ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: ಜಾಗತಿಕ ಇಂಧನ ಪೂರೈಕೆಗೆ ಅಡ್ಡಿ; ತೈಲ ಬೆಲೆ ತೀವ್ರ ಏರಿಕೆ

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನತೆ ಉಂಟಾಗಿದ್ದು, ಇಂಧನ ಪೂರೈಕೆ ಸರಪಳಿಗೆ ಅಡ್ಡಿಯುಂಟಾಗಿದೆ. ಸೋಮವಾರ ತೈಲ ಬೆಲೆಗಳು ತೀವ್ರವಾಗಿ ಏರಿಕೆ ಕಂಡಿದೆ.

ಪರ್ಷಿಯನ್ ಕೊಲ್ಲಿಯ ಕಿರಿದಾದ ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸುವ ಎರಡು ಹಡಗುಗಳ ಮೇಲೆ ದಾಳಿ ನಡೆದಿದೆ. ಇತರೆಗಳಲ್ಲೂ ದಾಳಿಗಳು ನಡೆದಿದೆ. ಇದರಿಂದಾಗಿ ವಿಶ್ವದ ಇತರ ಭಾಗಗಳಿಗೆ ತೈಲವನ್ನು ರಫ್ತು ಮಾಡುವ ದೇಶಗಳಿಗೆ ಪೂರೈಕೆಗೆ ತೊಂದರೆ ಉಂಟಾಗಿದೆ. ಇಂಧನ ತಜ್ಞರ ಪ್ರಕಾರ, ಯುದ್ಧ ಇದೇ ರೀತಿ ಮುಂದುವರೆದರೆ ಕಚ್ಚಾ ತೈಲ ಮತ್ತು ಗ್ಯಾಸೋಲಿನ್‌ ಬೆಲೆಗಳು ಇನ್ನೂ ಅಧಿಕವಾಗಲಿದೆ.

ಇದನ್ನು ಓದಿದ್ದೀರಾ? ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತೀಯರಿಗೆ ಸಹಾಯವಾಣಿ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದಲ್ಲಿ ಉತ್ಪಾದಿಸುವ ಕಚ್ಚಾ ತೈಲ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಸೋಮವಾರ ಮುಂಜಾನೆ ಬ್ಯಾರೆಲ್‌ಗೆ ಸುಮಾರು $72ಗೆ ತಲುಪಿದೆ. ಶುಕ್ರವಾರ ಇದರ ಬೆಲೆ $67 ಆಗಿತ್ತು. ಇದೀಗ 7.3% ಹೆಚ್ಚಾಗಿದೆ.

ಇನ್ನು ವಿಶ್ವದ ಪ್ರಮುಖ ತೈಲ ಬೆಲೆ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲ ಸೋಮವಾರ ವಹಿವಾಟಿನ ಆರಂಭದಲ್ಲಿ ಪ್ರತಿ ಬ್ಯಾರೆಲ್‌ಗೆ $78.55 ಕ್ಕೆ ವಹಿವಾಟು ನಡೆಸುತ್ತಿದೆ ಎಂದು ಫ್ಯಾಕ್ಟ್‌ಸೆಟ್ ತಿಳಿಸಿದೆ. ಶುಕ್ರವಾರ ವಹಿವಾಟಿನ ಬೆಲೆ $72.87 ಆಗಿತ್ತು. ಸೋಮವಾರಕ್ಕೆ ಶೇ. 7.8ರಷ್ಟು ಏರಿಕೆಯಾಗಿ ಏಳು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಜಾಗತಿಕವಾಗಿ ಇಂಧನ ಬೆಲೆ ಅಧಿಕವಾಗುವುದರಿಂದಾಗಿ ಹಲವು ದೇಶಗಳಲ್ಲಿ ಪೆಟ್ರೋಲ್ ಬೆಲೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆಯಿದೆ. ಸಾಗಾಟ ವೆಚ್ಚ ಅಧಿಕವಾಗುವ ಕಾರಣದಿಂದಾಗಿ ದಿನಸಿ ಮತ್ತು ಇತರ ಸರಕುಗಳ ಬೆಲೆಯೂ ಹೆಚ್ಚಾಗಬಹುದು ಎನ್ನುತ್ತಾ ತಜ್ಞರು.

ದಿನಕ್ಕೆ ಸರಿಸುಮಾರು 15 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ, ವಿಶ್ವದ ತೈಲದ ಸುಮಾರು 20% ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತದೆ. ತೈಲ ಸಾಗಿಸಲು ಪ್ರಮುಖ ಮಾರ್ಗ ಇದಾಗಿದೆ. ಉತ್ತರದಲ್ಲಿ ಇರಾನ್ ಗಡಿಯಲ್ಲಿರುವ ಈ ಜಲಸಂಧಿಯ ಮೂಲಕ ಸೌದಿ ಅರೇಬಿಯಾ, ಕುವೈತ್, ಇರಾಕ್, ಕತಾರ್, ಬಹ್ರೇನ್, ಯುಎಇ ಮತ್ತು ಇರಾನ್‌ ತೈಲ ಮತ್ತು ಅನಿಲವನ್ನು ಸಾಗಿಸುತ್ತವೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ದಾಳಿ ಪ್ರತಿದಾಳಿಗಳು ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...