ಪಹಲ್ಗಾಮ್ ದಾಳಿ | ‘ಅಂತಾರಾಷ್ಟ್ರೀಯ ತನಿಖೆ’ಗೆ ಪಾಕಿಸ್ತಾನ ಒತ್ತಾಯ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂಬ ಆರೋಪವನ್ನು ಪಾಕ್‌ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ನಿರಾಕರಿಸಿದ್ದಾರೆ. ಆ ಭಯೋತ್ಪಾದಕ ದಾಳಿಯ ಕುರಿತು ಅಂತಾರಾಷ್ಟ್ರೀಯ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಯಾವುದೇ ತನಿಖೆಗೆ ಪಾಕಿಸ್ತಾನ ಸಹಕರಿಸಲು ಸಿದ್ಧವಿದೆ ಎಂದು ಅವರು ನ್ಯೂಯಾರ್ಕ್‌ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ಭಾರತವು ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳು ದಾಳಿ ನಡೆಸಿದ್ದಾರೆಂದು ದೂಷಿಸುತ್ತಿದೆ. ಭದ್ರತಾ ಸಂಸ್ಥೆಗಳು 2008ರ ಮುಂಬೈ ದಾಳಿಗೆ ಕಾರಣವಾದ ಲಷ್ಕರ್-ಎ-ತೈಬಾ ಸಂಘಟನೆಯ ಮೇಲೆ ಆರೋಪ ಮಾಡಿವೆ. ಆದರೆ, ಲಷ್ಕರ್-ಎ-ತೈಬಾ ಕತೆ ಮುಗಿದುಹೋಗಿದೆ. ಪಹಲ್ಗಾಮ್‌ನಲ್ಲಿನ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ. ಯಾವುದೇ ತನಿಖೆ ನಡೆದಿಲ್ಲ. ಪುರಾವೆಯಿಲ್ಲದೆ, ತನಿಖೆ ನಡೆಸದೆ ಪಾಕಿಸ್ತಾನವನ್ನು ಶಿಕ್ಷಿಸಲು ಭಾರತ ಯತ್ನಿಸುತ್ತಿದೆ. ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದರಿಂದ ಪಾಕಿಸ್ತಾನಕ್ಕೆ ಯಾವುದೇ ಲಾಭವಿಲ್ಲ. ಭಾರತವು ಈ ಘಟನೆಯನ್ನು ರಾಜಕೀಯ ಲಾಭ ಪಡೆಯಲು ಮತ್ತು ಸಿಂಧು ನದಿ ಒಪ್ಪಂದದಿಂದ ಹಿಂದೆ ಸರಿಯುವುದನ್ನು ಸಮರ್ಥಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಸಂಘರ್ಷವು ಭುಗಿಲೆದ್ದರೆ ಕಾಶ್ಮೀರ ಪ್ರದೇಶಕ್ಕೆ ವಿಪತ್ತು ಉಂಟಾಗಬಹುದು. ಆದ್ದರಿಂದ ನಾವು ಈ ಸಂಘರ್ಷ ಭುಗಿಲೆದ್ದಂತೆ ಭಾವಿಸುವುದಿಲ್ಲ. ಪಾಕಿಸ್ತಾನದ ಅಧಿಕಾರಿಗಳು ವಿವಾದವನ್ನು ಪರಿಹರಿಸಲು ಅಮೆರಿಕವನ್ನು ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಲಷ್ಕರ್-ಎ-ತೈಬಾ ನಿಷ್ಕ್ರಿಯವಾಗಿದೆ. ಅದು ಪಾಕಿಸ್ತಾನದಲ್ಲಿ ಯಾವುದೇ ಕಾರ್ಯಾಚರಣೆ ನಡೆಸಿರುವ ಅಥವಾ ಉಪಸ್ಥಿತಿ ಹೊಂದಿರುವ ಯಾವುದೇ ಉದಾಹರಣೆಗಳಿಲ್ಲ. ಲಷ್ಕರ್-ಎ-ತೈಬಾ ಕತೆ ಮುಗಿದಿದೆ. ಅವರಿಗೆ ಪಾಕಿಸ್ತಾನದಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಅದರ ಕೆಲವು ಸದಸ್ಯರು ಗೃಹಬಂಧನ ಅಥವಾ ಬಂಧನದಲ್ಲಿದ್ದಾರೆ” ಎಂದು ಆಸಿಫ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...