ಪಾಕಿಸ್ತಾನ | ಸಾರ್ವತ್ರಿಕ ಚುನಾವಣೆಗೂ ಮುನ್ನಾ ದಿನ ಎರಡು ಕಡೆ ಭೀಕರ ಬಾಂಬ್ ಸ್ಫೋಟ: 26 ಮಂದಿ ಬಲಿ

Date:

ಪಾಕಿಸ್ತಾನದಲ್ಲಿ ನಾಳೆ(ಫೆ.8)ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನಾದಿನವಾದ ಇಂದು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.

ಬಲೂಚಿಸ್ತಾನ್ ಪ್ರಾಂತ್ಯದ ಪಿಶಿನ್ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಪಕ್ಷದ ಕಚೇರಿಯ ಹೊರಗೆ ನಡೆದ ಮೊದಲ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಸುಮಾರು 150 ಕಿ.ಮೀ ದೂರದಲ್ಲಿರುವ ಕಿಲಾ ಸೈಫ್ ಉಲ್ಲಾ ಜಿಲ್ಲೆಯಲ್ಲಿ ನಡೆದ ಎರಡನೇ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಎರಡು ಸ್ಫೋಟಗಳಲ್ಲಿ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

pak 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಫ್ಘಾನ್ ಗಡಿಯ ಆಗ್ನೇಯಕ್ಕೆ 100 ಕಿಮೀ ದೂರದಲ್ಲಿರುವ ಪಿಶಿನ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ. ಈ ದಾಳಿಯಲ್ಲಿ 25 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದು, ಸ್ವತಂತ್ರ ಅಭ್ಯರ್ಥಿಯ ಚುನಾವಣಾ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಜೆಯುಐ-ಎಫ್ ಪಕ್ಷದ ಚುನಾವಣಾ ಕಚೇರಿಯನ್ನು ಗುರಿಯಾಗಿಸಿಕೊಂಡು ಫೋರ್ಟ್ ಸೈಫ್ ಉಲ್ಲಾದ ಮುಖ್ಯ ಮಾರುಕಟ್ಟೆಯಲ್ಲಿ ಎರಡನೇ ಸ್ಫೋಟದ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯ ಘೋಷಣೆಯ ನಂತರ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ ನಂತರ ಕಳೆದ ಒಂದು ವಾರದಲ್ಲಿ ಹಿಂಸಾತ್ಮಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.

ಈ ಭೀಕ ಬಾಂಬ್ ಸ್ಫೋಟಗಳ ನಂತರವೂ, ಬಲೂಚಿಸ್ತಾನ್ ಸರ್ಕಾರವು ಮತದಾನ ಪ್ರಕ್ರಿಯೆಯು ಯೋಜಿಸಿದಂತೆ ಮುಂದುವರಿಯುತ್ತದೆ ಎಂದು ಹೇಳಿದೆ.

ಬಾಂಬ್ ಸ್ಫೋಟದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಲೂಚಿಸ್ತಾನ್ ಪ್ರಾಂತ್ಯದ ಮಾಹಿತಿ ಸಚಿವ ಜಾನ್ ಅಚಕ್‌ಝಾಯ್, “ಭಯೋತ್ಪಾದಕರಿಗೆ ಈ ಪ್ರಮುಖ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ಅಥವಾ ಬುಡಮೇಲು ಮಾಡಲು ನಾವು ಅನುಮತಿಸುವುದಿಲ್ಲ. ನಾಳೆಯ ಮತದಾನ ಪ್ರಕ್ರಿಯೆಯು ಯೋಜಿಸಿದಂತೆ ಮುಂದುವರಿಯುತ್ತದೆ. ಜನರು ಮತದಾನ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...