ಕರ್ನಾಟಕ ರಾಜ್ಯೋತ್ಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಅನಿವಾಸಿ ಕನ್ನಡಿಗ ವಿಭಾಗದಲ್ಲಿ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಬಿ. ಝಕರಿಯಾ ಜೋಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯನವರು ಇಂದು(ನ.1) ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಿದ್ದಾರೆ.
ಪ್ರಶಸ್ತಿ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಝಕರಿಯಾ ಜೋಕಟ್ಟೆಯವರು ಈಗಾಗಲೇ ಸೌದಿ ಅರೇಬಿಯಾದಿಂದ ಬೆಂಗಳೂರು ತಲುಪಿದ್ದಾರೆ. ಈ ಹಿನ್ನೆಲೆಯಲ್ಲಿ ಝಕರಿಯಾ ಅವರನ್ನು ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ, ವಿಧಾನ ಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಅವರು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಝಕರಿಯಾ ಜೋಕಟ್ಟೆಯವರು ಸೌದಿ ಅರೇಬಿಯಾದ ಜುಬೈಲ್ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಕೂಡ ಆಗಿದ್ದಾರೆ.
ಇದನ್ನು ಓದಿದ್ದೀರಾ? ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯದ ಹಲವಾರು ಸಂಘಸಂಸ್ಥೆಗಳ ನಿರ್ದೇಶಕ, ಸಲಹೆಗಾರ, ಪ್ರಾಯೋಜಕರಾಗಿ ಸಹಸ್ರಾರು ಬಡ, ಅಶಕ್ತರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಝಕರಿಯಾ ಜೋಕಟ್ಟೆಯವರ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ‘ಅನಿವಾಸಿ ಕನ್ನಡಿಗ’ ವಿಭಾಗದಲ್ಲಿ ರಾಜ್ಯ ಸರ್ಕಾರವು ಆಯ್ಕೆ ಮಾಡಿದೆ.





