ಪಾಕಿಸ್ತಾನ | ಗ್ರೀಸ್ ದೋಣಿ ದುರಂತದಲ್ಲಿ 300 ಜನರ ಸಾವು; 10 ಮಾನವ ಕಳ್ಳಸಾಗಣೆದಾರರ ಬಂಧನ

Date:

  • ಗ್ರೀಸ್‌ನ ಪೆಲೊಪೊನೀಸ್‌ ದ್ವೀಪದ ಬಳಿ ದೋಣಿ ದುರಂತ
  • ದುರಂತದ ವೇಳೆ 400-750 ಜನ ದೋಣಿಯಲ್ಲಿದ್ದರು ಎಂದು ಅಂದಾಜು

ಗ್ರೀಸ್‌ನಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಸುಮಾರು 300 ತನ್ನ ದೇಶದ ಜನರು ಮೃತಪಟ್ಟ ಘಟನೆ ನಂತರ ಎಚ್ಚೆತ್ತಿರುವ ಪಾಕಿಸ್ತಾನ ಸರ್ಕಾರ 10 ಮಂದಿ ಮಾನವ ಕಳ್ಳಸಾಗಣೆಗಾರರನ್ನು ಬಂಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ (ಜೂನ್‌ 19) ವರದಿ ಮಾಡಿವೆ.

ಪಾಕಿಸ್ತಾನದಿಂದ ಪ್ರತೀ ವರ್ಷ ಸಾವಿರಾರು ಯುವಕರು ಉತ್ತಮ ಜೀವನಕ್ಕಾಗಿ ಕೆಲಸ ಹುಡುಕಿಕೊಂಡು ಯುರೋಪಿಗೆ ಮಾನವ ಕಳ್ಳಸಾಗಣೆಗಾರರ ನೆರವಿನಿಂದ ಅಕ್ರಮವಾಗಿ ಪ್ರವೇಶಿಸಲು ದೋಣಿಗಳ ಮೂಲಕ ಅಪಾಯಕಾರಿ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ.

ಪಾಕಿಸ್ತಾನ ಯುವಕರು ಇಂತಹ ಒಂದು ಪ್ರಯತ್ನದಲ್ಲಿ ದುರಂತ ಅಂತ್ಯ ಕಂಡಿದ್ದರು. ಮಾನವ ಕಳ್ಳಸಾಗಣೆದಾರರ ನೆರವಿನಿಂದ ಯುವಕರನ್ನು ಬುಧವಾರ (ಜೂನ್ 14) ಹೊತ್ತೊಯ್ಯುತ್ತಿದ್ದ ದೋಣಿ ಗ್ರೀಸ್‌ನ ಪೆಲೊಪೊನೀಸ್‌ ದ್ವೀಪದ ಬಳಿ ಮುಳುಗಿದೆ. ಪರಿಣಾಮ ದೋಣಿಯಲ್ಲಿದ್ದ ಸುಮಾರು 300 ಮಂದಿ ಮೃತಪಟ್ಟಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಭೀಕರ ದುರಂತದ ಬೆನ್ನಲ್ಲೇ ಈ ಕುರಿತು ಕಠಿಣ ಕ್ರಮಕ್ಕೆ ಪಾಕಿಸ್ತಾನದ ಸರ್ಕಾರ ಮುಂದಾಗಿದ್ದು ಅಕ್ರಮ ಮಾನವ ಕಳ್ಳಸಾಗಣೆದಾರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ.

ಅದರ ಭಾಗವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಜನ ಅಕ್ರಮ ಕಳ್ಳಸಾಗಣೆದಾರರನ್ನು ಬಂಧಿಸಿದೆ. ಮತ್ತೊಬ್ಬ ಕಳ್ಳಸಾಗಣೆದಾರರನ್ನು ಗುಜರಾತ್ ಗಡಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪಾಕ್‌ ಆಕ್ರಮಿತ ಕಾಶ್ಮೀರ ವಲಸಿಗರ ತಾಣವಾಗಿತ್ತು.

“ಮಾನವ ಕಳ್ಳಸಾಗಣೆಯ ಬಗ್ಗೆ ಬಂಧಿತರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಪಾಕ್‌ ಆಕ್ರಮಿತ ಕಾಶ್ಮೀರದ ಸ್ಥಳೀಯ ಅಧಿಕಾರಿ ಚೌಧರಿ ಶೌಕತ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

ದುರಂತದ ಸಂದರ್ಭದಲ್ಲಿ 400 ರಿಂದ 750 ಜನರು ದೋಣಿಯಲ್ಲಿದ್ದರು ಎಂದು ಅಂದಾಜಿಸಲಾಗಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಸ್ಥೆ ಮತ್ತು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿವೆ.

ದೋಣಿ ದುರಂತದಲ್ಲಿ ಪಾಕಿಸ್ತಾನ ದೇಶದ 12 ಮಂದಿ ಬದುಕುಳಿದಿದ್ದಾರೆ. ಆದರೆ ದೋಣಿಯಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ದೇಶದ ವಿದೇಶಾಂಗ ಸಚಿವಾಲಯ ಶನಿವಾರ (ಜೂನ್‌ 17) ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...