ಪಾಕಿಸ್ತಾನ | ಪಂಜಾಬ್‌ನಲ್ಲಿ ಆರೋಗ್ಯ ತುರ್ತುಪರಿಸ್ಥಿತಿ; ಲಾಕ್‌ಡೌನ್‌ ಘೋಷಣೆ

Date:

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹೊಗೆಯ ಮಂಜು ಆವರಿಸಿಕೊಂಡಿದ್ದು, ಎರಡು ನಗರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ಪಂಜಾಬ್ ಪ್ರಾಂತ್ಯದಲ್ಲಿ ಆಕ್ರಮಿಸಿಕೊಂಡಿರುವ ಹೊಯು ಜನರನ್ನು ಉಸಿರುಗಟ್ಟಿಸುತ್ತಿದೆ. ಸುಮಾರು 20 ಲಕ್ಷ ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಆರೋಗ್ಯ ಬೆಕ್ಕಟ್ಟನ್ನು ನಿಭಾಯಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಲ್ತಾನ್ ಮತ್ತು ಲಾಹೋರ್ ನಗರಗಳಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಸಚಿವ ಮರಿಯುಮ್ ಔರಂಗಜೇಬ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಗೆಯು ಪ್ರಸ್ತುತ ರಾಷ್ಟ್ರೀಯ ವಿಪತ್ತಾಗಿ ಪರಿಣಮಿಸಿದೆ. ಇದು ಒಂದು ತಿಂಗಳು ಅಥವಾ ಇನ್ನೂ ಹೆಚ್ಚು ದಿನ ಮುಂದುವರೆಯಬಹುದು. ನಾವು ಮೂರು ದಿನಗಳ ನಂತರ ಪರಿಸ್ಥಿತಿಯನ್ನು ಅವಲೋಕಿಸುತ್ತೇವೆ. ಬಳಿಕ, ಮುಂದಿನ ಕಾರ್ಯತಂತ್ರಗಳನ್ನು ರೂಪಿಸಿ, ಜಾರಿಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

“ಅಪಾಯಕಾರಿ ಗಾಳಿಯ ಗುಣಮಟ್ಟದಿಂದಾಗಿ ಶಾಲೆಗಳನ್ನು ಒಂದು ವಾರಗಳ ಮಟ್ಟಿಗೆ ಮುಚ್ಚಲಾಗಿದೆ. ವಿಶ್ವವಿದ್ಯಾನಿಲಯಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

“ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸುವ ಉದ್ದೇಶದಿಂದ ವೈದ್ಯಕೀಯ ಸಿಬ್ಬಂದಿಗಳ ರಜೆ ಮತ್ತು ಸಮಯದ ಮಿತಿಯನ್ನು ರದ್ದುಗೊಳಿಸಲಾಗಿದೆ. ದಿನನಿತ್ಯ ಸಂಜೆ 4 ಗಂಟೆಗೆ ರೆಸ್ಟೋರೆಂಟ್‌ಗಳನ್ನು ಮುಚ್ಚಲು ಸೂಚಿಸಲಾಗಿದೆ. ಮುಲ್ತಾನ್ ಮತ್ತು ಲಾಹೋರ್ ನಗರಗಳಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಈ ನಗರಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ” ಎಂದು ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬಿಸಿ ಗಾಳಿ ಬೀಸುತ್ತಿದೆ – ತಾಪಮಾನ ಏರುತ್ತಿದೆ; ಪ್ರಕೃತಿ ತಿರುಗಿ ಬೀಳಲಿದೆ!

ಲಾಹೋರ್‌ನಲ್ಲಿ 1.1 ಕೋಟಿ ಜನಸಂಖ್ಯೆಯಿದ್ದು, ಅಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು (AQI) 600ರ ಗಡಿ ದಾಟಿದೆ. ಸೂಚ್ಯಂಕವು 300ಕ್ಕಿಂತ ಹೆಚ್ಚು ದಾಟಿದರೆ, ಆರೋಗ್ಯಕ್ಕೆ ಹಾನಿಕಾರಕವೆಂದು ಪರಿಗಣಿಸಲಾಗಿದೆ.

ಹೆಚ್ಚಿನ ಸಂಖ್ಯೆಯ ವಾಹನಗಳು, ನಿರ್ಮಾಣ ಮತ್ತು ಕೈಗಾರಿಕಾ ಚಟುವಟಿಕೆಗಳು ಹಾಗೂ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಹೊಗೆಯು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಆದಾಗ್ಯೂ, ಮುಂದಿನ ದಿನಗಳಲ್ಲಿ ಭಾರೀ ಮಳೆ ಮತ್ತು ಗಾಳಿ ಬೀಸಲಿದ್ದು, ಪಂಜಾಬ್ ಪ್ರಾಂತ್ಯದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...