ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ: ಜೈಶಂಕರ್‌ಗೆ ಕೆನಡಾ ಸಚಿವ ತಿರುಗೇಟು

Date:

ಭಾರತ ಘೋಷಿತ ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿಸಲಾಗಿರುವ ಮೂವರು ಭಾರತೀಯರ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾ ವಿರುದ್ಧ ಕಿಡಿಕಾರಿದ್ದ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳಿಕೆಯನ್ನು ಕೆನಡಾ ಸಚಿವರು ಖಂಡಿಸಿದ್ದಾರೆ.

“ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ. ಭಾರತದ ವಿದೇಶಾಂಗ ಸಚಿವರು ಅವರ ಹೇಳಿಕೆ ಮಂಡಿಸಲು ಅರ್ಹರು. ಅವರ ಮನಸ್ಸಿನಲ್ಲಿರುವುದನ್ನು ಹೇಳಲು ನಾನು ಬಿಡುತ್ತೇನೆ. ಆದರೆ ಇದು ಸತ್ಯದಿಂದ ಕೂಡಿಲ್ಲ” ಎಂದು ಕೆನಡಾದ ವಲಸಿಗ ಸಚಿವ ಮಾರ್ಕ್‌ ಮಿಲ್ಲರ್ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ವಲಸಿಗರಿಗೆ ಸಂಘಟನಾತ್ಮಕ ಅಪರಾಧ ಕೈಗೊಳ್ಳಲು ಕೆನಡಾ ಅನುಮತಿಸುತ್ತದೆ ಎಂಬ ಜೈಶಂಕರ್‌ ಆರೋಪವನ್ನು ತಳ್ಳಿಹಾಕಿದ ಮಿಲ್ಲರ್, ಬಂಧಿತ ಮೂವರು ಆರೋಪಿಗಳ ಬಗ್ಗೆ ಕೆನಡಾ ಪೊಲೀಸರ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಬಂಧಿತ ಮೂವರು ಭಾರತೀಯರು ಕೆನಡಾದಲ್ಲಿ ವಿದ್ಯಾರ್ಥಿ ವಿಸಾದಲ್ಲಿ ಆಗಮಿಸಿದ್ದರು ಎಂಬ ವರದಿಗಳ ಬಗ್ಗೆ ಮಿಲ್ಲರ್ ದೃಢಪಡಿಸಲಿಲ್ಲ.

ಇತ್ತೀಚಿಗಷ್ಟೆ ಕೆನಡಾ ವಿರುದ್ಧ ಮಾತನಾಡಿದ್ದ ಜೈಶಂಕರ್, ನವದೆಹಲಿಯ ಎಚ್ಚರಿಕೆಯ ನಡುವೆಯೂ ಭಾರತದಿಂದ ಆಗಮಿಸಿದ ಕೆಲವರಿಗೆ ಕೆನಡಾ ಸಂಘಟನಾತ್ಮಕ ಅಪರಾಧ ಕೈಗೊಳ್ಳಲು ಅನುಮತಿಸುತ್ತದೆ. ಪಾಕಿಸ್ತಾನ ಪರ ಒಲವಿರುವ ರಾಜಕೀಯ ಪ್ರಭಾವ ಹೊಂದಿರುವ ಕೆಲವರನ್ನು ಕೆನಡಾ ಸ್ವಾಗತಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಕೆನಡಾ ವಿರುದ್ಧ ಆರೋಪಿಸಿದ್ದರು.

ಖಲಿಸ್ತಾನಿ ಭಯೋತ್ಪಾದಕ ಹರ್‌ದೀಪ್‌ ಸಿಂಗ್ ನಿಜ್ಜರ್‌ನನ್ನು 2023ರ ಜೂನ್‌ನಲ್ಲಿ ಕೆನಡಾದ ಸರ್ರೆಯ ಗುರುದ್ವಾರದ ಹೊರಭಾಗದಲ್ಲಿ ಗುಂಡಿಟ್ಟು ಕೊಲ್ಲಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಕೆನಡಾ ಸರ್ಕಾರ ಬಂಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...