ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ನೊಬೆಲ್ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ ಸಾಧ್ಯತೆ

Date:

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಶೇಖ್‌ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಸೇನೆಯು ನೊಬೆಲ್ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೊಹಮ್ಮದ್‌ ಯೂನುಸ್‌ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದವರು.

ಶೇಖ್‌ ಹಸೀನಾ ಅವರ 15 ವರ್ಷಗಳ ಸುದೀರ್ಘ ಆಡಳಿತ ಅಂತ್ಯವಾಗಿದೆ. ಸೋಮವಾರ(ಆ.05) ಹಸೀನಾ ಅವರು ದೇಶದಿಂದ ಪಲಾಯನಗೈದ ನಂತರ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಲೂಟಿ ಮಾಡಿದರು. ಸಂಸತ್ತಿಗೂ ದಾಳಿಯಿಟ್ಟ ಪ್ರತಿಭಟನಾಕಾರರು ಸಂಸದರ ಕುರ್ಚಿ ಮೇಲೆ ಕೂತು ಧೂಮಪಾನ ಸೇರಿದಂತೆ ಮುಂತಾದ ಅಸಭ್ಯ ಚಟುವಟಿಗಳನ್ನು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಸೀನಾ ಅವರು ತಮ್ಮ ತಂಗಿ ಶೇಖ್‌ ರೆಹಾನಾ ಅವರೊಂದಿಗೆ ಸೇನಾ ವಿಮಾನದ ಮೂಲಕ ದೇಶ ತೊರೆದ ಸುದ್ದಿ ಬಿತ್ತರವಾದ ಕೂಡಲೇ ಸಾವಿರಾರು ಸಂಖ್ಯೆಯ ಪ್ರತಿಭಟನಕಾರರು ಪ್ರಧಾನಿ ಅವರ ಅಧಿಕೃತ ನಿವಾಸಕ್ಕೆ ‘ಗಾನಾಭವನ್‌’ಗೆ ನುಗ್ಗಿ ಲೂಟಿ ಮಾಡಿದರು. ಮನೆಯ ಆವರಣದಲ್ಲಿದ್ದ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ಕಾಯಕಲ್ಪದ ಅಗತ್ಯವಿದೆ

ಧನ್ಮೋಂಡಿ ಮತ್ತು ಢಾಕಾದಲ್ಲಿನ ಅವಾಮಿ ಲೀಗ್‌ ಪಕ್ಷದ ಕಚೇರಿಗಳಿಗೂ ಬೆಂಕಿ ಹಚ್ಚುವ ಮೂಲಕ ಪ್ರತಿಭಟನ ಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಾಂಗ್ಲಾದೇಶದ ಮೀಸಲು ನಿಯಮವನ್ನು ವಿರೋಧಿಸಿ ಮತ್ತು ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರವು ಪ್ರತಿಭಟನೆ ಮುಂದುವರಿದಿದ್ದು, 56 ಜನರು ಮೃತಪಟ್ಟಿದ್ದಾರೆ. ಇದರಿಂದ ಎರಡು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...