ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆಗೆ ರಾಜ್ಯೋತ್ಸವ ಪ್ರಶಸ್ತಿ: ಡಾ. ಆರತಿ ಕೃಷ್ಣರಿಂದ ಅಭಿನಂದನೆ

Date:

ಕರ್ನಾಟಕ ರಾಜ್ಯೋತ್ಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಅನಿವಾಸಿ ಕನ್ನಡಿಗ ವಿಭಾಗದಲ್ಲಿ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಬಿ. ಝಕರಿಯಾ ಜೋಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯನವರು ಇಂದು(ನ.1) ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಿದ್ದಾರೆ.

ಪ್ರಶಸ್ತಿ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಝಕರಿಯಾ ಜೋಕಟ್ಟೆಯವರು ಈಗಾಗಲೇ ಸೌದಿ ಅರೇಬಿಯಾದಿಂದ ಬೆಂಗಳೂರು ತಲುಪಿದ್ದಾರೆ. ಈ ಹಿನ್ನೆಲೆಯಲ್ಲಿ ಝಕರಿಯಾ ಅವರನ್ನು ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ, ವಿಧಾನ ಪರಿಷತ್‌ ಸದಸ್ಯೆ ಡಾ. ಆರತಿ ಕೃಷ್ಣ ಅವರು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಝಕರಿಯಾ ಜೋಕಟ್ಟೆಯವರು ಸೌದಿ ಅರೇಬಿಯಾದ ಜುಬೈಲ್‌ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಕೂಡ ಆಗಿದ್ದಾರೆ.

ಇದನ್ನು ಓದಿದ್ದೀರಾ? ಅನಿವಾಸಿ ಕನ್ನಡಿಗ ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ರಾಜ್ಯದ ಹಲವಾರು ಸಂಘಸಂಸ್ಥೆಗಳ ನಿರ್ದೇಶಕ, ಸಲಹೆಗಾರ, ಪ್ರಾಯೋಜಕರಾಗಿ ಸಹಸ್ರಾರು ಬಡ, ಅಶಕ್ತರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಝಕರಿಯಾ ಜೋಕಟ್ಟೆಯವರ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ‘ಅನಿವಾಸಿ ಕನ್ನಡಿಗ’ ವಿಭಾಗದಲ್ಲಿ ರಾಜ್ಯ ಸರ್ಕಾರವು ಆಯ್ಕೆ ಮಾಡಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...