ಅಫ್ಘಾನ್‌ ಆಸ್ಪತ್ರೆ ಮೇಲೆ ಪಾಕ್‌ ಭೀಕರ ವಾಯುದಾಳಿ; 400 ಮಂದಿ ಸಾವು

Date:

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವು ಮತ್ತಷ್ಟು ತೀವ್ರಗೊಂಡಿದೆ. ಸೋಮವಾರ ರಾತ್ರಿ ಪಾಕಿಸ್ತಾನದ ಮಿಲಿಟರಿ ವಿಮಾನಗಳು ಅಫ್ಘಾನ್ ರಾಜಧಾನಿ ಕಾಬೂಲ್‌ನಲ್ಲಿರುವ ಬೃಹತ್ ಆಸ್ಪತ್ರೆಯ ಮೇಲೆ ವಾಯುದಾಳಿ ನಡೆಸಿವೆ. ದಾಳಿಯಲ್ಲಿ ಸುಮಾರು 400 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್‌ನ ತಾಲಿಬಾನ್ ಸರ್ಕಾರ ತಿಳಿಸಿದೆ.

ಸುಮಾರು 2,000 ರೋಗಿಗಳನ್ನು ದಾಖಲಿಸಿಕೊಳ್ಳಬಹುದಾದ ಸಾಮರ್ಥ್ಯ ಹೊಂದಿರುವ ಕಾಬೂಲ್‌ನ ‘ಉಮರ್ ಅಡಿಕ್ಷನ್‌ ಟ್ರೀಟ್‌ಮೆಂಟ್‌ ಆಸ್ಪತ್ರೆ’ ಮೇಲೆ ಪಾಕ್ ಭೀಕರ ದಾಳಿ ನಡೆಸಿದೆ. ಈ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ.

ತಾಲಿಬಾನ್ ಸರ್ಕಾರದ ವಕ್ತಾರರ ಪ್ರಕಾರ, ವಾಯುದಾಳಿಯ ತೀವ್ರತೆಗೆ ಆಸ್ಪತ್ರೆಯ ಬಹುಭಾಗ ನೆಲಸಮವಾಗಿದೆ. ನೂರಾರು ರೋಗಿಗಳು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಸತ್ತವರ ಸಂಖ್ಯೆ ಈಗಾಗಲೇ 400 ದಾಟಿದ್ದು, ಸುಮಾರು 250ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಹರಸಾಹಸ ಪಡುತ್ತಿವೆ. ಸತ್ತವರೆಲ್ಲರೂ ನಿರಾಯುಧ ನಾಗರಿಕರು ಮತ್ತು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆಘಾತಕಾರಿ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ, “ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಕಾಬೂಲ್ ಮತ್ತು ನಂಗಹಾರ್ ಪ್ರಾಂತ್ಯಗಳಲ್ಲಿನ ಮಿಲಿಟರಿ ನೆಲೆಗಳು ಮತ್ತು ಉಗ್ರರ ಅಡಗುತಾಣಗಳ ಮೇಲೆ ಮಾತ್ರವೇ ‘ನಿಖರ ದಾಳಿ’ ನಡೆಸಿದೆ” ಎಂದು ಹೇಳಿಕೊಂಡಿದೆ. ಅಫ್ಘಾನ್ ಸರ್ಕಾರದ ಆರೋಪಗಳು ಸುಳ್ಳು ಮತ್ತು ದಾರಿತಪ್ಪಿಸುವಂತವು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಹೇಳಿದೆ.

ಕಳೆದ ಮೂರು ವಾರಗಳಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಗಡಿ ಸಂಘರ್ಷ ತಾರಕಕ್ಕೇರಿದೆ. ಪಾಕಿಸ್ತಾನವು ಅಫ್ಘಾನ್ ಸರ್ಕಾರವು ತನ್ನ ನೆಲದಲ್ಲಿ ಉಗ್ರರಿಗೆ ಆಶ್ರಯ ನೀಡುತ್ತಿದೆ ಎಂದು ಆರೋಪಿಸಿದೆ. ಅಫ್ಘಾನಿಸ್ತಾನ ಕೂಡ ಪಾಕಿಸ್ತಾನವು ತನ್ನ ಸಾರ್ವಭೌಮತ್ವವನ್ನು ಉಲ್ಲಂಘಿಸಿ ನಾಗರಿಕರ ಮೇಲೆ ದಾಳಿ ಮಾಡುತ್ತಿದೆ ಎಂದು ಕಿಡಿಕಾರುತ್ತಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಈ ಘಟನೆಯನ್ನು ಖಂಡಿಸಿದ್ದು, ಕೂಡಲೇ ಉಭಯ ದೇಶಗಳು ಸಂಯಮ ವಹಿಸಿ ಸಂಘರ್ಷ ಶಮನಗೊಳಿಸಬೇಕೆಂದು ಆಗ್ರಹಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...