ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು: ಪ್ರಧಾನಿ, ರಾಷ್ಟ್ರಪತಿ ರಾಜೀನಾಮೆ

Date:

ನೇಪಾಳವು ತೀವ್ರ ರಾಜಕೀಯ ಅಸ್ಥಿರತೆಯ ಸುಳಿಯಲ್ಲಿ ಸಿಲುಕಿದ್ದು, ಮಂಗಳವಾರ ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಪ್ರಧಾನಮಂತ್ರಿ ಕೆ ಪಿ ಶರ್ಮಾ ಒಲಿ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಮತ್ತು ಸಂಬಂಧಿಕರಿಗೆ ಆದ್ಯತೆಗೆ ವಿರುದ್ಧವಾಗಿ ಜನರಾಂದೋಲನದಿಂದ, ವಿಶೇಷವಾಗಿ ಜನರೇಷನ್ ಜೆಢ್‌ ಆಕ್ರೋಶದಿಂದ ಉಂಟಾದ ಈ ಬಿಕ್ಕಟ್ಟು ದೇಶವನ್ನು ತೀವ್ರ ಗೊಂದಲಕ್ಕೆ ದೂಡಿದೆ.

ಪ್ರಧಾನಮಂತ್ರಿ ಒಲಿ ಸಾಮಾಜಿಕ ಜಾಲತಾಣಗಳ ಮೇಲೆ ವಿಧಿಸಿದ ವಿವಾದಾತ್ಮಕ ನಿಷೇಧವು ಈ ಗಲಭೆಗೆ ಪ್ರಮುಖ ಕಾರಣವಾಯಿತು. ಸೋಮವಾರದಿಂದ ಆರಂಭವಾದ ಈ ಪ್ರತಿಭಟನೆಗಳು ಮಂಗಳವಾರದ ರಾತ್ರಿಯವರೆಗೂ ತೀವ್ರಗೊಂಡವು, ಇದರಿಂದ ಕನಿಷ್ಠ 22 ಜನರು ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ. ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಮಂಗಳವಾರ ಮುಂಜಾನೆಯೇ ಈ ನಿಷೇಧವನ್ನು ತೆಗೆದುಹಾಕಿತು. ಆದರೆ, ಈ ಕ್ರಮವು ಗಲಭೆಯನ್ನು ಶಮನಗೊಳಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ತಮ್ಮ ರಾಜೀನಾಮೆ ಪತ್ರದಲ್ಲಿ, ಪ್ರಧಾನಮಂತ್ರಿ ಒಲಿ, “ದೇಶದಲ್ಲಿ ಉಂಟಾದ ಪ್ರತಿಕೂಲ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು” ಮತ್ತು ಸಂವಿಧಾನದಡಿಯಲ್ಲಿ ರಾಜಕೀಯ ಪರಿಹಾರಕ್ಕೆ ದಾರಿಮಾಡಿಕೊಡಲು ತಾವು ಸ್ಥಾನತ್ಯಾಗ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಪತಿ ಪೌಡೆಲ್ ಕೂಡ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದು, ದೇಶವು 2008ರಲ್ಲಿ ರಾಜಪ್ರಭುತ್ವ ರದ್ದಾದ ನಂತರದ ಅತ್ಯಂತ ಗಂಭೀರ ರಾಜಕೀಯ ಬಿಕ್ಕಟ್ಟಿನೆಡೆಗೆ ಸಾಗಿದೆ.

ಪ್ರತಿಭಟನಾಕಾರರು ಸಂಸತ್ ಭವನದ ಬಳಿ ಗೆಲುವಿನ ವಿಜಯೋತ್ಸವ ಆಚರಿಸಿದರೂ, ಕಠ್ಮಂಡುವಿನ ಕೆಲವು ಭಾಗಗಳಲ್ಲಿ ಹಿಂಸಾಚಾರ ಮುಂದುವರಿದಿದೆ. ಪ್ರಧಾನಮಂತ್ರಿ ಒಲಿಯವರ ಖಾಸಗಿ ನಿವಾಸ ಸೇರಿದಂತೆ ಹಲವಾರು ರಾಜಕಾರಣಿಗಳ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರಮುಖ ಸಚಿವಾಲಯಗಳಿರುವ ಕಚೇರಿಗಳಿಗೂ ದಾಳಿ ನಡೆಸಲಾಗಿದೆ. ತೀವ್ರ ಗಲಭೆಯಿದಾಗಿ ಕಠ್ಮಂಡು ವಿಮಾನ ನಿಲ್ದಾಣವನ್ನು ಸುರಕ್ಷತಾ ಕಾರಣಗಳಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

“ಜನರೇಷನ್ ಜೆಡ್ ಚಳವಳಿ”ಯ ಪ್ರತಿಭಟನೆಗಳು ದೇಶಾದ್ಯಂತ ವಿವಿಧ ನಗರಗಳಿಗೆ ವ್ಯಾಪಿಸಿವೆ. ಯುವ ಜನತೆಯು ಭ್ರಷ್ಟಾಚಾರ, ಸಂಬಂಧಿಕರಿಗೆ ಆದ್ಯತೆ ಮತ್ತು ಆರ್ಥಿಕ ಅಸಮಾನತೆಯ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕಾರಣಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರೂ, ಯುವಕರಿಗೆ ಉದ್ಯೋಗ ಅವಕಾಶಗಳು ಮತ್ತು ಆರ್ಥಿಕ ಭದ್ರತೆಯ ಕೊರತೆಯಿದೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...