ರಷ್ಯಾ-ಉಕ್ರೇನ್ ಶಾಂತಿ ಒಪ್ಪಂದ | ಟ್ರಂಪ್ ಮತ್ತು ಝೆಲೆನ್ಸ್ಕಿ ನಡುವೆ ವಾಗ್ವಾದ

Date:

ರಷ್ಯಾ ಮತ್ತು ಉಕ್ರೇನ್ ನಡುವೆ ಸುಮಾರು 3 ವರ್ಷಗಳಿಂದ ಯುದ್ಧ ನಡೆಯುತ್ತಿದೆ. ಉಕ್ರೇನ್ ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದೆ. ಈ ನಡುವೆ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮದ ಚರ್ಚೆಗಳು ಆರಂಭವಾಗಿವೆ. ಅಮೆರಿಕಕ್ಕೆ ಭೇಟಿ ನೀಡಿದ್ದ ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನಡುವೆ ಇದೇ ವಿಚಾರವಾಗಿ ವಾಗ್ವಾದ ನಡೆದಿದೆ. ಟ್ರಂಪ್‌ ಮಾತಿಗೆ ಮಣೆ ಹಾಕದ ಝೆಲೆನ್ಸ್ಕಿ ಶ್ವೇತಭವನದಿಂದ ಹೊರ ನಡೆದಿದ್ದಾರೆ.

ಶ್ವೇತಭವನದಲ್ಲಿ ಟ್ರಂಪ್ ಮತ್ತು ಝೆಲೆನ್ಸ್ಕಿ ನಡುವೆ ಮಾತುಗಡೆ ನಡೆದಿದೆ. “ನಮ್ಮ ಆಡಳಿತವು ಮೂರು ವರ್ಷಗಳ ಯುದ್ಧವನ್ನು ಕೊನೆಗೊಳಿಸಲು, ರಷ್ಯಾ ಜೊತೆ ಉತ್ತಮ ಸಂಬಂಧ ನಿರ್ಮಿಸಲು ಬಯಸಿದೆ. ರಷ್ಯಾ-ಉಕ್ರೇನ್ ನಡುವೆ ಶಾಂತಿ ನೆಲೆಸಬೇಕೆಂದರೆ ರಾಷ್ಯಾ ಜೊತೆ ಉಕ್ರೇನ್ ನಾನಾ ರೀತಿಯಲ್ಲಿ ರಾಜಿ ಮಾಡಿಕೊಳ್ಳಬೇಕಾಗುತ್ತದೆ” ಎಂದು ಟ್ರಂಪ್ ಹೇಳಿರುವುದಾಗಿ ವರದಿಯಾಗಿದೆ.

ಈ ಹಿಂದೆ, ಬೈಡನ್ ಆಡಳಿತದಲ್ಲಿ ಅಮೆರಿಕವು ರಷ್ಯಾ ವಿರುದ್ಧದ ಹೋರಾಟಕ್ಕೆ ಉಕ್ರೇನ್‌ಗೆ ಶತಕೋಟಿ ಡಾಲರ್ ಮೌಲ್ಯದ ಅಮೆರಿಕನ್ ಶಸ್ತ್ರಾಸ್ತ್ರಗಳು, ಲಾಜಿಸ್ಟಿಕ್ಸ್ ಸೇರಿದಂತೆ ನಾನಾ ರೀತಿಯ ಬೆಂಬಲ ನೀಡಿತ್ತು. ಆದರೆ, ಟ್ರಂಪ್‌ ಆಡಳಿತದಲ್ಲಿ ಅಮೆರಿಕ ಉಕ್ರೇನ್‌ಅನ್ನು ಮೌನಗೊಳಿಸಿ, ರಷ್ಯಾ ಜೊತೆ ವ್ಯವಹಾರ ಬೆಳೆಸಲು ಮುಂದಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಂಪ್ ಮಾತಿಗೆ ಬಗ್ಗದ ಝೆಲೆನ್ಸ್ಕಿ ಅವರು ಟ್ರಂಪ್‌ ಜೊತೆ ವಾಗ್ವಾದ ನಡೆಸಿದ್ದಾರೆ. “ರಷ್ಯಾದೊಂದಿಗೆ ಯಾವುದೇ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ. ಕಳೆದ 3 ವರ್ಷಗಳಲ್ಲಿ ರಷ್ಯಾ 25 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ರಷ್ಯಾ ಜೊತೆ ಅಮೆರಿಕ ಯಾವುದೇ ಒಪ್ಪಂದ ಮಾಡಿಕೊಳ್ಳಬಾರದು” ಎಂದು ಝೆಲೆನ್ಸ್ಕಿ ಒತ್ತಾಯಿಸಿದ್ದಾರೆ.

“ಅಮೆರಿಕದ ಸಹಾಯಕ್ಕೆ ಝೆಲೆನ್ಸ್ಕಿ ಕೃತಜ್ಞರಾಗಿಲ್ಲ. ಅಮೆರಿಕದಿಂದಾಗಿಯೇ ನೀವು ಸುರಕ್ಷಿತರಾಗಿದ್ದೀರಿ. ಲಕ್ಷಾಂತರ ಜೀವಗಳ ಜೊತೆ ಆಟ ಆಡುತ್ತಿದ್ದೀರಿ. ನಿಮ್ಮ ದೇಶ ಅಪಾಯದಲ್ಲಿದೆ. ನೀವು ಅಂತಿಮವಾಗಿ ರಷ್ಯಾ ಜೊತೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ” ಎಂದು ಝೆಲೆನ್ಸ್ಕಿಗೆ ಟ್ರಂಪ್ ಹೇಳಿದ್ದಾರೆ.

ಅಮೆರಿಕವನ್ನು ಝೆಲೆನ್ಸ್ಕಿ ಅವಮಾನಿಸಿದ್ದಾರೆ. ಅವರು ಶಾಂತಿ ಒಪ್ಪಂದಕ್ಕೆ ಸಿದ್ದವಿದ್ದರೆ ಮಾತ್ರವೇ ಅಮೆರಿಕಗೆ ಬರಲಿ ಎಂದೂ ಟ್ರಂಪ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...