ಲಾಸ್‌ ಏಂಜಲೀಸ್‌ | ತೀವ್ರಗೊಂಡ ಪ್ರತಿಭಟನೆ: 2000 ಭದ್ರತಾ ಸಿಬ್ಬಂದಿ ನಿಯೋಜಿಸಿದ ಟ್ರಂಪ್

Date:

ವಲಸಿಗರ ಶೋಧ ಕಾರ್ಯಾಚರಣೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಆಡಳಿತವು ಹೆಚ್ಚುವರಿಯಾಗಿ 2000 ನ್ಯಾಷನಲ್‌ ಗಾರ್ಡ್ಸ್(ಭದ್ರತಾ ಸಿಬ್ಬಂದಿ) ಮತ್ತು 700 ನೌಕಾಪಡೆ ಸಿಬ್ಬಂದಿ ನಿಯೋಜಿಸಿದೆ.

ಅಮೆರಿಕದಲ್ಲಿ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ವಲಸಿಗರನ್ನು ಹೊರದಬ್ಬುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಲಸಿಗರನ್ನು ಹಿಡಿದಿಟ್ಟಿರುವ ಫೆಡರಲ್ ಬಂಧನ ಕೇಂದ್ರದ ಹೊರಗೆ ಪ್ರತಿಭಟನೆ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಅಮೆರಿಕದಿಂದ ಗಡಿಪಾರಾದ 104 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಡೊನಾಲ್ಡ್ ಟ್ರಂಪ್ 2,000 ನ್ಯಾಷನಲ್ ಗಾರ್ಡ್ಸ್ ಸಿಬ್ಬಂದಿ ನಿಯೋಜಿಸಿದ್ದಾರೆ. ಆದರೆ ಟ್ರಂಪ್ ಈ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. “ಟ್ರಂಪ್‌ನ ಈ ಕ್ರಮ ಅಜಾಗರೂಕ ಮತ್ತು ನಮ್ಮ ಯೋಧರಿಗೆ ಅಗೌರವ” ಎಂದು ಕ್ಯಾಲಿಫೋರ್ನಿಯಾದ ಗವರ್ನರ್ ಗ್ಯಾವಿನ್ ನ್ಯೂಸಮ್ ಹೇಳಿದ್ದಾರೆ. ಟ್ರಂಪ್ ನಡೆನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.

ಒಂದೆಡೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಫ್ಲ್ಯಾಷ್ ಬ್ಯಾಂಗ್‌ ಮತ್ತು ರಬ್ಬರ್ ಗುಂಡುಗಳ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಇನ್ನೊಂದೆಡೆ ಪ್ರತಿಭಟನಾಕಾರರು ಕಾರುಗಳಿಗೆ ಬೆಂಕಿ ಹಚ್ಚಿ ಹೆದ್ದಾರಿ ಸಂಚಾರಕ್ಕೆ ತಡೆ ಮಾಡುತ್ತಿದ್ದಾರೆ. ಅಲ್ಲಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯುತ್ತಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...