ಸೌದಿ ಅರೇಬಿಯಾ | ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಸೇರಿ ಎಲ್ಲದಕ್ಕೂ ಏಕರೂಪದ ದರ ನಿಗದಿಪಡಿಸಿದ ಗ್ಯಾಸ್ಕೊ

Date:

ಸೌದಿ ಅರೇಬಿಯಾದ ರಾಷ್ಟ್ರೀಯ ಅನಿಲ ಮತ್ತು ಕೈಗಾರಿಕೀಕರಣ ಕಂಪನಿ (GASCO)ಯು ಗೃಹಬಳಕೆಯ ಅನಿಲ ಸಿಲಿಂಡರ್‌ಗಳು ಸೇರಿದಂತೆ ಎಲ್ಲ ಎಲ್‌ಪಿಜಿ ಸೇವೆಗೆ ಏಕರೂಪದ ದರ ನಿಗದಿಪಡಿಸಿದ್ದು, ಇಂದಿನಿಂದಲೇ(ಜನವರಿ 1,2026) ಜಾರಿಗೆ ತರುವುದಾಗಿ ಘೋಷಿಸಿದೆ.

ನಿಗದಿ ಪಡಿಸಿರುವ ಹೊಸ ಬೆಲೆಯ ಪ್ರಕಾರ, 11 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯು ಇನ್ನು ಮುಂದೆ ಸೌದಿ ರಿಯಾಲ್ 26.23(630 ರೂಪಾಯಿ) ಆಗಿದ್ದರೆ, 5 ಕೆಜಿ ಸಿಲಿಂಡರ್ ಬೆಲೆ 11.93(286 ರೂಪಾಯಿ) ಆಗಲಿದೆ ಎಂದು ಗ್ಯಾಸ್ಕೊ ತಿಳಿಸಿದೆ.

ಸೆಂಟ್ರಲ್ ಅನಿಲ ಟ್ಯಾಂಕ್‌ಗಳಿಗೆ ಭರ್ತಿ ಮಾಡುವ ಸುಂಕವನ್ನು ಲೀಟರ್‌ಗೆ 1.1770 ಎಂದು ನಿಗದಿಪಡಿಸಲಾಗಿದೆ. ಎಲ್ಲಾ ಬೆಲೆಗಳು ಸಾರಿಗೆ ವೆಚ್ಚಗಳು ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಒಳಗೊಂಡಿವೆ ಎಂದು ಗ್ಯಾಸ್ಕೊ ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹೊಸ ವರ್ಷದ ಸಂಭ್ರಮಕ್ಕೆ ಕತ್ತಲೆ ಆವರಿಸಿದ ದುರಂತ: ಸ್ವಿಟ್ಜರ್ಲೆಂಡ್‌ನ ಬಾರ್‌ನಲ್ಲಿ ಸ್ಫೋಟ, ಹಲವರ ಸಾವು

ಪ್ರಾದೇಶಿಕ ಬೆಲೆ ಅಂತರವನ್ನು ಕಡಿಮೆ ಮಾಡುವುದು ಈ ಹೊಸ ನಿರ್ಧಾರದ ಉದ್ದೇಶವಾಗಿದೆ. ಈ ನೂತನ ಕ್ರಮವು ರಾಜ್ಯದ ವಿವಿಧ ಪ್ರದೇಶಗಳ ನಡುವಿನ ಬೆಲೆ ಅಸಮಾನತೆಗಳನ್ನು ನಿವಾರಿಸುವ ಮತ್ತು ಗ್ರಾಹಕರಿಗೆ ಒದಗಿಸುವ ಸೇವೆಗಳ ಗುಣಮಟ್ಟ ಮತ್ತು ಸ್ಥಿರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಗ್ಯಾಸ್ಕೊ ಮಾಹಿತಿ ನೀಡಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...