ನಾರ್ವೇ ಲೇಖಕ ಜಾನ್ ಫೋಸ್ ಸಾಹಿತ್ಯಕ್ಕೆ ನೊಬೆಲ್ ಪ್ರಶಸ್ತಿ

Date:

ನಾರ್ವೇ ಲೇಖಕ ಜಾನ್ ಫೋಸ್ ಅವರಿಗೆ 2023ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಘೋಷಿಸಿರುವ ಸ್ವೀಡಿಷ್ ಅಕಾಡೆಮಿಯು ಜಾನ್‌ ಫೋಸ್‌ ಅವರ ನಾಟಕಗಳು ಹಾಗೂ ಗದ್ಯಗಳು ಧ್ವನಿ ಇಲ್ಲದವರ ಧ್ವನಿಯಾಗಿವೆ ಎಂದು ತಿಳಿಸಿದೆ. ಡಿಸೆಂಬರ್ 10ರಂದು ಸ್ಟಾಕ್‌ಹೋಮ್‌ನಲ್ಲಿ ನಡೆಯುವ ಔಪಚಾರಿಕ ಸಮಾರಂಭದಲ್ಲಿ ಫೋಸ್‌ ಅವರು ನೊಬೆಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಜಾನ್ ಫೋಸ್ ಅವರು ನಾಟಕ, ಕಾದಂಬರಿ, ಕವನ ಸಂಗ್ರಹಗಳು ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ನೂರಾರು ಕೃತಿಗಳು ವಿಶ್ವದ ಹಲವು ಭಾಷೆಗೆ ಅನುವಾದಗೊಂಡಿವೆ. ವಿಶ್ವದಲ್ಲಿ ಅತ್ಯಂತ ವ್ಯಾಪಕವಾಗಿ ಪ್ರದರ್ಶನಗೊಂಡ ನಾಟಕಕಾರರಲ್ಲಿ ಜಾನ್ ಫೋಸ್ ಒಬ್ಬರಾಗಿದ್ದರೂ, ಅವರು ತಮ್ಮ ಗದ್ಯಗಳಲ್ಲಿ ಹೆಚ್ಚು ಗುರುತಿಸಲ್ಪಟ್ಟಿದ್ದಾರೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022 ರ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರಿಗೆ ನೀಡಲಾಗಿತ್ತು.

2023ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಪಡೆದಿದ್ದರು. ಹಾಗೇ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿ ‘ಕೊರೊನಾ’ ಲಸಿಕೆ ಕಂಡುಹಿಡಿಯಲು ಸಹಾಯ ಮಾಡಿದ್ದ ಕ್ಯಾಟಲಿನ್ ಕಾರಿಕೋ ಹಾಗೂ ಡ್ರೂ ವೈಸ್‌ಮನ್‌ ಅವರಿಗೆ ಸಿಕ್ಕಿತ್ತು.

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೌಂಗಿ ಜಿ.ಬವೆಂಡಿ, ಲೂಯಿಸ್ ಇ. ಬ್ರಸ್ ಮತ್ತು ಅಲೆಕ್ಸಿ ಐ.ಎಕಿಮೊವ್ ಅವರಿಗೆ ನೀಡಲಾಗಿತ್ತು. ಇದೀಗ ಸಾಹಿತ್ಯ ವಿಭಾಗದ ಪ್ರಶಸ್ತಿ ಕೂಡ ಪ್ರಕಟವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...