ಕೋವಿಡ್-19 ಲಸಿಕೆ ಸಂಶೋಧಿಸಿದ ಇಬ್ಬರು ವಿಜ್ಞಾನಿಗಳಿಗೆ ಈ ಬಾರಿಯ ವೈದ್ಯಕೀಯ ನೊಬೆಲ್‌ ಪ್ರಶಸ್ತಿ

Date:

2023ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಯು ಕೋವಿಡ್‌-19 ವೈರಸ್‌ ವಿರುದ್ಧ ಪರಿಣಾಮಕಾರಿ ಎಂಆರ್‌ಎನ್‌ಎ ಲಸಿಕೆಗಳನ್ನು ಅಭಿವೃದ್ಧಿ ಪಡಿಸಲು ಅನುವು ಮಾಡಿಕೊಡುವ ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳ ಬಗ್ಗೆ ಸಂಶೋಧನೆ ಮಾಡಿದ ಇಬ್ಬರು ವಿಜ್ಞಾನಿಗಳಿಗೆ ಲಭಿಸಿದೆ.

ಹಂಗೇರಿಯ ವಿಜ್ಞಾನಿ ಕ್ಯಾಟಲಿನ್ ಕರಿಕೊ ಮತ್ತು ಅಮೆರಿಕದ ವಿಜ್ಞಾನಿ ಡ್ರೂ ವೈಸ್‌ಮನ್ ಅವರಿಗೆ ಜಂಟಿಯಾಗಿ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವೈಜ್ಞಾನಿಕ ಪ್ರಪಂಚದಲ್ಲಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಸಮಿತಿ ಆಯ್ಕೆ ಮಾಡಿದೆ. ಪ್ರಶಸ್ತಿ ಮೊತ್ತವು ಸುಮಾರು 1 ಮಿಲಿಯನ್‌ ಡಾಲರ್‌ ಒಳಗೊಂಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂಗೇರಿಯ ವಿಜ್ಞಾನಿ ಕ್ಯಾಟಲಿನ್ ಕರಿಕೊ ಅವರು ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಅಮೆರಿಕ ವಿಜ್ಞಾನಿ ಡ್ರೂ ವೈಸ್‌ಮನ್ ಅವರು ಪೆರೆಲ್‌ಮನ್ ಲಸಿಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ.

ಇಬ್ಬರು ವಿಜ್ಞಾನಿಗಳು ಕೋವಿಡ್‌ ಸಮಯದಲ್ಲಿ ಎಂಆರ್‌ಎನ್‌ಎ ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಹಿರಂಗಗೊಂಡ ಬಿಹಾರದ ಜಾತಿ ಗಣತಿ ವರದಿ: ಯಾವ್ಯಾವ ಸಮುದಾಯ ಎಷ್ಟೆಷ್ಟು ಗೊತ್ತೆ?

ಉಳಿದ ನೊಬೆಲ್‌ ಪ್ರಶಸ್ತಿಗಳನ್ನು ಭೌತಶಾಸ್ತ್ರ (ಅಕ್ಟೋಬರ್ 3), ರಸಾಯನಶಾಸ್ತ್ರ (ಅಕ್ಟೋಬಲ್ 4), ಸಾಹಿತ್ಯ (ಅಕ್ಟೋಬರ್ 5), ಮತ್ತು ಶಾಂತಿ (ಅಕ್ಟೋಬರ್ 6) ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಕ್ಟೋಬರ್ 9 ರಂದು ಘೋಷಿಸಲಾಗುವುದು.  

ಸ್ವೀಡಿಷ್ ಡೈನಮೈಟ್ ಸಂಶೋಧಕ ಮತ್ತು ಶ್ರೀಮಂತ ಉದ್ಯಮಿ ಆಲ್ಫ್ರೆಡ್ ಅವರ ಹೆಸರಿನಲ್ಲಿ 1901 ರಲ್ಲಿ ಮೊದಲ ಬಾರಿಗೆ ನೊಬೆಲ್ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ, ಅರ್ಥಶಾಸ್ತ್ರ ಸೇರಿದಂತೆ ಒಟ್ಟು 7 ವಿಭಾಗಗಳಿಗೆ ನೀಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...