ಕೆನಡಾದಲ್ಲಿ ಜಿ 7 ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿಗಿಲ್ಲ ಆಹ್ವಾನ

Date:

ಮುಂದಿನ ಜಿ 7 ಶೃಂಗಸಭೆಯು ಜೂನ್ 15ರಿಂದ 17ರವರೆಗೆ ಕೆನಡಾದಲ್ಲಿ ನಡೆಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವುದೇ ಆಹ್ವಾನ ನೀಡಲಾಗಿಲ್ಲ. ಆಹ್ವಾನ ಬಂದಿದ್ದರೂ ಉಭಯ ದೇಶಗಳ ನಡುವೆ ಉದ್ವಿಗ್ನತೆ ಇರುವ ಕಾರಣ ಭಾರತ ಭಾಗಿಯಾಗುತ್ತಿರಲಿಲ್ಲ ಎಂದು ಹೇಳಲಾಗಿದೆ.

ಜಿ 7 ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಮ್, ಜಪಾನ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ಅನೌಪಚಾರಿಕ ಗುಂಪಾಗಿದೆ. ಇದರಲ್ಲಿ ಯುರೋಪಿಯನ್ ಒಕ್ಕೂಟ (ಇಯು), ಐಎಂಎಫ್, ವಿಶ್ವಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಸಹ ಭಾಗವಹಿಸುತ್ತವೆ.

ಇದನ್ನು ಓದಿದ್ದೀರಾ? ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ: ಭಾರತ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಶೃಂಗಸಭೆಗೆ ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೆನಡಾಗೆ ಆಹ್ವಾನ ಸಿಕ್ಕಿದೆ. ಆದರೆ ಪ್ರಧಾನಿ ಮೋದಿಗೆ ಮಾತ್ರ ಆಹ್ವಾನ ಸಿಕ್ಕಿಲ್ಲ. ಪ್ರಧಾನಿ ಮೋದಿ ಜಿ 7 ಶೃಂಗಸಭೆಗಾಗಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ಈ ಹಿಂದೆ ಮಾಧ್ಯಮಗಳು ಪ್ರಶ್ನಿಸಿದಾಗ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಎರಡು ಬಾರಿ “ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದೆ.

ಈ ನಡುವೆ ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ತಿಳಿಸಿದ್ದರು. ಆದರೆ ಕೆನಡಾದ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂಬುದನ್ನೂ ಒಪ್ಪಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನಿಜ್ಜಾರ್ ಹತ್ಯೆ | ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿ : ಅಮೆರಿಕ

ಆಗಿನ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ಘಟನೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ, ಗೃಹ ಸಚಿವ ಅಮಿತ್ ಶಾ ಇದ್ದಾರೆ ಎಂದು ಆರೋಪಿಸಿದ್ದಾರೆ. ಟ್ರುಡೊ ಆರೋಪವನ್ನು ಭಾರತ ನಿರಾಕರಿಸಿದೆ. ಈ ಆರೋಪ ‘ಆಧಾರರಹಿತ’ ಎಂದು ಹೇಳಿದೆ. ಅದರಲ್ಲೂ ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ ಮಾಡಿರುವುದ ಉಭಯ ದೇಶಗಳ ಸಂಬಂಧವನ್ನು ಇನ್ನಷ್ಟೂ ಹದಗೆಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...