ಅಫ್ಘಾನ್ ಗಡಿ ಬಂದ್‌ನಿಂದ ಸಂಕಷ್ಟ; ಪಾಕಿಸ್ತಾನದಲ್ಲಿ ಟೊಮೆಟೊ ಬೆಲೆ ಕೆಜಿಗೆ 600 ರೂ.

Date:

ಪಾಕಿಸ್ತಾನದಲ್ಲಿ ಟೊಮೆಟೊ ಬೆಲೆಗಳು ಶೇಕಡಾ 400ಕ್ಕಿಂತಲೂ ಹೆಚ್ಚು ಏರಿಕೆಯಾಗಿದ್ದು, ದೇಶಾದ್ಯಂತ ಗ್ರಾಹಕರು ತೀವ್ರ ದುಬಾರಿ ಬೆಲೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಪಾಕಿಸ್ತಾನದ ವಾಯುದಾಳಿಯಲ್ಲಿ ಅಫ್ಘಾನಿಸ್ತಾನದ ಹತ್ತಾರು ಮಂದಿ ಮೃತಪಟ್ಟ ಬೆನ್ನಲ್ಲೇ ಅಕ್ಟೋಬರ್ 11ರಿಂದ ಉಭಯ ದೇಶಗಳ ನಡುವಿನ ಗಡಿ ಮುಚ್ಚಲಾಗಿತ್ತು. ಇದು ತಾಲಿಬಾನ್ 2021ರಲ್ಲಿ ಅಧಿಕಾರ ವಹಿಸಿಕೊಂಡ ಬಳೀಕ ಭೀಕರ ದಾಳಿಯಾಗಿದೆ.

ವರದಿಗಳ ಪ್ರಕಾರ, ಗಡಿ ಮುಚ್ಚುವಿಕೆಯಿಂದ ಟೊಮೆಟೊ ಮತ್ತು ಇತರ ನಾಶವಾಗುವ ಆಹಾರ ಪದಾರ್ಥಗಳ ಆಮದು ನಿಂತುಹೋಗಿದ್ದು, ದೇಶೀಯ ಉತ್ಪಾದನೆ ಕಡಿಮೆಯಾದಾಗ ಸಾಮಾನ್ಯವಾಗಿ ಈ ಆಮದುಗಳು ಪೂರೈಕೆ ಕೊರತೆಯನ್ನು ನೀಗಿಸುತ್ತಿದ್ದವು. ಪೂರೈಕೆ ನಿಂತಿರುವ ಪರಿಣಾಮ, ಇಸ್ಲಾಮಾಬಾದ್ ಮತ್ತು ಇತರ ಪ್ರಮುಖ ನಗರಗಳ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಕಿಲೋಗೆ 600 ಪಾಕಿಸ್ತಾನಿ ರೂಪಾಯಿಗಳವರೆಗೆ ಏರಿಕೆಯಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಲಸಗಾರ ಕಂದಾಯ ಸಚಿವರು ಭಕ್ತರ ಕ್ಯೂ ಕಾಯಲು ನಿಲ್ಲುವುದು ತರವಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನವು ಟೊಮೆಟೊ, ಸೇಬು ಮುಂತಾದ ತಾಜಾ ಉತ್ಪನ್ನಗಳಿಗೆ ಅಫ್ಘಾನಿಸ್ತಾನದಿಂದ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆದರೆ, ಗಡಿ ತಗಾದೆಯಿಂದ ಈ ವ್ಯಾಪಾರಕ್ಕೆ ತೀವ್ರ ತೊಂದರೆಯಾಗಿದೆ. ಸುಮಾರು 5,000 ಕಂಟೇನರ್‌ಗಳು ಸರಕುಗಳೊಂದಿಗೆ ಗಡಿಯ ಎರಡೂ ಬದಿಗಳಲ್ಲಿ ಸಿಲುಕಿಕೊಂಡಿರುವುದರಿಂದ ಪೂರೈಕೆ ಸಂಕಷ್ಟ ಉಲ್ಬಣಗೊಂಡಿದೆ. ಟೊಮೆಟೊ ಜೊತೆಗೆ, ಅಫ್ಘಾನ್‌ನಿಂದ ಆಮದಾಗುವ ಸೇಬಿನ ಬೆಲೆಯೂ ಸ್ಥಳೀಯ ಮಾರುಕಟ್ಟೆಯಲ್ಲಿ ಗಗನಕ್ಕೇರಿದೆ.

ಪಾಕಿಸ್ತಾನವು ಅಫ್ಘಾನಿಸ್ತಾನದಿಂದ ಉಗ್ರವಾದಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರಿಂದ ಗಡಿ ಘರ್ಷಣೆ ಭುಗಿಲೆದ್ದಿತು. ಆದರೆ, ತಾಲಿಬಾನ್ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿದೆ. ಕತಾರ್ ಮತ್ತು ಟರ್ಕಿಯ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಕಳೆದ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದವಾಗಿದ್ದು, ಅದು ಇನ್ನೂ ಮುಂದುವರಿದಿದೆ. ಆದಾಗ್ಯೂ, ಗಡಿಯಾಚೆಗಿನ ವ್ಯಾಪಾರ ಪುನರಾರಂಭವಾಗುವ ಬಗ್ಗೆ ಖಚಿತತೆ ಇಲ್ಲ. ಅಕ್ಟೋಬರ್ 25ರಂದು ಇಸ್ತಾಂಬುಲ್‌ನಲ್ಲಿ ಎರಡೂ ದೇಶಗಳ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...