ರಷ್ಯಾ | ಗುಂಡಿನ ದಾಳಿ; ಪೊಲೀಸರು, ನಾಗರಿಕರು ಸೇರಿ 15ಕ್ಕೂ ಹೆಚ್ಚು ಮಂದಿ ಹತ್ಯೆ

Date:

ರಷ್ಯಾದ ದಕ್ಷಿಣ ರಾಜ್ಯವಾದ ಡಾಗೆಸ್ತಾನ್‌ನಲ್ಲಿ ಭಾನುವಾರ ಶಸ್ತ್ರಸಜ್ಜಿತ ಉಗ್ರಗಾಮಿಗಳ ದಾಳಿಯಿಂದಾಗಿ 15ಕ್ಕೂ ಹೆಚ್ಚು ಪೊಲೀಸರು ಮತ್ತು ಪಾದ್ರಿ ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೋಮವಾರ ಮುಂಜಾನೆ ಡಾಗೆಸ್ತಾನ್‌ನ ಗವರ್ನರ್ ಸೆರ್ಗೆಯ್ ಮೆಲಿಕೋವ್ ವಿಡಿಯೋ ಹೇಳಿಕೆ ಮೂಲಕ ಮಾಹಿತಿ ನೀಡಿದ್ದಾರೆ.

ಬಂದೂಕುಧಾರಿಗಳು ಎರಡು ನಗರಗಳಲ್ಲಿ ಎರಡು ಆರ್ಥೊಡಾಕ್ಸ್ ಚರ್ಚ್‌ಗಳು, ಸಿನಗಾಗ್ ಮತ್ತು ಪೊಲೀಸ್ ಪೋಸ್ಟ್ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಸೋಮವಾರ, ಮಂಗಳವಾರ ಮತ್ತು ಬುಧವಾರ ಈ ಪ್ರದೇಶದಲ್ಲಿ ಶೋಕಾಚರಣೆಯನ್ನು ಘೋಷಿಸಲಾಗಿದೆ.

ಕ್ಯಾಸ್ಪಿಯನ್ ಸಮುದ್ರದಲ್ಲಿರುವ ಡರ್ಬೆಂಟ್ ನಗರದ ಸಿನಗಾಗ್ ಮತ್ತು ಚರ್ಚ್‌ನಲ್ಲಿ ಶಸ್ತ್ರಸಜ್ಜಿತ ಗುಂಪು ಗುಂಡಿನ ದಾಳಿ ನಡೆಸಿದೆ ಎಂದು ಡಾಗೆಸ್ತಾನ್ ಆಂತರಿಕ ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದೆ ಎಂದಿದ್ದ ಮೋದಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲಾಗುತ್ತಿಲ್ಲ: ರಾಹುಲ್ ಗಾಂಧಿ

ಇದಾದ ಬೆನ್ನಲ್ಲೇ ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಘೋಷಿಸಿದ್ದು, ಐವರು ಬಂದೂಕುಧಾರಿಗಳನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಹೇಳಿದೆ. ಇನ್ನು ಈ ದಾಳಿಯಲ್ಲಿ ಎಷ್ಟು ಉಗ್ರಗಾಮಿಗಳು ಭಾಗಿಯಾಗಿದ್ದಾರೆ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಗುಂಡಿನ ದಾಳಿಯ ಹೊಣೆಗಾರಿಕೆಯನ್ನು ಸದ್ಯ ಯಾವುದೇ ಸಂಘಟನೆಗಳು ತೆಗೆದುಕೊಂಡಿಲ್ಲ. ಆದರೆ ಈ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯೊಬ್ಬರ ತಂದೆ ಡಾಗೆಸ್ತಾನಿ ಅಧಿಕಾರಿಯಾಗಿದ್ದು ಅವರನ್ನು ಬಂಧಿಸಲಾಗಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...