ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ; ಯೋಧರು ಸೇರಿ ಕನಿಷ್ಠ 25 ಮಂದಿ ಸಾವು

Date:

ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ 14 ಯೋಧರು ಸೇರಿದಂತೆ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕ್ವೆಟ್ಟಾದಿಂದ ಪೇಶಾವರಕ್ಕೆ ರೈಲು ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಜಾಫರ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ಗೆ ತಲುಪಲು ಕೆಲವೇ ಕ್ಷಣಗಳು ಇರುವಾಗ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೇಳಿಕೆಯೊಂದರಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ರೈಲ್ವೇ ನಿಲ್ದಾಣದಲ್ಲಿ ನೆಲೆಸಿದ್ದ ಯೋಧರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ದಾಳಿ ನಡೆಸಿದೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾಶ್ಮೀರ ಎಂದಿಗೂ ಪಾಕಿಸ್ತಾನದ ಭಾಗವಾಗದು: ಫಾರೂಕ್‌ ಅಬ್ದುಲ್ಲಾ

ಸರ್ಕಾರಿ ವಕ್ತಾರರಾದ ಶಾಹಿದ್ ರಿಂಡ್ ಕೂಡಾ ಈ ಬಾಂಬ್ ಸ್ಫೋಟವು ಆತ್ಮಾಹುತಿ ಬಾಂಬರ್ ದಾಳಿಯಂತೆ ಕಾಣುತ್ತದೆ ಆದರೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ಇನ್‌ಫೆಂಟ್ರಿ ಶಾಲೆಯ ಸೇನಾ ಸಿಬ್ಬಂದಿಗಳೇ ಗುರಿಯಾಗಿದ್ದರು ಎಂದೂ ತಿಳಿಸಿದ್ದಾರೆ.

“ಗಾಯಗೊಂಡವರಲ್ಲಿ ಅನೇಕರು ಗಂಭೀರ ಸ್ಥಿತಿಯಲ್ಲಿದ್ದಾರೆ. ಈವರೆಗೆ ಗಾಯಗೊಂಡ 44 ಜನರನ್ನು ಸಿವಿಲ್ ಆಸ್ಪತ್ರೆಗೆ ಕರೆತರಲಾಗಿದೆ” ಎಂದು ಆಸ್ಪತ್ರೆಯ ವಕ್ತಾರ ಡಾ. ವಾಸಿಂ ಬೇಗ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...