‘ಪುತ್ರನಿಗೆ ದೊಡ್ಡವನಾಗಲು ಇಷ್ಟವಿರಲಿಲ್ಲ’; ಹುಟ್ಟುಹಬ್ಬಕ್ಕೂ ಮುನ್ನ ಮಗನನ್ನು ಕೊಂದ ಮಹಿಳೆ

Date:

17 ವರ್ಷದ ಬಾಲಕನನ್ನು ಆತನ ತಾಯಿ ಕೊಲೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ತನ್ನ ಮಗನಿಗೆ ಮತ್ತೊಂದು ವರ್ಷ ದೊಡ್ಡವನಾಗುವುದು ಇಷ್ಟವಿರಲಿಲ್ಲ. ಹೀಗಾಗಿ, ತನ್ನನ್ನು ಕೊಲ್ಲುವಂತೆ ಆತನೇ ಹೇಳಿದ್ದ. ಅವನ ಮಾತಿನಂತೆ ಕೊಲೆ ಮಾಡಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಮೆರಿಕದ ಮಿಚಿಗನ್‌ನಲ್ಲಿ ಘಟನೆ ನಡೆದಿದೆ. 39 ವರ್ಷದ ಮಹಿಳೆ ಕೇಟೀ ಲೀ ಎಂಬಾಕೆ ತನ್ನ ಮಗ ಆಸ್ಟಿನ್ ಪಿಕಾರ್ಟ್ (17) ನನ್ನು ಕೊಲೆ ಮಾಡಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ ಅಂತ್ಯದಲ್ಲಿ ಆಸ್ಟಿನ್‌ಗೆ 18 ವರ್ಷ ತುಂಬುತ್ತಿತ್ತು. ಆದರೆ, ಆಸ್ಟಿನ್‌ಗೆ ತಾನು ಮತ್ತೊಂದು ವರ್ಷ ದೊಡ್ಡವನಾಗುವುದು ಇಷ್ಟವಿರಲಿಲ್ಲ. ಆತ ತನ್ನನ್ನು ಕೊಲ್ಲುವಂತೆ ಕೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನನ್ನು ಕೊಲ್ಲುವ ಮುನ್ನ ಆಸ್ಟಿನ್ ಮತ್ತು ಕೇಟೇ ಲೀ ಒಟ್ಟು ಮದ್ಯ ಸೇವಿಸಿದ್ದರು. ಬಳಿಕ, ಚಾಕುವಿನಿಂದ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ತನ್ನ ಮಗನ ಮಾತಿನಂತೆ ತಾನೇ ಕೊಲೆ ಮಾಡಿದ್ದಾಗಿ ಕೇಟೇ ಲೀ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮಗನನ್ನು ಕೊಲೆ ಮಾಡಿದ ಬಳಿಕ ಕೇಟೇ ಲೀ ಅವರೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧನದ ಸಮಯದಲ್ಲಿ ತನ್ನನ್ನೂ ಕೊಲ್ಲುವಂತೆ ಮಹಿಳೆ ಬೇಡಿಕೊಂಡಳು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...