ಪಾಕ್‌-ಅಫ್ಘಾನ್‌ ಸಂಘರ್ಷ | ತಕ್ಷಣದ ಕದನ ವಿರಾಮಕ್ಕೆ ಎರಡೂ ರಾಷ್ಟ್ರಗಳು ಒಪ್ಪಿಗೆ

Date:

ಕಳೆದ ಒಂದು ವಾರಗಳಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಬಿಗಡಾಯಿಸಿದೆ. ಗಡಿಯಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದೀಗ, ಎರಡೂ ರಾಷ್ಟ್ರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ಭಾನುವಾರ ಮುಂಜಾನೆ ತಿಳಿಸಿದೆ.

ಇತ್ತೀಚೆಗೆ, ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಪಾಕಿಸ್ತಾನದ 12 ಮಂದಿಯನ್ನು ಅಫ್ಘಾನ್‌ನ ತಾಲಿಬಾನ್ ಪಡೆ ಹತ್ಯೆಗೈದಿತ್ತು. ಸಂಘರ್ಷದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಪರಿಸ್ಥಿತಿಯನ್ನು ಶಮನಗೊಳಿಸಲು ಕತಾರ್ ನೇತೃತ್ವದಲ್ಲಿ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದವು. ಇದೀಗ, ಕದನ ವಿರಾಮ ಘೋಷಿಸಲಾಗಿದೆ.

ಅಫ್ಘಾನಿಸ್ತಾನದಿಂದ ಕಾರ್ಯಾಚರಿಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಲು ಮತ್ತು ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಕದನ ವಿರಾಮವು ತಕ್ಷಣದ ಕ್ರಮಗಳನ್ನು ಜಾರಿಗೊಳಿಸುತ್ತದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ತಮ್ಮ ದಾಳಿಯನ್ನು ಸಮರ್ಥಿಸಿಕೊಂಡಿರುವ ಅಫ್ಘಾನ್, “ನಮ್ಮ ಗುರಿ ಉಗ್ರ ಹಫೀಜ್ ಗುಲ್ ಬಹದ್ದೂರ್ ಗುಂಪಿನ ಅಡಗುತಾಣಗಳನ್ನು ನಾಶ ಮಾಡುವುದಾಗಿತ್ತು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಿರ್ ಅಲಿಯಲ್ಲಿ ಭದ್ರತಾ ಪಡೆಗಳ ಆವರಣದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ನೇರ ಪ್ರತಿಕ್ರಿಯೆಯಾಗಿ ನಾವು ಕಾರ್ಯಾಚರಣೆ ನಡೆಸಿದ್ದೆವು” ಎಂದು ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...