗೆ ತಿಳಿಸಿದ್ದಾರೆ.

“ಭಾರತದೊಂದಿಗೆ ನಾವು ಒಪ್ಪಂದ ಮಾಡಿಕೊಳ್ಳುವ ಅಂತಿಮ ಹಂತದಲ್ಲಿದ್ದೇವೆ. ಪಾಕ್, ಭಾರತ ಪರಸ್ಪರ ಯುದ್ಧ ಮಾಡುವುದಾದರೆ ನನಗೆ ಯಾವುದೇ ಒಪ್ಪಂದ ಮಾಡಿಕೊಳ್ಳುವ ಆಸಕ್ತಿ ಇರಲ್ಲ. ನಾನು ಒಪ್ಪಂದ ಮಾಡುವುದಿಲ್ಲವೆಂದು ಆಗಲೇ ತಿಳಿಸಿಬಿಡುತ್ತೇನೆ” ಎಂದರು. ಇದೇ ಭಾರತ ಮತ್ತು ಪಾಕಿಸ್ತಾನದ ಯುದ್ಧವನ್ನು ನಿಲ್ಲಿಸಿದ್ದೇ ಅಮೆರಿಕ ಎಂಬ ಹೇಳಿಕೆಯನ್ನು ಒಂದೇ ದಿನದಲ್ಲಿ ಎರಡು ಕಡೆಗಳಲ್ಲಿ ಟ್ರಂಪ್ ನೀಡಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕಾ ದಾಳಿ ನಡೆಸಿ 26 ಮಂದಿಯನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕಾ ನೆಲೆಗಳ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...