ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

Date:

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸರಬ್ಜಿತ್ ಸಿಂಗ್‌ನನ್ನು 2013 ಏಪ್ರಿಲ್‌ 23ರಂದು  ಅಮೀರ್‌ ಹಾಗೂ ಆತನ ಸಹಚರರು ಲಾಹೋರ್‌ ಜೈಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಸರಬ್ಜಿತ್ ಮೇ 2, 2013ರಂದು ಮೃತಪಟ್ಟಿದ್ದರು. ಸಾವಿಗೂ ಮುನ್ನ ಸರಬ್ಜಿತ್ ಪಾಕ್‌ನ ಜೈಲುಗಳಲ್ಲಿ 23 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಸಾಕ್ಷ್ಯಧಾರ ಕೊರತೆಯಿಂದ ಅಮೀರ್‌ ಸರ್ಪರಾಜ್‌ನನ್ನು ಪಾಕ್‌ನ ಕೋರ್ಟ್ 2018ರಲ್ಲಿ ನಿರಪರಾಧಿ ಎಂದು ತೀರ್ಪು ನೀಡಿತ್ತು.

ಗೂಢಾಚಾರ ಆರೋಪ ಹಾಗೂ ಪಾಕ್‌ನ ಪಂಜಾಬ್‌ ಪ್ರಾಂತ್ಯದಲ್ಲಿ 14 ನಾಗರಿಕರನ್ನು ಕೊಂದ ಆರೋಪದ ಮೇಲೆ ಭಾರತದ ಪಂಜಾಬ್‌ನ ನಿವಾಸಿ ಸರಬ್ಜಿತ್ ಸಿಂಗ್‌ನನ್ನು 1990ರಲ್ಲಿ ಬಂಧಿಸಲಾಗಿತ್ತು. 1991ರಲ್ಲಿ ಪಾಕ್‌ನ ಸೇನಾ ಕಾಯ್ದೆಯಡಿ ಸರಬ್‌ಜಿತ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ಸರಬ್‌ಜಿತ್‌ಗೆ ಗಲ್ಲು ಶಿಕ್ಷೆ ನೀಡಿರುವುದನ್ನು ಆತನ ಕುಟುಂಬ ಹಾಗೂ ಭಾರತ ಸರ್ಕಾರ ನಿರಾಕರಿಸಿತ್ತು. ಕೃಷಿ ಮಾಡುವ ಸಂದರ್ಭ ಅರಿವಿಲ್ಲದೆ ಸರಬ್ಜಿತ್ ಪಾಕ್‌ ಗಡಿ ಪ್ರವೇಶಿಸಿದ್ದರು ಎಂದು ಕುಟುಂಬದ ಸದಸ್ಯರು ಗೂಢಾಚಾರಿ ಆರೋಪವನ್ನು ತಳ್ಳಿ ಹಾಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...