ಸೌದಿ ಅರೇಬಿಯಾ | ಬಸ್‌ಗಳ ನಡುವೆ ಅಪಘಾತ: ಅನಿವಾಸಿ ಉದ್ಯೋಗಿ ಉಳ್ಳಾಲದ ಯುವಕ ಮೃತ್ಯು

Date:

ಸೌದಿ ಅರೇಬಿಯಾದಲ್ಲಿ ಎರಡು ಬಸ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ನಿವಾಸಿ, ಅನಿವಾಸಿ ಉದ್ಯೋಗಿಯಾಗಿದ್ದ ಯುವಕನೋರ್ವ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮೃತ ಯುವಕನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ.

ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸಕ್ಕಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೌದಿ ಅರೇಬಿಯಾದ ಜುಬೈಲ್‌ನಲ್ಲಿರುವ ಪಾಲಿಟೆಕ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಬ್ದುಲ್ ರಾಝಿಕ್, ಸೆಪ್ಟೆಂಬರ್ 14 ರ ಸಂಜೆ ಕೆಲಸಕ್ಕೆ ತೆರಳುತ್ತಿದ್ದಾಗ ಬಸ್‌ನಲ್ಲಿ ಅಪಘಾತಕ್ಕೀಡಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ರಾಝಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಹಮ್ಮದ್ ಅವರ ಕಿರಿಯ ಮಗ ರಾಝಿಕ್ ಸಿವಿಲ್ ಎಂಜಿನಿಯರಿಂಗ್ ಪದವೀಧರರಾಗಿದ್ದು, ವಿದೇಶಕ್ಕೆ ಹೋಗಿದ್ದರು. ಸೌದಿ ಅರೇಬಿಯಾದ ಜುಬೈಲ್‌ನಲ್ಲಿರುವ ಪಾಲಿಟೆಕ್ ಎಂಬ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಅವರು ಜುಲೈ 11 ರಂದು ಮನೆಗೆ ಮರಳಿದ್ದರು.

ಒಂದು ತಿಂಗಳ ರಜೆಯ ನಂತರ, ಅವರು ಆಗಸ್ಟ್ 15 ರಂದು ಎರಡನೇ ಬಾರಿಗೆ ವಿದೇಶಕ್ಕೆ ತೆರಳಿದ್ದರು.

ರಾಝಿಕ್ ಅವರ ಒಬ್ಬ ಸಹೋದರ ಮತ್ತು ಓರ್ವ ಸಹೋದರಿ ಅನಾರೋಗ್ಯದ ಕಾರಣ ಮೊದಲೇ ನಿಧನರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಮೃತ ಯುವಕ ಪೋಷಕರು, ಮೂವರು ಸಹೋದರಿಯರು, ಒಬ್ಬ ಸಹೋದರ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...