ಸೌದಿ ಅರೇಬಿಯಾ | ವಿಸಿಟಿಂಗ್ ವೀಸಾದಲ್ಲಿರುವವರಿಗೆ ‘ವಿಸಿಟರ್ ಐಡಿ’ ಬಳಸಿ ಬ್ಯಾಂಕ್ ಖಾತೆ ತೆರೆಯಲು ಅವಕಾಶ

Date:

ಸೌದಿ ಅರೇಬಿಯಾಕ್ಕೆ ವಿಸಿಟಿಂಗ್ ವೀಸಾದ ಮೂಲಕ ಭೇಟಿ ನೀಡುವವರು ಇನ್ನು ಮುಂದೆ ‘ವಿಸಿಟರ್ ಐಡಿ’ ಬಳಸಿ ಬ್ಯಾಂಕ್ ಖಾತೆ ತೆರೆಯಲು ಸೌದಿ ಸೆಂಟ್ರಲ್ ಬ್ಯಾಂಕ್ (SAMA) ಅವಕಾಶ ಕಲ್ಪಿಸಿದೆ.

ಪ್ರವಾಸಿಗರು ಹಾಗೂ ಸೌದಿಗೆ ಭೇಟಿ ನೀಡುವವರು ತಮ್ಮ “ವಿಸಿಟರ್ ಐಡಿ” ಬಳಸಿ ಬ್ಯಾಂಕ್ ಖಾತೆಗಳನ್ನು ತೆರೆಯಬಹುದು ಎಂದು ಸೌದಿ ಸೆಂಟ್ರಲ್ ಬ್ಯಾಂಕ್ (SAMA) ಭಾನುವಾರ ಘೋಷಿಸಿದೆ. ಈ ನಿರ್ಧಾರವು ರಾಜ್ಯದಲ್ಲಿ ವಾಸಿಸದವರಿಗೆ ಮತ್ತು ವಿಸಿಟಿಂಗ್ ವೀಸಾದಲ್ಲಿರುವವರಿಗಾಗಿ ಆರ್ಥಿಕ ಸೇವೆಯ ವಿಚಾರದಲ್ಲಿ ಗಮನಾರ್ಹ ಬದಲಾವಣೆಯನ್ನು ತರಲಿದೆ.

ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ಪ್ರವಾಸಿಗರಿಗೆ ‘ವಿಸಿಟರ್ ಐಡಿ’ಯನ್ನು ನೀಡುವ ಸೇವೆಯನ್ನು ಒದಗಿಸುತ್ತಿದೆ. ಇದನ್ನು ಅಧಿಕೃತ ಗುರುತಿನ ದಾಖಲೆಯಾಗಿ ಪರಿಗಣಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕುಗಳು ಇದನ್ನು ಅಧಿಕೃತ ಡಿಜಿಟಲ್ ವೇದಿಕೆಗಳ ಮೂಲಕ ಪರಿಶೀಲಿಸಬಹುದು ಎಂದು ಸೌದಿ ಸೆಂಟ್ರಲ್ ಬ್ಯಾಂಕ್ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಸೌದಿಯ ಕೇಂದ್ರ ಬ್ಯಾಂಕ್ ಪ್ರಕಾರ, ಈ ನೂತನ ಹೆಜ್ಜೆಯು ಬ್ಯಾಂಕುಗಳಿಗೆ ವಿಶಾಲವಾದ ಗ್ರಾಹಕರಿಗೆ ಸೇವೆ ಸಲ್ಲಿಸಲು ಅನುವು ಮಾಡಿಕೊಡುತ್ತದೆ ಮತ್ತು ಭೇಟಿ ನೀಡುವವರಿಗೆ ಉತ್ತಮ ಸೇವೆಯನ್ನು ನೀಡಲು ಅವಕಾಶವನ್ನು ಒದಗಿಸಲಿದೆ. ಅಂತಾರಾಷ್ಟ್ರೀಯ ನಿಯಮಗಳಿಗೆ ಅನುಗುಣವಾಗಿ ಖಾತೆ ತೆರೆಯುವ ನಿಯಮಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನ | ಬಲೂಚಿಸ್ತಾನದಲ್ಲಿ ಬಾಂಬ್ ದಾಳಿ: 10 ಮಂದಿ ಸಾವು

ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇನ್ನಷ್ಟು ಬದಲಾವಣೆ ತಂದು ಜನಸ್ನೇಹಿ ಸೇವೆಯನ್ನು ನೀಡಲು, ಬ್ಯಾಂಕಿಂಗ್ ಪ್ರಕ್ರಿಯೆಗಳನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಡಿಜಿಟಲ್ ರೂಪಾಂತರಕ್ಕೆ ಒಗ್ಗಿಕೊಳ್ಳುವುದಕ್ಕಾಗಿ ಈ ಹೊಸ ನಿಯಮವನ್ನು ನವೀಕರಣದ ಭಾಗವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಸೌದಿ ಸೆಂಟ್ರಲ್ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...