ಝೀಲಂ ನದಿಯಿಂದ ದಿಢೀರ್ ನೀರು ಬಿಡುಗಡೆ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಆತಂಕ

Date:

ಝೀಲಂ ನದಿ ನೀರಿನ ಮಟ್ಟ ದಿಢೀರನೇ ಹೆಚ್ಚಿರುವುದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಅಲ್ಲೋಲ- ಕಲ್ಲೋಲ ವಾತಾವರಣ ಸೃಷ್ಟಿಯಾಗಿದೆ. ಭಾರತದಲ್ಲಿ ಉರಿ ಅಣೆಕಟ್ಟಿನಿಂದ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ದಿಢೀರನೇ ನೀರು ಬಿಟ್ಟಿರುವುದು ಈ ಗೊಂದಲಕ್ಕೆ ಕಾರಣ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ದಿಢೀರನೇ ನೀರು ಬಿಟ್ಟಿರುವುದು ಪಾಕ್ ಆಕ್ರಮಿತ ಕಾಶ್ಮೀರದ ಹಟ್ಟಿಯಾನ್ ಬಾಲಾ ಜಿಲ್ಲೆಯಲ್ಲಿ ಜಲ ತುರ್ತು ಪರಿಸ್ಥಿತಿಯನ್ನು ಸೃಷ್ಟಿಸಿದೆ. ನದಿ ದಂಡೆಯ ನಿವಾಸಿಗಳು ಮನೆ ಮಠಗಳನ್ನು ತೊರೆದು ಅನಿವಾರ್ಯವಾಗಿ ಸುರಕ್ಷಿತ ತಾಣಗಳತ್ತ ಪ್ರಯಾಣ ಬೆಳೆಸಿದ್ದಾರೆ.

ಈ ನಡೆಯು ಅಣ್ವಸ್ತ್ರ ಸಜ್ಜಿತ ನೆರೆ ದೇಶಗಳಲ್ಲಿ ಉದ್ವಿಗ್ನತೆಗೆ ಕಾರಣವಾಗಿದ್ದು, ಇದು ಅಂತಾರಾಷ್ಟ್ರೀಯ ನಿಯಮಗಳು ಮತ್ತು ಸಿಂಧೂ ಜಲ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಪಾಕಿಸ್ತಾನ ಆಪಾದಿಸಿದೆ. 26 ಮಂದಿ ಪ್ರವಾಸಿಗರ ಸಾವಿಗೆ ಕಾರಣವಾದ ಏಪ್ರಿಲ್ 23ರ ಪಹಲ್ಗಾಮ್ ದಾಳಿಯ ಬಳಿಕ ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರ್ ಬಾದ್ ಮತ್ತು ಛಕೋತಿ ಪ್ರದೇಶಗಳಲ್ಲಿ ಧ್ವನಿವರ್ಧಕದ ಮೂಲಕ ಎಚ್ಚರಿಕೆ ಸಂದೇಶಗಳನ್ನು ರವಾನಿಸಿ, ಕ್ಷಿಪ್ರವಾಗಿ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸುರಕ್ಷಿತ ತಾಣಗಳಿಗೆ ತೆರಳಬೇಕು ಎಂದು ಸೂಚಿಸಲಾಗುತ್ತಿದೆ.

“ನಮಗೆ ಯಾವುದೇ ಮುನ್ನೆಚ್ಚರಿಕೆ ಇರಲಿಲ್ಲ. ನೀರು ರಭಸವಾಗಿ ಹರಿದು ಬರುತ್ತಿದ್ದು, ಜೀವ ಮತ್ತು ಆಸ್ತಿಗಳನ್ನು ರಕ್ಷಿಸಲು ನಾವು ಹೆಣಗಾಡುತ್ತಿದ್ದೇವೆ” ಎಂದು ನದಿ ದಂಡೆಯ ಗ್ರಾಮವಾದ ದುಮೇಲ್ ನಿವಾಸಿಯೊಬ್ಬರು ಹೇಳಿದ್ದಾರೆ. ಝೀಲಂ ನದಿಗೆ ಸನಿಹವಾದ ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ತಾಣಗಳಿಗೆ ತೆರಳುವಂತೆ ಮುಜಾಫರ್ ಬಾದ್ ಜಿಲ್ಲಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...