ಪಾಕಿಸ್ತಾನದಲ್ಲಿ ಮಳೆ; 38 ಮಂದಿ ಸಾವು

Date:

ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್‌ 26ರಿಂದ ಪಾಕಿಸ್ತಾನದಲ್ಲಿ ಪೂರ್ವ ಮಾನ್ಸೂನ್ ಮಳೆ ಆರಂಭವಾಗಿದೆ. ಅಲ್ಲಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಖೈಬರ್-ಪಖ್ತುಂಖ್ವಾ (KP) ಪ್ರಾಂತ್ಯದಲ್ಲಿ ಭಾರೀ ಅನಾಹುತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ರಕ್ಷಣಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಖೈಬರ್-ಪಖ್ತುಂಖ್ವಾದ ಸ್ವಾತ್ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಒಂದೇ ಕುಟುಂಬದ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ. ಆ ಕುಟುಂಬವು ಪ್ರವಾಹದ ನೀರಿನ ನಡುವೆಯೂ ಒಂದು ಗಂಟೆ ಕಾಲ ಎತ್ತರದ ಪ್ರದೇಶದಲ್ಲಿ ನಿಂತು, ರಕ್ಷಣೆಗಾಗಿ ಎದುರು ನೋಡುತ್ತಿತ್ತು. ಆದರೂ, ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಕುಟುಂಬವು ಪ್ರವಾಹದಲ್ಲಿ ಕೊಚ್ಚಿಹೋಯಿತು. ಕುಟುಂಬವನ್ನು ರಕ್ಷಿಸುವಲ್ಲಿ ವಿಫಲವಾದ ತೆಹ್ರೀಕ್-ಎ-ಇನ್ಸಾಫ್ (PTI) ಪ್ರಾಂತೀಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಂತೀಯ ಸರ್ಕಾರವು ಕುಟುಂಬವನ್ನು ರಕ್ಷಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಸ್ವಾತ್ ಉಪ ಆಯುಕ್ತ ಶೆಹಜಾದ್ ಮಹಬೂಬ್ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸಲಾಗಿದೆ.

ಇನ್ನು, ಮಳೆ ಸಂಬಂಧಿತಘಟನೆಗಳಲ್ಲಿ ಪಾಕಿಸ್ತಾನದ ಪಂಜಾಬ್‌ ಭಾಗದಲ್ಲಿ 12 ಜನರು ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಪಂಜಾಬ್‌ನಲ್ಲಿ 41 ಜನರು, ಸಿಂಧ್‌ನಲ್ಲಿ 16 ಹಾಗೂ ಖೈಬರ್-ಪಖ್ತುಂಖ್ವಾದಲ್ಲಿ 6 ಜನರು ಪ್ರತ್ಯೇಕ ಘಟನೆಗಳಲ್ಲಿ ಗಾಯಗೊಂಡಿದ್ದಾರೆ.

ಅಲ್ಲದೆ, ದೇಶಾದ್ಯಂತ 63 ಮನೆಗಳು ಹಾನಿಗೊಳಗಾಗಿವೆ ಮತ್ತು 30 ಪ್ರಾಣಿಗಳು ಸಾವನ್ನಪ್ಪಿವೆ. ಮಳೆ ಮತ್ತು ಪ್ರವಾಹದಲ್ಲಿ ರಸ್ತೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಮತ್ತು ಪುನರ್ವಸತಿ ಪ್ರಯತ್ನಗಳು ನಡೆಯುತ್ತಿವೆ ಎಂದು NDMA ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...