ಪಾಕಿಸ್ತಾನ | ಬಂಡುಕೋರರಿಂದ ರೈಲು ‘ಹೈಜಾಕ್’; ಒತ್ತೆಯಾಳಾಗಿ 100 ಮಂದಿ ಸೆರೆ!

Date:

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಂಡುಕೋರರು ಹೈಜಾಕ್ ಮಾಡಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರಕ್ಕೆ ಜಾಫರ್ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಸುತ್ತಿತ್ತು. ಕ್ವೆಟ್ಟಾದ ಬಳಿಯ ಪನಿಯಾರ್ ರೈಲ್ವೇ ನಿಲ್ದಾಣದಲ್ಲಿ ಸಶಸ್ತ್ರಧಾರಿ ಬಂಡುಕೋರರ ಗುಂಪು ರೈಲನ್ನು ಹೈಜಾಕ್ ಮಾಡಿದೆ. ರೈಲಿನಲ್ಲಿ ಸುಮಾರು 450 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ, 100ಕ್ಕೂ ಹೆಚ್ಚು ಮಂದಿಯನ್ನು ಅವರು ಒತ್ತಾಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಾಗಿವೆ.

ರೈಲು ಸುರಂಗ ಮಾರ್ಗದಲ್ಲಿ ಹಾದುಹೋಗುವಾಗ ಬಂದೂಕುಧಾರಿಗಳು ರೈಲನ್ನು ಹತ್ತಿದ್ದು, ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪನಿಯಾರ್ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರೈಲ್ವೇ ಲೋಕೋ ಪೈಲೆಟ್‌ಗೆ ಗಂಭೀರ ಗಾಯಗಳಾಗಿವೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿದ್ದು, ಚಿಕಿತ್ಸೆ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲನ್ನು ಹೈಜಾಕ್ ಮಾಡಿರುವುದಾಗಿ ‘ಬಲೂಚ್ ಲಿಬರೇಶನ್ ಆರ್ಮಿ’ ಹೊಣೆಹೊತ್ತುಕೊಂಡಿದೆ ಹೇಳಿಕೆ ಬಿಡುಗಡೆ ಮಾಡಿದೆ. “ನಮ್ಮ ವಶದಲ್ಲಿ 100 ಪಾಕಿಸ್ತಾನಿ ಪಡೆಗಳ ಸಿಬ್ಬಂದಿ ಇದ್ದಾರೆ” ಎಂದು ಹೇಳಿಕೊಂಡಿದೆ.

“ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರನ್ನು ಬಿಡುಗಡೆ ಮಾಡಿದ್ದೇವೆ. ಪಾಕಿಸ್ತಾನಿ ಮಿಲಿಟರಿ, ಪೊಲೀಸ್, ಭಯೋತ್ಪಾದನಾ ನಿಗ್ರಹ ಪಡೆಗಳ ಏಜೆಂಟ್‌ಗಳು ಮತ್ತು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಸಿಬ್ಬಂದಿಗಳನ್ನು ಮಾತ್ರ ವಶದಲ್ಲಿ ಇಟ್ಟುಕೊಂಡಿದ್ದೇವೆ. ಸೇನಾ ಪಡೆಗಳು ಮಿಲಿಟರಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದರೆ, ಎಲ್ಲ ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ” ಎಂದು ಬೆದರಿಕೆ ಹಾಕಿದೆ.

ಈ ವರದಿ ಓದಿದ್ದೀರಾ?: ‘ಸಾಬರ ಬಜೆಟ್’ ಎಂದವರಿಗೆ ನಮ್ಮ ಹಳ್ಳಿಗಳ ಆರ್ಥಿಕ ಚಲನಶೀಲತೆಯ ಅರ್ಥ ಗೊತ್ತಿದೆಯೇ?

‘ಬಲೂಚ್ ಲಿಬರೇಶನ್ ಆರ್ಮಿ’ ಗುಂಪು ದಕ್ಷಿಣ ಅಫ್ಘಾನಿಸ್ತಾನದಲ್ಲಿ ಸಕ್ರಿಯವಾಗಿದೆ. ಅಲ್ಲದೆ, ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಿ, ಸ್ವತಂತ್ರ ರಾಷ್ಟ್ರ ಮಾಡಬೇಕು ಎಂಬುದೇ ತಮ್ಮ ಗುರಿಯೆಂದು ಹೇಳಿಕೊಂಡಿದೆ.

ಬಲೂಚಿಸ್ತಾನ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಅವರು, “ರೈಲನ್ನು ಹೈಜಾಕ್ ಮಾಡಿರುವ ಸ್ಥಳಕ್ಕೆ ಭದ್ರತಾ ಪಡೆಗಳು ಮತ್ತು ರಕ್ಷಣಾ ಪಡೆಗಳು ಪ್ರವೇಶಿಸುವುದು ಕಷ್ಟಕರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ತುರ್ತು ಕ್ರಮಗಳನ್ನು ಸೂಚಿಸಿದೆ. ರಕ್ಷಣಾ ಕಾರ್ಯಕ್ಕೆ ಸರ್ಕಾರದ ಎಲ್ಲ ರಕ್ಷಣಾ ಸಂಸ್ಥೆಗಳನ್ನು ಸಜ್ಜುಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...