ಬ್ರೆಜಿಲ್ | ಸಾವೊ ಪಾಲೊದಲ್ಲಿ ವಿಮಾನ ಪತನ; 61 ಮಂದಿ ದಾರುಣ ಸಾವು

Date:

ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ 61 ಮಂದಿಯೂ ಕೂಡಾ ಸಾವನ್ನಪ್ಪಿದ್ದಾರೆ.

ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ಪರಾನಾದಲ್ಲಿನ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊ ನಗರದ ಗೌರುಲ್ಹೋಸ್ ವಿಮಾನ ನಿಲ್ದಾಣಕ್ಕೆ ಹಾರುತ್ತಿದ್ದಾಗ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ ಎಂದು ವೊಪಾಸ್ ಏರ್‌ಲೈನ್ ಹೇಳಿದೆ.

ಎಟಿಆರ್ 72-500 ವಿಮಾನದಲ್ಲಿ 57 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಗಳಿದ್ದರು. ಯಾರೂ ಕೂಡಾ ಬದುಕುಳಿದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ವಿಮಾನವು ನೇರವಾಗಿ ನೆಲಕ್ಕೆ ಅಪ್ಪಳಿಸಿ, ಸುರುಳಿ ಸುತ್ತಿ ಬಿದ್ದಿರುವುದು ಕಂಡು ಬರುತ್ತದೆ.

ಇದನ್ನು ಓದಿದ್ದೀರಾ? ಬ್ರೆಜಿಲ್‌| ಭಾರೀ ಮಳೆಯಿಂದ ಪ್ರವಾಹ; 78 ಸಾವು- 1,15,000ಕ್ಕೂ ಅಧಿಕ ಜನರ ಸ್ಥಳಾಂತರ

ಬ್ರೆಜಿಲ್‌ನ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಸಂತ್ರಸ್ತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವೊ ಪಾಲೊ ರಾಜ್ಯದ ಗವರ್ನರ್ ಟಾರ್ಸಿಯೊ ಗೋಮ್ಸ್ ಡಿ ಫ್ರೀಟಾಸ್ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಇನ್ನು ಫ್ರೆಂಚ್-ಇಟಾಲಿಯನ್ ವಿಮಾನ ತಯಾರಕ ಎಟಿಆರ್ ತನಿಖೆಗೆ ಸಹಕರಿಸುವುದಾಗಿ ಹೇಳಿದೆ.

ವಿಮಾನವು ಜನವಸತಿ ಪ್ರದೇಶದಲ್ಲಿ ಬಿದ್ದಿದ್ದು ವಿಮಾನದಲ್ಲಿದ್ದ 61 ಮಂದಿಯ ಸಾವು ಹೊರತುಪಡಿಸಿ ಬೇರೆ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಒಂದು ಮನೆಗೆ ಮಾತ್ರ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...