ಪಾಕಿಸ್ತಾನ | ಬಲೂಚಿಸ್ತಾನದಲ್ಲಿ ಬಾಂಬ್ ದಾಳಿ: 10 ಮಂದಿ ಸಾವು

Date:

ಪಾಕಿಸ್ತಾನದ ವಿವಾದಿತ ರಾಜ್ಯವಾದ ಬಲೂಚಿಸ್ತಾನದಲ್ಲಿ ಅರೆಸೈನಿಕ ಪಡೆಗಳ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಸುಮಾರು 10 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಬೇಕೆಂದು ಕಳೆದ 25 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಬಂಡುಕೋರ ಸಂಘಟನೆ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’ (BLA) ಈ ಸ್ಪೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಈವರೆಗೆ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತಿಕೊಂಡಿಲ್ಲ ಎಂದು ವರದಿಯಾಗಿದೆ.

ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಪಾಕಿಸ್ತಾನದ ಅರೆಸೇನಾ ಪಡೆಗಳ ಪ್ರಧಾನ ಕಚೇರಿಯ ಬಳಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲೂಚಿಸ್ತಾನದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆ: ಒಬಿಸಿಗಳಿಗೆ ವಂಚಿಸಲು ಬಿಜೆಪಿ ನಾಯಕರ ಯತ್ನ?

“ಘಟನೆಯು ಯೋತ್ಪಾದಕ ದಾಳಿಯಾಗಿದೆ. ಹೇಡಿತನದಿಂದ ಭಯೋತ್ಪಾದಕರು ಈ ಕೃತ್ಯ ಎಸಗಿದ್ದಾರೆ. ಇಂತಹ ದಾಳಿಗಳಿಂದ ದೇಶವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ಬಲೂಚಿಸ್ತಾನದಲ್ಲಿ ಶಾಂತಿ ಮತ್ತು ಸುರಕ್ಷತೆಯ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ’ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್‌ ಸರ್ಫರಾಜ್‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...