ಅಮೆರಿಕ ದಾಳಿ: ಇರಾನ್‌ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

Date:

ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ನರೆಂದ್ರ ಮೋದಿ ” ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಕರೆ ಮಾಡಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾವಿಬ್ಬರು ವಿವರವಾಗಿ ಚರ್ಚಿಸಿದ್ದೇವೆ. ದಾಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ತಕ್ಷಣವೇ ಉದ್ವಿಗ್ನತೆಯನ್ನು ಕಡಿಮೆ ಮಾಡಲು, ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಮುಂದುವರಿಸಲು ನಮ್ಮ ಕರೆಯನ್ನು ಪುನರುಚ್ಚರಿಸಿದ್ದೇವೆ ಮತ್ತು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಇರಾನ್‌ನ ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಕಳೆದ ರಾತ್ರಿ ಮೂರು ಪ್ರಮುಖ ಇರಾನಿನ ಪರಮಾಣು ತಾಣಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಅನ್ನು ಗುರಿಯಾಗಿಸಿಕೊಂಡ ಅಮೆರಿಕ ಮಿಲಿಟರಿ ಕಾರ್ಯಾಚರಣೆ ನಡೆಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ

ತಮ್ಮ ದೇಶದ ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯನ್ನು ಇರಾನ್ ಖಂಡಿಸಿದ್ದು, ಈ ಕ್ರಿಮಿನಲ್‌ ವರ್ತನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇರಾನ್‌ನ ವಿದೇಶಾಂಗ ಸಚಿವ ಸಯೀದ್ ಅಬ್ಬಾಸ್ ಅರಘ್ಚಿ, ಇದು ಅಂತಾರಾಷ್ಟ್ರೀಯ ಕಾನೂನು, ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಪರಮಾಣು ಪ್ರಸರಣ ನಿಷೇಧ ಒಪ್ಪಂದದ (ಎನ್‌ಪಿಟಿ) ಗಂಭೀರ ಉಲ್ಲಂಘನೆಯಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರವಾದ ಅಮೆರಿಕವು ಶಾಂತಿಯುತ ಪರಮಾಣು ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಕ್ರಿಮಿನಲ್ ನಡವಳಿಕೆಯನ್ನು ಎಸಗಿದೆ ಎಂದು ಅರಘ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

“ಇಂದು ಮುಂಜಾನೆಯ ಘಟನೆಗಳು ಅತಿರೇಕವಾದವು. ಇದು ಗಂಭೀರ ಪರಿಣಾಮಗಳನ್ನು ಬೀರುತ್ತದೆ. ವಿಶ್ವಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ಈ ಅತ್ಯಂತ ಅಪಾಯಕಾರಿ, ಕಾನೂನುಬಾಹಿರ ಮತ್ತು ಕ್ರಿಮಿನಲ್ ನಡವಳಿಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಅರಘ್ಚಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇಸ್ರೇಲ್‌ ಮೇಲೆ ಇರಾನ್‌ ದಾಳಿ

ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್‌ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇಸ್ರೇಲ್‌ನ ಹೈಫಾ, ನೆಸ್‌ ಜಿಯೋನಾ, ರಿಶೋನ್‌ ಲೆಜಿಯೋನ್‌ ಹಾಗೂ ಟೆಲ್‌ ಅವೀವ್‌ ನಗರಗಳ ಮೇಲೆ ಕ್ಷಿಪಣಿಗಳಿಂದ ದಾಳಿ ನಡೆಸಲಾಗಿದೆ. ಇಸ್ರೇಲ್‌ನಲ್ಲಿ ಸ್ಫೋಟಗಳ ಶಬ್ದಗಳು ಕೇಳಿಬಂದವು. ಅನೇಕ ಸ್ಥಳಗಳಲ್ಲಿ ಸೈರನ್‌ಗಳು ಮೊಳಗುತ್ತಿವೆ. ಇರಾನ್‌ನಿಂದ ಉಡಾಯಿಸಲಾದ ಬ್ಯಾಲಿಸ್ಟಿಕ್ ಕ್ಷಿಪಣಿ ಹೈಫಾ ನಗರದ ಮೇಲೆ ದಾಳಿ ಮಾಡಿತು. ಇರಾನ್‌ನಿಂದ ಸುಮಾರು 20-30 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ನಿಂದ ಉಡಾಯಿಸಲಾದ ಕ್ಷಿಪಣಿಗಳನ್ನು ಗುರುತಿಸಲಾಗಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಬೆದರಿಕೆಯನ್ನು ತಡೆಯಲು ನಮ್ಮ ರಕ್ಷಣಾ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಸಂರಕ್ಷಿತ ಪ್ರದೇಶಗಳಿಗೆ ತೆರಳಿ ಮುಂದಿನ ಆದೇಶದವರೆಗೆ ಅಲ್ಲಿಯೇ ಇರಬೇಕೆಂದು ಸೇನೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...