ಫಿಲಿಪೈನ್ ಭೂಕಂಪ | ಸಾವಿನ ಸಂಖ್ಯೆ 72ಕ್ಕೆ ಏರಿಕೆ; 20,000 ಜನರ ಸ್ಥಳಾಂತರ

Date:

ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಈವರೆಗೆ 72 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಭೂಕಂಪದಲ್ಲಿ ಸುಮಾರು 300 ಜನರು ಗಾಯಗೊಂಡಿದ್ದಾರೆ. 20,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದು, ನಿರಾಶ್ರಿತ ತಾಣಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಬುಧವಾರ ರಾತ್ರಿ, ಫಿಲಿಪೈನ್‌ನಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೊಗೊ ನಗರದಲ್ಲಿ ಹೋಟೆಲ್‌ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಹಲವಾರು ಮಂದಿ ಸಿಲುಕಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸೆಬು ದ್ವೀಪದ ಉತ್ತರ ಭಾಗದಲ್ಲಿ ಸುಮಾರು 600 ಮನೆಗಳು ಧ್ವಂಸಗೊಂಡಿವೆ. ಆ ಪ್ರದೇಶದಲ್ಲಿ ಸಾವಿರಾರು ಸಂತ್ರಸ್ತ ಜನರಿಗೆ ಕುಡಿಯುವ ನೀರು, ಆಹಾರ, ಬಟ್ಟೆ ಮತ್ತು ತಾತ್ಕಾಲಿಕ ವಸತಿ ಹಾಗೂ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಸೆಬು ಪ್ರಾಂತೀಯ ಗವರ್ನರ್ ಪಮೇಲಾ ಬಾರಿಕುಯಾಟ್ರೊ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

“ಅನೇಕ ಮನೆಗಳು ನಾಶವಾಗಿವೆ. ಅನೇಕ ಕುಟುಂಬಗಳಿಗೆ ಸಹಾಯದ ಅಗತ್ಯವಿದೆ… ಅವರಿಗೆ ನಮ್ಮ ಸಹಾಯ, ಪ್ರಾರ್ಥನೆ ಮತ್ತು ಬೆಂಬಲ ಬೇಕು. ಸಾಧ್ಯ ಇರುವವರು ನೆರವಿಗೆ ಧಾವಿಸಬಹುದು” ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಫಿಲಿಪೈನ್ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಗುರುವಾರ ಹಿರಿಯ ಅಧಿಕಾರಿಗಳೊಂದಿಗೆ ಸೆಬು ನಗರಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

“ಅನೇಕ ಪ್ರದೇಶಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ. ಭೂಕಂಪದಿಂದ ಪ್ರಭಾವಿತವಾದ 42 ಪ್ರದೇಶಗಳ 1,10,000ಕ್ಕೂ ಹೆಚ್ಚು ಜನರಿಗೆ ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಅವರ ಜೀವನೋಪಾಯವನ್ನು ಪುನಃಸ್ಥಾಪಿಸಲು ನೆರವಿನ ಅಗತ್ಯವಿದೆ” ಎಂದು ಪ್ರಾದೇಶಿಕ ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...