ನೇಪಾಳ | 19 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ; ಐವರ ಮೃತದೇಹ ಪತ್ತೆ

Date:

ನೇಪಾಳದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, 19 ಮಂದಿ ಪ್ರಯಾಣಿಕರಿದ್ದ ವಿಮಾನ ಟೇಕಾಫ್‌ ವೇಳೆ ಪತನಗೊಂಡಿರುವ ಘಟನೆ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಕಠ್ಮಂಡುನಿಂದ ಪೋಖರಾಗೆ ತೆರಳಬೇಕಿದ್ದ ಸೌರ್ಯ ಏರ್‌ಲೈಲ್ಸ್‌ಗೆ ಸೇರಿದ ವಿಮಾನ ಪತನಗೊಂಡಿದೆ. ಬೆಳಗ್ಗೆ 11 ಗಂಟೆಗೆ ಅಪಘಾತ ಸಂಭವಿಸಿದೆ. ಈವರೆಗೆ ಐದು ಮೃತದೇಹಗಳು ಪತ್ತೆಯಾಗಿವೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ನಿಖರವಾಗಿಲ್ಲ.

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಮಾನದ ಪೈಲಟ್ ಕ್ಯಾಪ್ಟನ್ ಮನೀಶ್ ಶಾಕ್ಯಾ (37) ಅವರನ್ನು ರಕ್ಷಿಸಲಾಗಿದ್ದು, ಸಿನಮಂಗಲದ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ವಿಮಾನವು ಟೇಕಾಫ್‌ಗಾಗಿ ರನ್‌ವೇನಲ್ಲಿ ತೆರಳುವಾಗ ಸ್ಕಿಡ್ ಆಗಿ ಪತನಗೊಂಡಿದೆ. ಪತನವಾದ ತಕ್ಷಣ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಮತ್ತು ಭದ್ರತಾ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಬದುಕುಳಿದಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

 

ಈ ಹಿಂದೆ, 2023ರ ಜನವರಿಯಲ್ಲಿ ಪೊಖರಾ ಬಳಿ ಯೇತಿ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿತ್ತು. ದುರಂತ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 72 ಮಂದಿ ಪ್ರಾಣ ಕಳೆದುಕೊಂಡಿದ್ದರು. 2022ರ ಮೇ 29ರಂದು ತಾರಾ ಏರ್ ವಿಮಾನವು ಮುಸ್ತಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ, 22 ಮಂದಿ ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...