ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ 6 ಕ್ಷಿಪಣಿ ಉಡಾಯಿಸಿದ ಇರಾನ್; ಪರಿಸ್ಥಿತಿ ಉದ್ವಿಗ್ನ

Date:

ಇರಾನ್‌ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ್ದ ಬೆನ್ನಲ್ಲೇ, ಇರಾನ್ ಪ್ರತಿದಾಳಿ ಮಾಡಿದೆ. ಕತಾರ್‌ನ ದೋಹಾದಲ್ಲಿರುವ ಅಮೆರಿಕದ ಅಲ್ ಉದೈದ್ ವಾಯುನೆಲೆ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಉಡಾಯಿಸಿದೆ. ಇರಾನ್ ದಾಳಿ ಮಾಡಿರುವ ಅಲ್ ಉದೈದ್ ನೆಲೆಯಿಂದಲೇ ಇರಾನ್ ಮೇಲೆ‌ ಅಮೆರಿಕ ವೈಮಾನಿಕ‌ ದಾಳಿ ಮಾಡಿತ್ತು ಎಂದು ಇರಾನ್ ಆರೋಪಿಸಿದೆ. ದಾಳಿಯ ಬೆನ್ನಲ್ಲೇ ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದೆ.

ಶನಿವಾರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದಂತೆ ಇರಾನ್‌ನ ಪರಮಾಣು ಸೌಲಭ್ಯಗಳಾದ ಫೋರ್ಡೋ, ನಟಾಂಜ್, ಮತ್ತು ಎಸ್ಫಾಹಾನ್‌ ಮೇಲೆ‌ ಅಮೆರಿಕ ಸೇನೆಯು ದಾಳಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಲ್ ಉದೈದ್ ಅಮೆರಿಕ ವಾಯು ನೆಲೆ ಮೇಲೆ ದಾಳಿ ಮಾಡಿರುವುದಾಗಿ ಇರಾನ್ ದೃಢಪಡಿಸಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಕ್ಷಿಪಣಿಗಳನ್ನು ‘ಆಪರೇಷನ್ ಬಶಾರತ್ ಅಲ್-ಫತ್’ ಅಡಿಯಲ್ಲಿ ಉಡಾಯಿಸಲಾಗಿದೆ. ಕತಾರ್‌ನ ದೋಹಾದ ಮೇಲೆ ಕ್ಷಿಪಣಿ ದಾಳಿ ನಡೆಯುತ್ತಿರುವ ದೃಶ್ಯಗಳುಳ್ಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕತಾರ್‌ನಲ್ಲಿ ಅಲ್ ಉದೇದ್ ವಾಯುನೆಲೆಯು ಮಧ್ಯ ಪ್ರಚ್ಯದಲ್ಲಿ ಯುಎಸ್ ಸೇನಾ ಕಾರ್ಯಾಚರಣೆಗೆ ಪ್ರಮುಖ ಕೇಂದ್ರವಾಗಿದೆ. ಇದರ ಜೊತೆಗೆ ಮಧ್ಯಪ್ರಾಚ್ಯದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಕತಾರ್ ಏರ್‌ವೇಸ್‌ಗೂ ಕೇಂದ್ರವಾಗಿದೆ.

ತನ್ನ ಪ್ರದೇಶದ ಮೇಲೆ‌ ಇರಾನ್ ಮಾಡಿರುವ ದಾಳಿಯನ್ನು ಕತಾರ್ ಖಂಡಿಸಿದೆ. ಈದಾಳಿಯು ಸಹೋದರ ರಾಷ್ಟ್ರ ಕತಾರ್ ಮೇಲಿನ ದಾಳಿಯಲ್ಲ. ಇದು ಅಮೆರಿಕ ವಿರುದ್ಧದ ಮತ್ತು ಅಮೆರಿಕ ವಾಯುನೆಲೆಯ ಮೇಲಿನ ದಾಳಿ ಎಂದು ಇರಾನ್ ಸ್ಪಷ್ಟಪಡಿಸಿದೆ.

ವಾಯುಪ್ರದೇಶ ಮುಚ್ಚುವಿಕೆಯು ಮುಂಜಾಗರೂಕತೆ ಮತ್ತು ತಾತ್ಕಾಲಿಕ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...