ಕುಸಿಯುತ್ತಿರುವ ರೂಪಾಯಿ ಮೌಲ್ಯ; ದುಬಾರಿಯಾದ ವಿದೇಶಿ ವಿದ್ಯಾರ್ಥಿಗಳ ಜೀವನ ವೆಚ್ಚ

Date:

ಬುಧವಾರ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ 90ರ ಗಡಿದಾಟಿ ಕುಸಿದಿದೆ. ಕಳೆದ ಎಂಟು ತಿಂಗಳಲ್ಲಿ ರೂಪಾಯಿ ಮೌಲ್ಯ ರೂ 84ರಿಂದ ರೂ 90.12ಕ್ಕೆ ಕುಸಿದಿದೆ. ಅಂದರೆ ಶೇ 7ರಷ್ಟು ಕುಸಿದಿದೆ. ರಫ್ತು ಅಗ್ಗವಾಗಿದ್ದರೂ ದುರ್ಬಲ ರೂಪಾಯಿ ಕಚ್ಚಾ ತೈಲದಿಂದ ಎಲೆಕ್ಟ್ರಾನಿಕ್ಸ್ ವರೆಗೆ ಎಲ್ಲವನ್ನೂ ದುಬಾರಿಯನ್ನಾಗಿ ಮಾಡುತ್ತದೆ. ಹೆಚ್ಚು ಪರಿಣಾಮ ಬೀರುವ ವಲಯದಲ್ಲಿ ವಿದೇಶಿ ಶಿಕ್ಷಣವೂ ಸೇರಿದೆ.

ವ್ಯಾಪಾರ ಅಥವಾ ರಫ್ತು ಹೊರತುಪಡಿಸಿ ರೂಪಾಯಿ ಕುಸಿತವು ವಿದೇಶದಲ್ಲಿ ಕಲಿಯುತ್ತಿರುವ ಲಕ್ಷಾಂತರ ಭಾರತೀಯ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ. ರೂಪಾಯಿ ಲೆಕ್ಕದಲ್ಲಿ ಶುಲ್ಕಗಳು ಹೆಚ್ಚಾದಂತೆ, ಶಿಕ್ಷಣ ಸಾಲಗಳು ಹೆಚ್ಚಾಗುತ್ತಿವೆ. ಕಳೆದ ಎಂಟು ತಿಂಗಳಲ್ಲಿ ರೂಪಾಯಿ ಮೌಲ್ಯ ರೂ 84 ರಿಂದ ರೂ 90.12ಕ್ಕೆ ಕುಸಿದಿದೆ. ಅಂದರೆ ಶೇ 7ರಷ್ಟು ಕುಸಿದಿದೆ. ಭಾರತದಲ್ಲಿ ನೆಲೆಸಿರುವ ಕುಟುಂಬಗಳು ಅಮೆರಿಕ, ಕೆನಡಾ, ಇಟಲಿ, ಜರ್ಮನಿ, ಸಿಂಗಾಪುರ ಮತ್ತು ಯುಕೆಯಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗಾಗಿ ಡಾಲರ್ ಲೆಕ್ಕದಲ್ಲಿ ಹೆಚ್ಚು ಖರ್ಚು ಮಾಡಬೇಕಾಗಿ ಬಂದಿದೆ.

ಬುಧವಾರ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ 90ರ ಗಡಿದಾಟಿ ಕುಸಿದಿದೆ. ರಫ್ತು ಅಗ್ಗವಾಗಿದ್ದರೂ ದುರ್ಬಲ ರೂಪಾಯಿ ಕಚ್ಚಾ ತೈಲದಿಂದ ಎಲೆಕ್ಟ್ರಾನಿಕ್ಸ್ ವರೆಗೆ ಎಲ್ಲವನ್ನೂ ದುಬಾರಿಯನ್ನಾಗಿ ಮಾಡುತ್ತದೆ. ಹೆಚ್ಚು ಪರಿಣಾಮ ಬೀರುವ ವಲಯದಲ್ಲಿ ವಿದೇಶಿ ಶಿಕ್ಷಣವೂ ಸೇರಿದೆ. ರೂಪಾಯಿ ಕುಸಿತದಿಂದ ವಿದ್ಯಾರ್ಥಿಗಳ ಜೀವನ ವೆಚ್ಚ, ವಾರ್ಷಿಕ ಬೋಧನಾ ಶುಲ್ಕಗಳಲ್ಲಿ ಲಕ್ಷಗಟ್ಟಲೆ ಏರುಪೇರಾಗಬಹುದು. ಶಿಕ್ಷಣ ಸಾಲಗಳು ಗಣನೀಯವಾಗಿ ಏರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಮ್ರಾನ್ ಖಾನ್ | ಮೈದಾನದ ‘ಕಪ್ತಾನ’ನಿಂದ ಜೈಲಿನ ಕೈದಿಯವರೆಗೆ  

ಭಾರತೀಯ ಶಿಕ್ಷಣ ಸಚಿವಾಲಯದ ವಲಸೆ ಮಂಡಳಿಯ ಅಂಕಿಅಂಶಗಳ ಪ್ರಕಾರ 2024ರಲ್ಲಿ 7.6 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶದಲ್ಲಿ ನೆಲೆಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿದೇಶಿ ಅಧ್ಯಯನ ಮಾಡುವ ಭಾರತೀಯರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. 2020ರ ಕೋವಿಡ್ ವರ್ಷದ 2.6 ಲಕ್ಷ ವಿದ್ಯಾರ್ಥಿಗಳು ವಿದೇಶಿ ಅಧ್ಯಯನಕ್ಕೆ ಹೋಗಿರುವ ಕನಿಷ್ಠ ಪ್ರಮಾಣವನ್ನು ಹೊರತುಪಡಿಸಿದರೆ, 2023ರಲ್ಲಿ 8.95 ಲಕ್ಷಕ್ಕೂ ಹೆಚ್ಚು ಭಾರತೀಯರು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಿದ್ದಾರೆ.

ಬಹುತೇಕ ಅಂಕಿಅಂಶಗಳು ತಿಳಿಸುವ ಪ್ರಕಾರ ಮಧ್ಯಮ ವರ್ಗದ ಕುಟುಂಬಗಳಿಂದ ವಿದೇಶಕ್ಕೆ ವಿದ್ಯಾಭ್ಯಾಸಕ್ಕಾಗಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಿದೆ. ಹೀಗೆ ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಾಗಿ ವಿದೇಶಿ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನಗಳು, ಹಣಕಾಸಿನ ನೆರವು ಅಥವಾ ಶಿಕ್ಷಣ ಸಾಲಗಳನ್ನು ಅವಲಂಬಿಸಿರುತ್ತಾರೆ. ಇದೀಗ ಡಾಲರ್ ವಿರುದ್ಧ ರೂಪಾಯಿ ದುರ್ಬಲಗೊಳ್ಳುತ್ತಾ ಹೋಗುತ್ತಿರುವುದು ವಿದೇಶದಲ್ಲಿ ಕಡಿಮೆ ಬಜೆಟ್ ನಲ್ಲಿ ನೆಲೆಸುವ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದೆ. ಅವರ ಜೀವನಕ್ಕಾಗಿ ಹಣ ಕಳುಹಿಸಬೇಕಾದ ಪೋಷಕರ ಮೇಲೂ ಹೊರೆ ಬೀಳುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...