ದೆಹಲಿಯ ಬಾಂಗ್ಲಾದೇಶದ ರಾಯಭಾರ ಕಚೇರಿ ಎದುರು ಪ್ರತಿಭಟನೆ : ಲಾಠಿ ಚಾರ್ಜ್!

Date:

ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡಿದ್ದು, ಅಲ್ಲಿನ ಅಲ್ವಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಬಾಂಗ್ಲಾದೇಶದ ಹೈಕಮಿಷನ್ ಎದುರು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಂಗ್ಲಾದೇಶಲ್ಲಿ ಹಿಂದೂಗಳ ಮೇಲಿನ ದಾಳಿಯಲ್ಲಿ, ದುಷ್ಕರ್ಮಿಗಳ ಗುಂಪು ಹಿಂದೂಗಳಿಗೆ ಸೇರಿದ ಮನೆಯೊಂದಕ್ಕೆ ಬೆಂಕಿ ಹಚ್ಚಿರುವ ಸುದ್ದಿ ಹೊರಬಿದ್ದಿದೆ. ಇತ್ತೀಚೆಗೆ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಹತ್ಯೆಯನ್ನು ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧದಲ್ಲಿ ಮತ್ತಷ್ಟು ಬಿರುಕನ್ನು ಸೃಷ್ಟಿಸಿದೆ. ದೆಹಲಿಯ ಮತ್ತು ತ್ರಿಪುರಾ ರಾಯಭಾರ ಕಚೇರಿಗಳ ಎದುರು ಹಿಂದೂ ಪರ ಸಂಘಟನೆಗಳು ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾರಾದ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಈ ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಜನಸಾಮಾನ್ಯರ ನಾಯಕ ಷರೀಫ್ ಒಸ್ಮಾನ್ ಹಾದಿ ನಿರ್ಗಮನ

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಒಸ್ಮಾನ್ ಹಾದಿ ಡಿಸೆಂಬರ್ 12 ರಂದು ಢಾಕಾದಲ್ಲಿ ಗುಂಡು ಹಾರಿಸಲ್ಪಟ್ಟ ನಂತರ ಗುರುವಾರ ಸಿಂಗಾಪುರದ ಆಸ್ಪತ್ರೆಯಲ್ಲಿ ನಿಧನರಾದರು. ಶಂಕಿತರನ್ನು ಗುರುತಿಸಲಾಗಿದೆ ಮತ್ತು ಗುಂಡು ಹಾರಿಸಿದ ವ್ಯಕ್ತಿ ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಯಿದೆ ಎಂದು ಬಾಂಗ್ಲಾದೇಶ ಪೊಲೀಸರು ತಿಳಿಸಿದ್ದಾರೆ.

ಹಾದಿಯ ಸಾವು ಢಾಕಾದಲ್ಲಿ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಯಿತು. ಎರಡು ರಾಷ್ಟ್ರೀಯ ದಿನಪತ್ರಿಕೆಗಳ ಕಚೇರಿಗಳನ್ನು ಸುಟ್ಟುಹಾಕಲಾಯಿತು ಮತ್ತು ಭಾರತೀಯ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಗುರಿಯಾಗಿಸಲಾಯಿತು. ಇದರ ಬೆನ್ನಲ್ಲೆ ಒಬ್ಬ ಹಿಂದೂ ವ್ಯಕ್ತಿಯನ್ನು ಸಹ ಜೀವಂತವಾಗಿ ಸುಟ್ಟುಹಾಕಲಾಯಿತು. ಇದಕ್ಕೆ ಆಕ್ರೋಶಗೊಂಡ ಭಾರತದ ಹಿಂದೂಗಳು ಮಂಗಳವಾರ ಬೃಹತ್ ಮಟ್ಟದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದೂ ಯುವಕನ ಹತ್ಯೆ

ಬಾಂಗ್ಲಾದೇಶದಲ್ಲಿ ಕಳೆದ ಎರಡು ದಿನದಿಂದೆ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಬರ್ಬರ ಹತ್ಯೆಯಾಗಿತ್ತು. ಇದರಿಂದ ಬಾಂಗ್ಲಾದೇಶಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಭಾರತ ಕಳವಳ ವ್ಯಕ್ತಪಡಿಸಿದೆ.

ದೀಪು ಹತ್ಯೆಗೆ ನ್ಯಾಯ ದೊರೆಯಬೇಕು ಮತ್ತು ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಭಟನೆಯಲ್ಲಿ ಸೇರಿದ ಹಿಂದೂ ಪ್ರತಿಭಟನಕಾರರರು ಆಗ್ರಹಿಸಿದ್ದಾರೆ. ಪ್ರತಿಭಟನೆಯ ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿತ್ತು. ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಿ, ಕಾರ್ಯಾಚರಣೆಯ ಸುತ್ತಲೂ ಮೂರು ಪದರಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರು.

ಭಾರೀ ಭದ್ರತಾ ಉಪಸ್ಥಿತಿಯ ಹೊರತಾಗಿಯೂ, ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತಲು ಪ್ರಯತ್ನಿಸುತ್ತಿದ್ದಂತೆ ಪೊಲೀಸರು ಜನಸಮೂಹವನ್ನು ನಿಯಂತ್ರಿಸುವಲ್ಲಿ ಅಡಚಣೆ ಎದುರಿಸಿದರು. ಪ್ರತಿಭಟನಾಕಾರರು ಬಾಂಗ್ಲಾದೇಶ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಕೂಗಿದರು ಮತ್ತು ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಬ್ಯಾನರ್‌ಗಳು ಮತ್ತು ಫಲಕಗಳನ್ನು ಪ್ರದರ್ಶಿಸಿದರು.

ಇನ್ನು ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಅರಿತ ಭದ್ರತಾ ಸಿಬ್ಬಂದಿ ಮೊದಲು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಈ ವೇಳೆ ಹಲವು ಪ್ರತಿಭಟನಾಕಾರರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ

ಡಿ.12ರಂದು ವಿದ್ಯಾರ್ಥಿ ನಾಯಕ ಷರೀಫ್ ಒಸ್ಮಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದೇಶದಲ್ಲಿ ಹೊಸದಾಗಿ ಪ್ರತಿಭಟನೆಗಳು ಭುಗಿಲೆದ್ದಿವೆ. ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಹಾದಿ ಪ್ರಮುಖ ಪಾತ್ರ ವಹಿಸಿದ್ದರು.

ಹಾದಿ ಹತ್ಯೆಯಾದ ಬಳಿಕ ಬಾಂಗ್ಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಈ ವೇಳೆ ಹಿಂದು ವ್ಯಕ್ತಿ ದೀಪು ಚಂದ್ರದಾಸ್‌ ಎಂಬುವರನ್ನು ಗುಂಪೊಂದು ಬೆಂಕಿ ಹಚ್ಚಿ ಹತ್ಯೆ ಮಾಡಿತ್ತು. ಡಿ.21ರಂದು ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗಿಯಾದ ಮತ್ತೊಬ್ಬ ನಾಯಕ ಮೋತಲೆಬ್ ಸಿಕ್ದಾರ್ (42) ಹತ್ಯೆ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...