ಪಾಕಿಸ್ತಾನ | ಆರ್ಥಿಕ ಬಿಕ್ಕಟ್ಟು: 1.5 ಲಕ್ಷ ಉದ್ಯೋಗ ಕಡಿತ, 6 ಸಚಿವಾಲಯಗಳ ವಿಸರ್ಜನೆ!

Date:

ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಂಟಾಗಿದೆ. ನಗದು ಕೊರತೆ ಕಾರಣ ಆಡಳಿತಾತ್ಮಕ ವೆಚ್ಚಗಳನ್ನು ಕಡಿಮೆ ಮಾಡಲೆಂದು ಪಾಕಿಸ್ತಾನ ಸರ್ಕಾರವು ಐಎಂಎಫ್‌ನೊಂದಿಗೆ ಮಾಡಿಕೊಂಡಿರುವ 7 ಶತಕೋಟಿ ಯುಎಸ್‌ ಡಾಲರ್ ಸಾಲದ ಒಪ್ಪಂದದ ಭಾಗವಾಗಿ ಸುಮಾರು 150,000 ಸರ್ಕಾರಿ ಹುದ್ದೆಗಳನ್ನು ಕಡಿತಗೊಳಿಸಿದೆ, ಆರು ಸಚಿವಾಲಯಗಳನ್ನು ವಿಸರ್ಜನೆ ಮಾಡಿದೆ ಮತ್ತು ಇನ್ನೆರಡು ಸಚಿವಾಲಯಗಳನ್ನು ವಿಲೀನಗೊಳಿಸಲಾಗಿದೆ ಎಂದು ಭಾನುವಾರ ಘೋಷಿಸಿದೆ.

ಸೆಪ್ಟೆಂಬರ್ 26ರಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಅಂತಿಮವಾಗಿ ಸಹಾಯ ಮಾಡಲು ಒಪ್ಪಿಕೊಂಡಿದೆ. ಪಾಕಿಸ್ತಾನವು ವೆಚ್ಚಗಳನ್ನು ಕಡಿತಗೊಳಿಸಲು, ತೆರಿಗೆ-ಜಿಡಿಪಿ ಅನುಪಾತವನ್ನು ಹೆಚ್ಚಿಸಲು, ಕೃಷಿ ಮತ್ತು ರಿಯಲ್ ಎಸ್ಟೇಟ್‌ನಂತಹ ಸಾಂಪ್ರದಾಯಿಕವಲ್ಲದ ವಲಯಗಳಿಗೆ ತೆರಿಗೆ ವಿಧಿಸಲು ಒಪ್ಪಿಕೊಂಡ ನಂತರ ಮೊದಲ ಕಂತಾಗಿ ಐಎಂಎಫ್‌ 1 ಶತಕೋಟಿ ಯುಎಸ್‌ ಡಾಲರ್‌ ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನ | ಗುರುತಿನ ಚೀಟಿ ಪರಿಶೀಲಿಸಿದ ಬಳಿಕ 23 ಪ್ರಯಾಣಿಕರಿಗೆ ಗುಂಡಿಕ್ಕಿ ಕೊಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದಿಂದ ಹಿಂದಿರುಗಿದ ನಂತರ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹಣಕಾಸು ಸಚಿವ ಮುಹಮ್ಮದ್ ಔರಂಗಜೇಬ್, “ಐಎಂಎಫ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದು ಕೊನೆಯ ಒಪ್ಪಂದವಾಗಿದೆ. ಇದು ಕೊನೆಯ ಕಾರ್ಯಕ್ರಮ ಎಂದು ಸಾಬೀತುಪಡಿಸಲು ನಾವು ನಮ್ಮ ನೀತಿಗಳನ್ನು ಕಾರ್ಯಗತಗೊಳಿಸಬೇಕಾಗಿದೆ” ಎಂದು ಹೇಳಿದರು.

“ಆರು ಸಚಿವಾಲಯಗಳನ್ನು ಮುಚ್ಚುವ ನಿರ್ಧಾರ ಮಾಡಲಾಗಿದೆ. ಎರಡು ಸಚಿವಾಲಯಗಳನ್ನು ವಿಲೀನಗೊಳಿಸಲಾಗುವುದು. ಹೆಚ್ಚುವರಿಯಾಗಿ, ವಿವಿಧ ಸಚಿವಾಲಯಗಳಲ್ಲಿ 150,000 ಹುದ್ದೆಗಳನ್ನು ತೆಗೆದುಹಾಕಲಾಗುವುದು” ಎಂದು ಔರಂಗಜೇ ತಿಳಿಸಿದರು.

ಇದನ್ನು ಓದಿದ್ದೀರಾ? ಮುಸ್ಲಿಮರ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌ ಕನ್ನಡ’!

“ಕಳೆದ ವರ್ಷ ಸರಿಸುಮಾರು 300,000 ಹೊಸ ತೆರಿಗೆದಾರರು ಇದ್ದರು. ಈ ವರ್ಷ 732,000 ಹೊಸ ತೆರಿಗೆದಾರರು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟು ತೆರಿಗೆದಾರರ ಸಂಖ್ಯೆಯು 1.6 ಮಿಲಿಯನ್‌ನಿಂದ 3.2 ಮಿಲಿಯನ್‌ಗೆ ಹೆಚ್ಚಾಗಿದೆ” ಎಂದು ವಿವರಿಸಿದರು.

“ಆರ್ಥಿಕತೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ದೇಶದ ವಿದೇಶಿ ವಿನಿಮಯ ಸಂಗ್ರಹವು ಅತ್ಯಧಿಕ ಮಟ್ಟವನ್ನು ತಲುಪಿದೆ” ಎಂದು ಪ್ರತಿಪಾದಿಸಿದ ಸಚಿವರು, “ರಾಷ್ಟ್ರೀಯ ರಫ್ತು ಮತ್ತು ಐಟಿ ರಫ್ತು ಎರಡರಲ್ಲೂ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ. ಆರ್ಥಿಕತೆಯ ಬಲದ ಬಗ್ಗೆ ಹೂಡಿಕೆದಾರರ ವಿಶ್ವಾಸವು ಪ್ರಮುಖ ಯಶಸ್ಸು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...