ವಿಮಾನ ಟೇಕ್ಆಫ್ ಆದ ಕೆಲ ನಿಮಿಷಗಳಲ್ಲಿಯೇ ಕಳಚಿಕೊಂಡ ಬಾಗಿಲು

Date:

ನಿಲ್ದಾಣದಿಂದ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಬಾಗಿಲು ಕಳಚಿಕೊಂಡ ಘಟನೆ ಅಮೆರಿಕದ ಪೋರ್ಟ್‌ಲ್ಯಾಂಡ್ ನಗರದಲ್ಲಿ ನಡೆದಿದೆ.

ಪೋರ್ಟ್‌ಲ್ಯಾಂಡ್‌ನಿಂದ ಒಂಟಾರಿಯೋ ನಗರಕ್ಕೆ ತೆರಳುತ್ತಿದ್ದ ಅಲಾಸ್ಕಾ ಬೋಯಿಂಗ್ 737-9 ಮ್ಯಾಕ್ಸ್ ವಿಮಾನದ ಮುಖ್ಯ ದ್ವಾರ ಟೇಕ್‌ ಆಫ್‌ ಆದ ಕೆಲ ನಿಮಿಷಗಳಲ್ಲಿ ಕಿತ್ತುಕೊಂಡು ಹೋಯಿತು. ಅದೃಷ್ಟವಶಾತ್ ದ್ವಾರದ ಪಕ್ಕದ ಆಸನಗಳಲ್ಲಿ ಯಾರು ಕುಳಿತಿರಲಿಲ್ಲ.

ಕ್ಯಾಲಿಫೋರ್ನಿಯಾದ ಪೋರ್ಟ್‌ಲ್ಯಾಂಡ್‌ನಿಂದ ಒಂಟಾರಿಯೋ ನಗರಕ್ಕೆ ತೆರಳುತ್ತಿದ್ದ ಎಎಸ್1282 ವಿಮಾನದಲ್ಲಿ ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ವಿಮಾನದಲ್ಲಿದ್ದ 171 ಪ್ರಯಾಣಿಕರು ಹಾಗೂ 6 ಸಿಬ್ಬಂದಿಯಿದ್ದ ವಿಮಾನ ಸುರಕ್ಷಿತವಾಗಿ ಪೋರ್ಟ್‌ಲ್ಯಾಂಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಮಾಹಿತಿ ಲಭ್ಯವಾಗುತ್ತಿದ್ದಂತೆ ಹಂಚಿಕೊಳ್ಳುತ್ತೇವೆ ಎಂದು ಅಲಾಸ್ಕಾ ಏರ್‌ಲೈನ್ಸ್‌ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಅಲಾಸ್ಕಾ ಏರ್‌ಲೈನ್ಸ್‌ ವಿಮಾನದ ಘಟನೆಯ ಬಗ್ಗೆ ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷಾ ಮಂಡಳಿ ಕೂಡ ತನಿಖೆಗೆ ಆದೇಶಿಸಿದೆ.

ವಿಮಾನವು ಟೇಕ್‌ ಆಫ್‌ ನಂತರ 16,325 ಅಡಿ ಎತ್ತರಕ್ಕೆ ಹಾರಿತ್ತು. ನಂತರ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಬಾಗಿಲು ಕಿತ್ತು ಹೋದ ವಿಡಿಯೋಗಳನ್ನು ವಿಮಾನದಲ್ಲಿದ್ದ ಪ್ರಯಾಣಿಕರು ಸಾಮಾಜಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ದ್ವಾರ ಕಳಚಿಕೊಂಡ ನಂತರ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ತಮ್ಮ ಮೊಬೈಲ್‌ ಫೋನ್‌ಗಳನ್ನು ಕಳೆದುಕೊಂಡರು. ಘಟನೆ ತುರ್ತು ಸ್ವರೂಪ ಪಡೆದ ಕಾರಣ ಆಕ್ಸಿಜನ್‌ ಮಾಸ್ಕ್‌ಗಳು ಕೂಡ ತೆರೆದುಕೊಂಡವು. ಬಹುತೇಕ ಪ್ರಯಾಣಿಕರು ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗುವವರೆಗೂ ಮಾಸ್ಕ್‌ ಧರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...