ದುಬೈ, ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಇರಾನ್ ದಾಳಿ: ಓರ್ವ ಸಾವು, 11 ಮಂದಿಗೆ ಗಾಯ

Date:

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಬೃಹತ್ ವಾಯುದಾಳಿಗೆ ಪ್ರತಿಕಾರವಾಗಿ ಇರಾನ್ ಮಧ್ಯಪ್ರಾಚ್ಯದಾದ್ಯಂತ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಆರಂಭಿಸಿದೆ. ಇದರ ಪರಿಣಾಮವಾಗಿ ದುಬೈ ಮತ್ತು ಅಬುಧಾಬಿ ವಿಮಾನ ನಿಲ್ದಾಣಗಳಲ್ಲಿ ಓರ್ವ ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ.

ಅಬುಧಾಬಿಯ ಜಾಯೆದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ನುಗ್ಗಿ ಬಂದ ಡ್ರೋನ್ ಅನ್ನು ಮಾರ್ಗಮಧ್ಯೆಯೇ ಹೊಡೆದುರುಳಿಸಲಾಗಿದೆ. ಈ ವೇಳೆ ಅದರ ಅವಶೇಷಗಳು ಬಿದ್ದು ಓರ್ವ ಮೃತಪಟ್ಟು, ಏಳು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಮತ್ತೊಂದೆಡೆ, ಪ್ರಯಾಣಿಕರ ದಟ್ಟಣೆಯಲ್ಲಿ ವಿಶ್ವದಲ್ಲೇ ಅತ್ಯಂತ ಕಾರ್ಯನಿರತವಾಗಿರುವ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಹಾನಿಯಾಗಿದ್ದು, ಅಲ್ಲಿ ನಡೆದ ‘ಘಟನೆ’ಯಲ್ಲಿ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಂತರ ಜಾಗತಿಕ ಪ್ರಯಾಣದ ಮೇಲೆ ಉಂಟಾದ ಅತ್ಯಂತ ಗಂಭೀರ ವ್ಯತ್ಯಯ ಇದಾಗಿದ್ದು, ಈ ಪ್ರದೇಶಕ್ಕೆ ಬರುವ ಹಾಗೂ ಇಲ್ಲಿಂದ ತೆರಳುವ ಸಾವಿರಾರು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ಬೆಳಿಗ್ಗೆ ಆರಂಭವಾದ ಅಮೆರಿಕ-ಇಸ್ರೇಲ್ ಜಂಟಿ ವಾಯುದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಹತ್ಯೆಯಾಗಿದ್ದಾರೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದಿರುವ ಇರಾನ್‌, ಗಲ್ಫ್‌ ರಾಷ್ಟ್ರಗಳಾದ್ಯಂತ ಇರುವ ಅಮೆರಿಕದ ಮಿತ್ರರಾಷ್ಟ್ರಗಳು ಮತ್ತು ಅಮೆರಿಕದ ಸೇನಾ ನೆಲೆಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಬಳಸಿ ವ್ಯಾಪಕ ದಾಳಿ ನಡೆಸಿದೆ. ಭಾನುವಾರವೂ ಇರಾನ್‌ನ ಪ್ರತೀಕಾರದ ದಾಳಿ ಮುಂದುವರಿದಿದ್ದು ದೋಹಾ, ದುಬೈ ಮತ್ತು ಮನಾಮದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ.

ಅಮೆರಿಕದ ಸೇನಾ ನೆಲೆಗಳನ್ನು ಹೊಂದಿರುವ ಕತಾರ್, ಬಹ್ರೇನ್, ಜೋರ್ಡಾನ್ ಮತ್ತು ಕುವೈತ್ ತಮ್ಮತ್ತ ಹಾರಿಬಂದ ಕ್ಷಿಪಣಿಗಳನ್ನು ಆಕಾಶದಲ್ಲೇ ತಡೆಹಿಡಿದಿರುವುದಾಗಿ ಹೇಳಿವೆ. ಆದರೆ, ಕ್ಷಿಪಣಿಯ ಅವಶೇಷಗಳು ಬಿದ್ದು ವ್ಯಾಪಕ ಹಾನಿ ಉಂಟಾಗಿರುವುದು ಕಂಡುಬಂದಿದೆ. ವಿಶ್ವದ 9ನೇ ಅತಿದೊಡ್ಡ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದುಬೈನ ಜೆಬೆಲ್ ಅಲಿ ಬಂದರಿನಲ್ಲಿಯೂ ಆಕಾಶದಲ್ಲೇ ತಡೆಹಿಡಿಯಲಾದ ಅಸ್ತ್ರಗಳ ಅವಶೇಷಗಳು ಬಿದ್ದು ಬೆಂಕಿ ಹೊತ್ತಿಕೊಂಡಿದೆ.

ಇದನ್ನು ಓದಿದ್ದೀರಾ? ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಡ್ರೋನ್ ದಾಳಿಯಿಂದ ತಮ್ಮ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಎಂದು ಬಹ್ರೇನ್‌ನ ಗೃಹ ಸಚಿವಾಲಯ ತಿಳಿಸಿದೆ. ಭಾನುವಾರ ಬೆಳಿಗ್ಗೆಯೂ ದಾಳಿ ಮುಂದುವರಿದಿರುವ ಬಗ್ಗೆ ವರದಿಯಾಗಿದೆ. ಶನಿವಾರ ಬಹ್ರೇನ್ ರಾಜಧಾನಿ ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ ಐದನೇ ಫ್ಲೀಟ್‌ನ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿರುವುದಾಗಿ ಇರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ ಹೇಳಿಕೊಂಡಿದೆ. ಸೇನಾ ನೆಲೆಯ ಬಳಿ ದಟ್ಟ ಕಪ್ಪು ಹೊಗೆ ಆವರಿಸಿದ್ದ ದೃಶ್ಯಗಳು ಕಂಡುಬಂದಿವೆ.
ಈ ಮಧ್ಯೆ, ಒಮಾನ್‌ನ ದುಕ್ಮ್ ವಾಣಿಜ್ಯ ಬಂದರನ್ನು ಗುರಿಯಾಗಿಸಿ ಎರಡು ಡ್ರೋನ್ ದಾಳಿ ನಡೆದಿದ್ದು, ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ ಎಂದು ಒಮಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇರಾನ್‌ನಲ್ಲಿ 200ಕ್ಕೂ ಹೆಚ್ಚು ಸಾವು

ಇರಾನ್‌ನ ಪಶ್ಚಿಮ ಮತ್ತು ಮಧ್ಯ ಭಾಗದಲ್ಲಿ 30ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ಭಾನುವಾರ ಮುಂಜಾನೆ ತಿಳಿಸಿದೆ. ಇರಾನ್‌ನ ವಾಯು ರಕ್ಷಣಾ ನೆಲೆಗಳು, ಕ್ಷಿಪಣಿ ನೆಲೆಗಳು, ಸೇನಾ ಪ್ರಧಾನ ಕಚೇರಿಗಳು ಮತ್ತು ಸರ್ಕಾರದ ಇತರ ಗುರಿಗಳ ಮೇಲೆ ದಾಳಿ ಮುಂದುವರಿಯಲಿದೆ ಎಂದು ಅದು ಘೋಷಿಸಿದೆ.

ಶನಿವಾರದಿಂದ ಇರಾನ್‌ನಲ್ಲಿ ಕನಿಷ್ಠ 201 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣದ ಮಿನಾಬ್ ನಗರದ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ಮೇಲೆ ನಡೆದ ದಾಳಿಯಲ್ಲಿಯೇ 148 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ, ಅಮೆರಿಕದ 27 ಸೇನಾ ನೆಲೆಗಳು, ಇಸ್ರೇಲ್‌ನ ಟೆಲ್ ನೋಫ್ ವಾಯುನೆಲೆ, ಟೆಲ್ ಅವಿವ್‌ನಲ್ಲಿರುವ ಇಸ್ರೇಲ್ ಸೇನಾ ಕಮಾಂಡ್ ಪ್ರಧಾನ ಕಚೇರಿ ಮತ್ತು ನಗರದ ಬೃಹತ್ ರಕ್ಷಣಾ ಕೈಗಾರಿಕಾ ಸಂಕೀರ್ಣದ ಮೇಲೆ ಪ್ರತೀಕಾರದ ದಾಳಿಗಳನ್ನು ನಡೆಸುತ್ತಿರುವುದಾಗಿ ಇರಾನ್‌ನ ಐಆರ್‌ಜಿಸಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...