ನಾಸಾದಲ್ಲಿ 2000ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ರಾಜೀನಾಮೆ

Date:

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದಲ್ಲಿ ಉನ್ನತ ಹುದ್ದೆಯಲ್ಲಿರುವ 2145 ಮಂದಿ ಸಾಮೂಹಿಕ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅತ್ಯುನ್ನತ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇದೀಗ ಅನುಭವಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಆಂತರಿಕ ದಾಖಲೆಗಳನ್ನು ಉಲ್ಲೇಖಿಸಿ ಪೊಲಿಟಿಕೊ ವರದಿ ಮಾಡಿದೆ.

ಉನ್ನತ ವ್ಯವಸ್ಥಾಪನಾ ಮತ್ತು ತಾಂತ್ರಿಕ ನೈಪುಣ್ಯತೆ ಹುದ್ದೆಯಲ್ಲಿದ್ದ ಜಿಎಸ್-13 ಶ್ರೇಣಿಯಿಂದ ಜಿಎಸ್-15 ಶ್ರೇಣಿಯವರೆಗಿನ ಅಧಿಕಾರಿಗಳು ನಾಸಾ ತ್ಯಜಿಸಲಿದ್ದು, ಇವರಲ್ಲಿ 875 ಮಂದಿ ಜಿಎಸ್-15 ಸಿಬ್ಬಂದಿ ಸೇರಿದ್ದಾರೆ. ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ವಿ‌ಸ್ತೃತ ಪ್ರಯತ್ನದ ಭಾಗವಾಗಿ ನಾಸಾದಿಂದ ಅವಧಿಪೂರ್ವ ನಿವೃತ್ತಿ, ಮುಷ್ಕರ ಅಥವಾ ವಿಳಂಬಿತ ರಾಜೀನಾಮೆಗೆ ಮುಂದಾಗಿರುವ 2694 ಮಂದಿಯ ಪೈಕಿ ಬಹುತೇಕ ಮಂದಿ ತಾಂತ್ರಿಕ ತಜ್ಞರು ಸೇರಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಸಾದ ಮಹತ್ವಾಕಾಂಕ್ಷಿ ಸೈನ್ಸ್ ಅಂಡ್ ಹ್ಯೂಮನ್ ಸ್ಪೇಸ್ ಫ್ಲೈಟ್ ಯೋಜನೆಯ ಕರ್ತವ್ಯದಿಂದ 1818 ಮಂದಿ ನಿರ್ಗಮಿಸುತ್ತಿದ್ದಾರೆ. ಇದರ ಜತೆಗೆ ಐಟಿ ಮತ್ತು ಹಣಕಾಸು ವಿಭಾಗದ ಹಲವು ಮಂದಿಯೂ ನಾಸಾ ತೊರೆಯುತ್ತಿದ್ದಾರೆ. “ಏಜೆನ್ಸಿಯ ಪ್ರಮುಖ ವ್ಯವಸ್ಥಾಪನಾ ಮತ್ತು ತಾಂತ್ರಿಕ ನೈಪುಣ್ಯತೆಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ” ಎಂದು ಪ್ಲಾನಿಟರಿ ಸೊಸೈಟಿಯ ಬಾಹ್ಯಾಕಾಶ ನೀತಿ ವಿಭಾಗದ ಮುಖ್ಯಸ್ಥ ಕ್ಯಾಸಿ ಡ್ರೀಯರ್ ಎಚ್ಚರಿಸಿದ್ದಾರೆ.

2026ರ ಶ್ವೇತಭವನ ಬಜೆಟ್‌ನಲ್ಲಿ ನಾಸಾದ ಅನುದಾನವನ್ನು ಶೇಕಡ 25ರಷ್ಟು ಕಡಿತಗೊಳಿಸುವ ಪ್ರಸ್ತಾವವಿದ್ದು, 5 ಸಾವಿರ ಸಿಬ್ಬಂದಿಯನ್ನು ಕಡಿತಗೊಳಿಸಲೂ ನಿರ್ಧರಿಸಲಾಗಿದೆ. ಇದರಿಂದಾಗಿ 1960ರ ದಶಕದಲ್ಲಿ ಪುಟ್ಟ ಬಾಹ್ಯಾಕಾಶ ಸಂಶೋಧನಾ ಕೇಂದ್ರವಾಗಿ ಆರಂಭವಾದಾಗ ಇದ್ದ ಗಾತ್ರಕ್ಕೇ ಇಳಿಯಲಿದೆ. ಎಲ್ಲ 10 ನಾಸಾ ಪ್ರಾದೇಶಿಕ ಕೇಂದ್ರಗಳಿಗೂ ಇದರಿಂದ ತೊಂದರೆಯಾಗಲಿದ್ದು, ಗೊಡ್ಡಾರ್ಡ್ ಸ್ಪೇಸ್ ಫ್ಲೈಟ್ ಸೆಂಟರ್ 607 ಸಿಬ್ಬಂದಿಯನ್ನು ಕಳೆದುಕೊಳ್ಳಲಿದೆ. ಉಳಿದಂತೆ ಜಾನ್ಸನ್ ಸ್ಪೇಸ್ ಟೆಂಟರ್ (366), ಕೆನಡಿ ಸ್ಪೇಸ್ ಸೆಂಟರ್ (311), ನಾಸಾ ಕೇಂದ್ರ ಕಚೇರಿ (307), ಲಾಂಗ್ಲೆ ರಿಸರ್ಚ್ ಸೆಂಟರ್ (281), ಮಾರ್ಷಲ್ ಸ್ಪೇಸ್ ಫ್ಲೈಟ್ ಸೆಂಟರ್ (279) ಮತ್ತು ಗ್ಲೆನ್ ರಿಸರ್ಚ್ ಸೆಂಟರ್ (191) ಕೂಡಾ ಗಣನೀಯ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕಳೆದುಕೊಳ್ಳಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...