ವಾಷಿಂಗ್ಟನ್ | ವಿಮಾನ-ಹೆಲಿಕಾಪ್ಟರ್ ಅಪಘಾತ: ಎಲ್ಲಾ ಪ್ರಯಾಣಿಕರು ಸಾವು; 28 ಶವ ಪತ್ತೆ

Date:

ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಸೇನೆಯ ಬ್ಲ್ಯಾಕ್‌ಹಾಕ್ ಹೆಲಿಕಾಪ್ಟರ್ ಮತ್ತು ಪ್ರಯಾಣಿಕ ವಿಮಾನದ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಯಾಣಿಕರು ಬದುಕುಳಿದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ ಪೊಟೊಮ್ಯಾಕ್ ನದಿಯಿಂದ 28 ಮೃತದೇಹಗಳನ್ನು ಹೊರತೆಗೆಯಲಾಗಿದೆ.

“ಈ ಹಂತದಲ್ಲಿ ಯಾವುದೇ ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ನಾವು ನಂಬುವುದಿಲ್ಲ. ನಾವು ರಕ್ಷಣಾ ಕಾರ್ಯಚರಣೆಯನ್ನು ಮೃತದೇಹಗಳ ಪತ್ತೆ ಕಾರ್ಯಾಚರಣೆಯಾಗಿ ಬದಲಾಯಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ” ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಖಜಕಿಸ್ತಾನ | 72 ಪ್ರಯಾಣಿಕರಿದ್ದ ವಿಮಾನ ಪತನ; ಬದುಕುಳಿದ 12 ಮಂದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ 300 ಜನರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ನೀರಿನಲ್ಲಿ ಮಂಜುಗಡ್ಡೆ ಇದೆ. ತೀವ್ರ ಗಾಳಿಯ ನಡುವೆಯೂ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಈವರೆಗೂ ಕೂಡಾ ಈ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ವಿಮಾನದಲ್ಲಿ ಹಲವು ಅಥ್ಲೇಟ್‌ಗಳು, ಕೋಚ್‌ಗಳು ಮತ್ತು ಅಧಿಕಾರಿಗಳು ಇದ್ದರು ಎಂದು ಹೇಳಲಾಗಿದೆ. ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಮೂವರು ಯೋಧರಿದ್ದರು ಎಂದು ಅಮೆರಿಕ ಸೇನೆ ದೃಢಪಡಿಸಿದೆ. ಅಮೆರಿಕದ ವಿಮಾನದಲ್ಲಿ 60 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ.

1994ರ ವಿಶ್ವ ಜೋಡಿ ಪ್ರಶಸ್ತಿ ಗೆದ್ದ, ರಷ್ಯಾದ ದಂಪತಿಗಳಾದ ಎವ್ಗೆನಿಯಾ ಶಿಶ್ಕೋವಾ ಮತ್ತು ವಾಡಿಮ್ ನೌಮೋವ್ ಕೂಡಾ ವಿಮಾನದಲ್ಲಿದ್ದರು ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...