ಹಾರ್ಮುಜ್ ಜಲಸಂಧಿ ತಡೆ ಮುಂದುವರಿಕೆ: ಇರಾನ್‌ ನೂತನ ನಾಯಕ ಮೊಜ್ತಬಾ ಮೊದಲ ಸಂದೇಶ

Date:

ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಆಯ್ಕೆಯಾಗಿರುವ ಮೊಜ್ತಬಾ ಖಮೇನಿ ಅವರ ಮೊದಲ ಅಧಿಕೃತ ಸಂದೇಶವನ್ನು ಇರಾನ್‌ನ ಸರ್ಕಾರಿ ಟಿವಿಯಲ್ಲಿ ಪ್ರಸಾರ ಮಾಡಲಾಗಿದೆ. ತಮ್ಮ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಬಳಿಕ ಅವರು ನೀಡಿರುವ ಮೊದಲ ಹೇಳಿಕೆ ಇದಾಗಿದೆ.

ಮಾಧ್ಯಮಗಳು ವರದಿ ಮಾಡಿರುವ ಈ ಸಂದೇಶದ ಪ್ರಕಾರ, “ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸುವ ಅಸ್ತ್ರವನ್ನು” ಇರಾನ್ ಮುಂದುವರಿಸಬೇಕು ಎಂದು ಖಮೇನಿ ಪ್ರತಿಪಾದಿಸಿದ್ದಾರೆ. ನೆರೆಯ ರಾಷ್ಟ್ರಗಳೊಂದಿಗೆ ಇರಾನ್ ‘ಸ್ನೇಹಮಯ’ ನೀತಿಯನ್ನು ಹೊಂದಿದೆ. ಆದರೆ, ಆ ರಾಷ್ಟ್ರಗಳು ತಮ್ಮಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಮುಚ್ಚಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಅಲ್ಲದೆ, ಆ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ತನ್ನ ದಾಳಿಯನ್ನು ಮುಂದುವರಿಸಲಿದೆ ಎಂದೂ ಅವರು ಎಚ್ಚರಿಸಿದ್ದಾರೆ.

ಯುದ್ಧದಲ್ಲಿ ಹತ್ಯೆಗೀಡಾದ “ಇರಾನಿಯನ್ನರ ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳಲು” ಇರಾನ್ ಎಂದಿಗೂ ಹಿಂಜರಿಯುವುದಿಲ್ಲ ಎಂದು ಮೊಜ್ತಬಾ ಖಮೇನಿ ಗುಡುಗಿದ್ದಾರೆ. ಮಿನಾಬ್‌ನಲ್ಲಿ ಶಾಲೆಯೊಂದರ ಬಳಿ ಅಮೆರಿಕ ನಡೆಸಿದ ದಾಳಿಯಲ್ಲಿ ಸುಮಾರು 110 ಮಕ್ಕಳು ಸೇರಿದಂತೆ ಒಟ್ಟು 168 ಜನರು ಸಾವನ್ನಪ್ಪಿರುವ ಘಟನೆಗೆ ಪ್ರತೀಕಾರದ ಎಚ್ಚರಿಕೆ ಅನ್ವಯಿಸುತ್ತದೆ ಎಂದು ಅವರು ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

​ಅಮೆರಿಕದ ಕ್ಷಿಪಣಿಯೇ ಈ ಶಾಲೆಗೆ ಅಪ್ಪಳಿಸಿದೆ ಎಂದು ಇರಾನ್ ಆರೋಪಿಸಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ಕಳೆದ ವಾರ ಬಿಬಿಸಿಯ ವರದಿಗಾರರಿಗೆ ತಿಳಿಸಿದ್ದರು.

ಇದೇ ವೇಳೆ, ತನ್ನ ಭೂಪ್ರದೇಶದತ್ತ ಇರಾನ್ ಕ್ಷಿಪಣಿಗಳನ್ನು ಉಡಾವಣೆ ಮಾಡಿರುವುದನ್ನು ಪತ್ತೆ ಹಚ್ಚಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ. “ಸ್ವಲ್ಪ ಸಮಯದ ಹಿಂದೆ ಇರಾನ್‌ನಿಂದ ಇಸ್ರೇಲ್ ದೇಶದ ಭೂಪ್ರದೇಶದತ್ತ ಕ್ಷಿಪಣಿಗಳನ್ನು ಉಡಾವಣೆ ಮಾಡಿರುವುದನ್ನು ಐಡಿಎಫ್ ಗುರುತಿಸಿದೆ. ಈ ದಾಳಿಯನ್ನು ಹಿಮ್ಮೆಟ್ಟಿಸಲು ನಮ್ಮ ರಕ್ಷಣಾ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಐಡಿಎಫ್ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....