ನೂರ್ ಖಾನ್ ವಾಯುನೆಲೆ ಮೇಲೆ ಭಾರತದ ಕ್ಷಿಪಣಿ ದಾಳಿ ದೃಢಪಡಿಸಿದ ಪಾಕಿಸ್ತಾನ ಪ್ರಧಾನಿ

Date:

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯು ನೆಲೆಯ ಮೇಲೆ ನಿಖರ ದಾಳಿ ನಡೆಸಿದೆ ಎಂಬುದನ್ನು ಪಾಕಿಸ್ತಾನದ ಪ್ರಧಾನಿ ಶಹಬಾಝ್ ಷರೀಫ್ ದೃಢಪಡಿಸಿದ್ದಾರೆ.

ಇದುವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಪಾಕಿಸ್ತಾನ ನಿರಾಕರಿಸುತ್ತಾ ಬಂದಿತ್ತು. ಸದ್ಯ ಪಾಕ್ ಪ್ರಧಾನಿ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಬೆಳಗಿನ ಜಾವ 2:30ಕ್ಕೆ ತಮ್ಮನ್ನು ಸಂಪರ್ಕಿಸಿದ್ದರು ಎಂದು ಶಹಬಾಝ್ ಷರೀಫ್ ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಭಾರತ- ಪಾಕಿಸ್ತಾನ ಯುದ್ಧದ ಸ್ಥಿತಿ | ದಾಳಿ ಬೆನ್ನಲ್ಲೇ ಎಲ್ಲೆಲ್ಲಿ ಬ್ಲ್ಯಾಕ್‌ ಔಟ್?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ.

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ನಡುವೆ ಭಾರತದ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನವು ಮೇ 8, 9 ಮತ್ತು 10ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಯತ್ನ ಮಾಡಿತ್ತು. ಅದು ವಿಫಲವಾಗಿತ್ತು. ಬಳಿಕ ಭಾರತೀಯ ಪಡೆಗಳು ಪಾಕಿಸ್ತಾನದ ಬಹು ಸೇನಾ ನೆಲೆಗಳ ಮೇಲೆ ಪ್ರಬಲ ಪ್ರತಿದಾಳಿ ನಡೆಸಿದವು.

ಇವೆಲ್ಲವುದರ ನಡುವೆ ನೂರ್ ಖಾನ್ ವಾಯುನೆಲೆ ಮೇಲೆ ದಾಳಿ ನಡೆಸಿರುವುದಾಗಿ ಭಾರತ ಹೇಳಿತ್ತು. ಆದರೆ ಪಾಕಿಸ್ತಾನ ಮಾತ್ರ ಅದನ್ನು ನಿರಾಕರಿಸುತ್ತಿತ್ತು. ಆದರೆ ಇದೀಗ ಒಪ್ಪಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...