ಶ್ರೀಲಂಕಾ | ಬಂಡೆಯಿಂದ ಉರುಳಿದ 75 ಜನರಿದ್ದ ಬಸ್; 21 ಮಂದಿ ಸಾವು

Date:

ಸುಮಾರು 75 ಜನರನ್ನು ತುಂಬಿಕೊಂಡು ಸಾಗುತ್ತಿದ್ದ ಬಸ್ ಬಂಡೆಯಿಂದ ಪ್ರಪಾತಕ್ಕೆ ಉರುಳಿದ್ದು, ಸುಮಾರು 21 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀಲಂಕಾದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ದಶಕಗಳಲ್ಲಿ ಶ್ರೀಲಂಕಾದಲ್ಲಿ ನಡೆದ ಅತ್ಯಂತ ಭೀಕರ ರಸ್ತೆ ಅಪಘಾತಗಳಲ್ಲಿ ಇದು ಒಂದಾಗಿದೆ ಎನ್ನಲಾಗಿದೆ. ಸರ್ಕಾರಿ ಸ್ವಾಮ್ಯದ ಬಸ್ ಕೋಟ್ಮಲೆಯ ಮಧ್ಯ ಗುಡ್ಡಗಾಡು ಪ್ರದೇಶದ ಮೂಲಕ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ಬೆಳಗಿನ ಜಾವ ಬಂಡೆಯ ಪಕ್ಕದ ರಸ್ತೆಯಿಂದ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಶ್ರೀಲಂಕಾ| ಪ್ರೇಕ್ಷಕರೆಡೆಗೆ ನುಗ್ಗಿದ ರೇಸಿಂಗ್ ಕಾರು; ಏಳು ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಸುಮಾರು 75 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಬಸ್‌ನ ಸಾಮರ್ಥ್ಯಕ್ಕಿಂತ ಸುಮಾರು 20 ಹೆಚ್ಚು ಮಂದಿ ಬಸ್‌ನಲ್ಲಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

“ಇದು ಬಸ್‌ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಸಂಭವಿಸಿರುವ ಅಪಘಾತವೇ ಅಥವಾ ಚಾಲಕ ನಿದ್ದೆಗೆ ಜಾರಿ ಅಪಘಾತ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ನಾವು ಕಾರಣ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿರುವುದಾಗಿ ಎಎಫ್‌ಪಿ ವರದಿ ಮಾಡಿದೆ.

“ಹದಿನೈದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾವು 30 ಜನರನ್ನು ಆಸ್ಪತ್ರೆಗೆ ಕಳುಹಿಸಿದ್ದೇವೆ. ಈ ಪೈಕಿ ಹೆಚ್ಚು ಮಂದಿ ಬೌದ್ಧರು” ಎಂದು ಅಧಿಕಾರಿ ತಿಳಿಸಿರುವುದಾಗಿ ವರದಿಯಾಗಿದೆ.

ಶ್ರೀಲಂಕಾದಲ್ಲಿ ವಾರ್ಷಿಕವಾಗಿ ಸರಾಸರಿ 3,000 ರಸ್ತೆ ಅಪಘಾತ ಸಾವುಗಳು ಸಂಭವಿಸುತ್ತಿದ್ದು, ದ್ವೀಪದ ರಸ್ತೆಗಳು ವಿಶ್ವದ ಅತ್ಯಂತ ಅಪಾಯಕಾರಿ ರಸ್ತೆಗಳಲ್ಲಿ ಒಂದಾಗಿದೆ. 2005ರ ಏಪ್ರಿಲ್‌ನಲ್ಲಿ ಪೋಲ್‌ಗಹವೆಲಾ ಪಟ್ಟಣದ ಲೆವೆಲ್ ಕ್ರಾಸಿಂಗ್‌ನಲ್ಲಿ ನಡೆದ ಅಪಘಾತದ ಬಳಿಕ ನಡೆದ ಅತ್ಯಂಕ ಭೀಕರ ಅಪಘಾತ ಇದಾಗಿದೆ ಎನ್ನಲಾಗಿದೆ. 2005ರ ಅಪಘಾತದಲ್ಲಿ 37 ಪ್ರಯಾಣಿಕರು ಸಾವನ್ನಪ್ಪಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...