ಸೌದಿ ಅರೇಬಿಯಾ | ಭೀಕರ ಅಪಘಾತ: ಉಮ್ರಾ ಯಾತ್ರೆಗೆ ತೆರಳಿದ್ದ 42 ಭಾರತೀಯರು ಮೃತ್ಯು

Date:

ಸೌದಿ ಅರೇಬಿಯಾದ ಮೆಕ್ಕಾಗೆ ಉಮ್ರಾ ಯಾತ್ರೆಗೆಂದು ತೆರಳಿದ್ದ ವೇಳೆ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ 42 ಭಾರತೀಯರು ಸಜೀವ ದಹನವಾಗಿರುವ ದಾರುಣ ಘಟನೆ ವರದಿಯಾಗಿದೆ.

ಮೆಕ್ಕಾದ ಕಾಬಾದಲ್ಲಿ ಉಮ್ರಾ ಯಾತ್ರೆ ಮುಗಿಸಿ ಮದೀನಾಕ್ಕೆ ತೆರಳುತ್ತಿದ್ದ ವೇಳೆ ಬಸ್ ಹಾಗೂ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಈ ಬಸ್‌ನಲ್ಲಿ 43 ಹೈದರಾಬಾದ್‌ ಮೂಲದ ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಈ ಪೈಕಿ ಓರ್ವ ಮಾತ್ರ ಬದುಕುಳಿದಿರುವುದಾಗಿ ವರದಿಯಾಗಿದೆ.

ಮೃತರಲ್ಲಿ 20 ಮಹಿಳೆಯರು ಮತ್ತು ಹತ್ತು ವರ್ಷದೊಳಗಿನ 11 ಮಕ್ಕಳು ಕೂಡ ಇದ್ದರೆಂದು ಪ್ರಾಥಮಿಕ ಮಾಹಿತಿ ದೊರೆತಿದ್ದು, ಎಲ್ಲರೂ ಕೂಡ ಹೈದರಾಬಾದ್‌ ಮೂಲದವರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೌದಿಯ ಕಾಲಮಾನ ರಾತ್ರಿ 11 ಗಂಟೆ ಸುಮಾರಿಗೆ (ಭಾರತೀಯ ಕಾಲಮಾನ ಬೆಳಗಿನ ಜಾವ 1.30) ಈ ಅಪಘಾತ ಸಂಭವಿಸಿದೆ. ಮಕ್ಕಾದಲ್ಲಿ ತೀರ್ಥಯಾತ್ರೆ ಮುಗಿಸಿ ಮದೀನಾ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬದ್ರ್ ಮತ್ತು ಮದೀನಾ ನಡುವಿನ ಮುಪರಹತ್ ಎಂಬ ಸ್ಥಳದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ಎಲ್ಲಾ ಯಾತ್ರಿಕರು ಹೈದರಾಬಾದ್ ಮೂಲದವರು ಎಂದು ಉಮ್ರಾ ಕಂಪನಿ ಕೂಡ ದೃಢಪಡಿಸಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಪಡೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿದರಾದರೂ, ಸುಮಾರು ಎರಡು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಯಲ್ಲಿ ಓರ್ವ ಯುವಕ ಮಾತ್ರ ಬದುಕುಳಿದಿದ್ದು, ಆತನನ್ನು 25 ವರ್ಷದ ಅಬ್ದುಲ್ ಶುಹೈಬ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭದಲ್ಲಿ ಯಾತ್ರಿಕರೆಲ್ಲರೂ ನಿದ್ರೆಯಲ್ಲಿದ್ದದ್ದರಿಂದ ಈ ಭಾರೀ ಅವಘಡ ಸಂಭವಿಸಿದೆ.

ಯಾತ್ರಿಕರಿಗೆ ಉಮ್ರಾ ವೀಸಾ ಮತ್ತು ಪ್ರಯಾಣದ ವ್ಯವಸ್ಥೆ ಮಾಡಿದ್ದ ಏಜೆನ್ಸಿಗಳು ಮುಂದಿನ ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಜ್ ಮತ್ತು ಉಮ್ರಾ ಸಚಿವಾಲಯದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

Feature Photo ಕೃಪೆ: Mediaone Channel Malayalam

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...